Sunday, May 5, 2024
Homeರಾಷ್ಟ್ರೀಯಮರಣೋತ್ತರ ಭಾರತ ರತ್ನ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ ಮುರ್ಮು

ಮರಣೋತ್ತರ ಭಾರತ ರತ್ನ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ ಮುರ್ಮು

ನವದೆಹಲಿ, ಮಾ 30 (ಪಿಟಿಐ) : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಮಾಜಿ ಪ್ರಧಾನಿಗಳಾದ ಪಿ ವಿ ನರಸಿಂಹರಾವ್ ಮತ್ತು ಚೌಧರಿ ಚರಣ್ ಸಿಂಗ್, ಕೃಷಿ ವಿಜ್ಞಾನಿ ಎಂಎಸ್ ಸ್ವಾಮಿನಾಥನ್ ಮತ್ತು ಎರಡು ಬಾರಿ ಬಿಹಾರದ ಮಾಜಿ ಮುಖ್ಯಮಂತ್ರಿಗಳಾಗಿದದ ಕರ್ಪೂರಿ ಠಾಕೂರ್ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನ ಪ್ರದಾನ ಮಾಡಿದರು. ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಮೃತರ ಕುಟುಂಬ ವರ್ಗದವರಿಗೆ ಮರಣೋತ್ತರವಾಗಿ ಭಾರತ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಮಾಜಿ ಪ್ರಧಾನಿ ರಾವ್ ಅವರ ಪುತ್ರ ಪಿ ವಿ ಪ್ರಭಾಕರ್ ರಾವ್ ಅವರು ರಾಷ್ಟ್ರಪತಿಗಳಿಂದ ತಮ್ಮ ತಂದೆಗೆ ಪ್ರದಾನ ಮಾಡಿದ ಪ್ರಶಸ್ತಿಯನ್ನು ಸ್ವೀಕರಿಸಿದರು.ಸಿಂಗ್ ಅವರ ಮೊಮ್ಮಗ ಮತ್ತು ರಾಷ್ಟ್ರೀಯ ಲೋಕದಳ (ಆರ್ಎಲ್ಡಿ) ಅಧ್ಯಕ್ಷ ಜಯಂತ್ ಚೌಧರಿ ಅವರು ಮುರ್ಮು ಅವರಿಂದ ಗೌರವವನ್ನು ಸ್ವೀಕರಿಸಿದರು.

ಸ್ವಾಮಿನಾಥನ್ ಅವರ ಪುತ್ರಿ ನಿತ್ಯಾ ರಾವ್ ಮತ್ತು ಠಾಕೂರ್ ಅವರ ಪುತ್ರ ರಾಮ್ ನಾಥ್ ಠಾಕೂರ್ ರಾಷ್ಟ್ರಪತಿಗಳಿಂದ ಪ್ರಶಸ್ತಿ ಸ್ವೀಕರಿಸಿದರು. ಸಮಾರಂಭದಲ್ಲಿ ಉಪರಾಷ್ಟ್ರಪತಿ ಜಗದೀಪ್ ಧಂಖರ್, ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು.

ಸರ್ಕಾರವು ಈ ವರ್ಷ ಐದು ಭಾರತ ರತ್ನ ಪ್ರಶಸ್ತಿಗಳನ್ನು ಘೋಷಿಸಿದೆ, ಇದರಲ್ಲಿ ಒಂದು ಭಾರತೀಯ ಜನತಾ ಪಕ್ಷದ (ಬಿಜೆಪಿ) „ೀಮಂತ ಮತ್ತು ಮಾಜಿ ಉಪ ಪ್ರಧಾನಿ ಎಲ್ ಕೆ ಅಡ್ವಾಣಿಯವರಿಗೆ ಸೇರಿದೆ.

RELATED ARTICLES

Latest News