Saturday, October 5, 2024
Homeರಾಜ್ಯಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ಮಂಜೂರು

ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ಮಂಜೂರು

ಬೆಂಗಳೂರು,ಜೂ.18– ಕೆ.ಆರ್‌ನಗರ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣರಿ ಅವರಿಗೆ ಹೈಕೋರ್ಟ್‌ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.ನ್ಯಾಯಮೂರ್ತಿ ಕೃಷ್ಣ.ಎಸ್‌‍ ದೀಕ್ಷಿತ್‌ ಅವರಿದ್ದ ಹೈಕೋರ್ಟ್‌ನ ಏಕಸದಸ್ಯ ಪೀಠ ವಾದ-ಪ್ರತಿವಾದ ಆಲಿಸಿ ಕಾಯ್ದಿರಿಸಿದ ಈ ತೀರ್ಪನ್ನು ನೀಡಿ, ವಿಚಾರಣೆಗೆ ಹಾಜರಾಗಬೇಕು. ವಿಚಾರಣೆಗೆ ಕರೆದಾಗ ಮೈಸೂರು ಮತ್ತು ಹಾಸನಕ್ಕೂ ಬರಬೇಕು.

ಎಂದು ಸೂಚನೆ ನೀಡಿ ಭವಾನಿ ರೇವಣ್ಣ ಅವರಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದರು.ಭವಾನಿ ರೇವಣ್ಣ ಅವರು ಎಸ್‌‍ಐಟಿಯ 85 ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಹೀಗಾಗಿ ತನಿಖೆಗೆ ಸಹಕರಿಸಿಲ್ಲ ಎಂಬ ವಾದವನ್ನು ಒಪ್ಪಲು ಸಾಧ್ಯವಿಲ್ಲ. ಪೊಲೀಸರಿಗೆ ಬೇಕಾದಂತಹ ಉತ್ತರ ಕೊಡಬೇಕೆಂದಿಲ್ಲ ಎಂದು ಪ್ರಾಸಿಕ್ಯೂಷನ್‌ ವಾದವನ್ನು ತಳ್ಳಿ ಹಾಕಿರುವ ನ್ಯಾಯಾಲಯ ರೇವಣ್ಣ ಅವರಿಗೆ ಜಾಮೀನು ಮಂಜೂರು ಮಾಡಿದರು.

ಮಹಿಳೆ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರು ತನಿಖೆಗೆ ಅಸಹಕಾರ ತೋರುತ್ತಿದ್ದಾರೆ. ನ್ಯಾಯಾಲಯ ನೀಡಿದ ನಿರ್ದೇಶನದಂತೆ ಅವರು ತನಿಖೆಗೆ ಸಹಕಾರ ನೀಡುತ್ತಿಲ್ಲ. ಇದರಿಂದ ತನಿಖೆ ಮುಂದುವರೆಸಲಾಗುತ್ತಿಲ್ಲ. ಅವರು ತನಿಖೆಯ ದಿಕ್ಕು ತಪ್ಪಿಸುತ್ತಿದ್ದಾರೆ. ಪ್ರಶ್ನೆಗಳಿಗೆ ಸಮಂಜಸ ಉತ್ತರ ನೀಡುತ್ತಿಲ್ಲ.

ಹೀಗಾಗಿ ಅವರನ್ನು ಬಂಧಿಸಿಯೇ ವಿಚಾರಣೆಗೆ ಒಳಪಡಿಸಬೇಕಾಗಿದೆ. ಹಾಗಾಗಿ ಅವರಿಗೆ ನೀಡಿರುವ ಮಧ್ಯಂತರ ನಿರೀಕ್ಷಣಾ ಜಾಮೀನನ್ನು ರದ್ದುಪಡಿಸಬೇಕೆಂದು ಸರ್ಕಾರಿ ಪರ ವಕೀಲರು ಮನವಿ ಮಾಡಿದ್ದರು. ಮಹಿಳೆಯ ಅಪಹರಣದ ಹಿಂದಿನ ಸೂತ್ರಧಾರಿ ಅವರೇ ಆಗಿದ್ದಾರೆ. ಎಲ್ಲ ಆರೋಪಿಗಳೊಂದಿಗೆ ಅವರು ಸಂಪರ್ಕದಲ್ಲಿದ್ದಾರೆ. ಅದಕ್ಕೆ ಸಾಕ್ಷಿಗಳಿವೆ. ಅವರು ಸರಿಯಾದ ಉತ್ತರ ನೀಡುತ್ತಿಲ್ಲ ಎಂದು ಹೇಳಿದ್ದರು.

ಆಗ ನ್ಯಾಯಮೂರ್ತಿಗಳು ಪ್ರಾಸಿಕ್ಯೂಷನ್‌ ಕೇಳಿದ ಪ್ರಶ್ನೆಗೆ ಉತ್ತರ ಹೇಳುವುದು, ಬಿಡುವುದು ಆರೋಪಿಗೆ ಬಿಟ್ಟ ವಿಚಾರ. ಜೊತೆಗೆ ನೀವು ಹೀಗೆ ಉತ್ತರ ನೀಡಬೇಕೆಂದು ಬಯಸುವುದು ಸರಿಯಲ್ಲ. ಅನಗತ್ಯ ಪ್ರಶ್ನೆಗಳನ್ನು ಕೇಳಿದಾಗ ಅವರು ಉತ್ತರ ನೀಡದೇ ಇರಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿ ತನಿಖೆಯ ವೇಳೆ ಕೇಳಲಾದ ಪ್ರಶ್ನೆಗಳು ಮತ್ತು ಉತ್ತರಗಳ ಪ್ರತಿಯನ್ನು ನೀಡುವಂತೆ ಸೂಚಿಸಿ, ವಾದ-ಪ್ರತಿವಾದ ಆಲಿಸಿ ಇಂದಿಗೆ ಕಾಯ್ದಿರಿಸಿದ ತೀರ್ಪನ್ನು ಪ್ರಕಟಿಸಿದ ನ್ಯಾಯಮೂರ್ತಿ ದೀಕ್ಷಿತ್‌ ಅವರು , ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ್ದಾರೆ.

RELATED ARTICLES

Latest News