ಹಾಸನ ಜೆಡಿಎಸ್ ಟಿಕೆಟ್‌ಗೆ ಜಿದ್ಧಾಜಿದ್ದಿ

Social Share

ಹಾಸನ, ಜ.25- ಹಾಸನ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿ ನಾನೇ ಎಂದು ಜಿ.ಪಂ.ಮಾಜಿ ಸದಸ್ಯೆ ಭವಾನಿ ರೇವಣ್ಣ ಸಮಾರಂಭ ಒಂದರಲ್ಲಿ ಹೇಳಿಕೊಂಡಿದ್ದಾರೆ. ತಾಲ್ಲೂಕಿನ ಕಕ್ಕೇನಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಅಣ್ಣಪ್ಪ ಸ್ವಾಮಿ ದೇವಾಲಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ ಅವರು ಜೆಡಿಎಸ್‍ನಿಂದ ನನ್ನನ್ನು ಅಭ್ಯರ್ಥಿ ಮಾಡಬೇಕು ಎಂದು ಎಲ್ಲರೂ ಮಾತನಾಡಿಕೊಂಡು ನಿರ್ಣಯ ತೆಗೆದುಕೊಂಡಿದ್ದಾರೆ. ಸ್ವಲ್ಪ ದಿನಗಳಲ್ಲೇ ನನ್ನ ಹೆಸರು ಘೋಷಣೆಯಾಗುವ ಸಾಧ್ಯತೆ ಇದೆ ಎಂದಿದ್ದಾರೆ.

ಜನರ ಪರಿಚಯ ಇದ್ದರೆ, ಊರಿನ ಪರಿಚಯ ಆಗುತ್ತದೆ. ಮುಂದಿನ ದಿನಗಳಲ್ಲಿ ಕೆಲಸ ಮಾಡಲು ನನಗೂ ಒಳ್ಳೆಯದು, ಅನುಕೂಲ ಆಗಲಿದೆ.ಭಗವಂತ ನನಗೆ ಆಶೀರ್ವಾದ ಮಾಡಲಿ ಎಂದು ಬೇಡುವೆ. ಮತ್ತೊಮ್ಮೆ ಈ ಊರಿಗೆ ಬರುವೆ, ನಿಮ್ಮನ್ನು ಮತ್ತೆ ಭೇಟಿ ಮಾಡುವೆ ಎಂದು ಸ್ಥಳೀಯರಿಗೆ ಭರವಸೆ ನೀಡಿದ್ದಾರೆ.

ಇನ್ಮುಂದೆ ವಿಮಾನದಲ್ಲಿ ಕೇಳಿದಷ್ಟು ಮದ್ಯ ಸಿಗಲ್ಲ

ಘೋಷಣೆಯಾಗಿಲ್ಲ:
ಹಾಸನ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ಜೆಡಿಎಸ್ ಟಿಕೆಟ್ ಇನ್ನೂ ಸಹ ಅಂತಿಮವಾಗಿಲ್ಲ ಎಂದು ಸಂಭಾವ್ಯ ಅಭ್ಯರ್ಥಿ ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಎಚï.ಪಿ ಸ್ವರೂಪ್ ಸ್ಪಷ್ಟಪಡಿಸಿದ್ದಾರೆ.

ಭವಾನಿ ರೇವಣ್ಣ ಅವರು ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಸ್ವರೂಪ ಅವರು ಹಾಸನ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಘೋಷಣೆ ಸಂಬಂಧ ವರಿಷ್ಠರಾದ ಎಚï. ಡಿ ರೇವಣ್ಣ ಅವರು ಅಕೃತವಾಗಿ ಘೋಷಣೆ ಮಾಡಿಲ್ಲ.ಹಾಸನ ಜಿಲ್ಲಾಯ ಹಾಲಿ ಶಾಸಕರ ಕ್ಷೇತ್ರಗಳನ್ನು ಹೊರತುಪಡಿಸಿ ಹಾಸನ , ಅರಸೀಕೆರೆ, ಅರಕಲಗೂಡು ವಿಧಾನಸಭಾ ಕ್ಷೇತ್ರಗಳ ಟಿಕೆಟ್ ಅಂತಿಮಗೊಳಿಸುವ ಸಂಬಂಧ ಆಯಾ ಕ್ಷೇತ್ರದ ಪಕ್ಷದ ಹಿರಿಯರು, ಮುಖಂಡರು ವರಿಷ್ಠರ ತೀರ್ಮಾನವೇ ಅಂತಿಮವಾಗಿದೆ. ಈ ವಿಚಾರದಲ್ಲಿ ಕಾರ್ಯಕರ್ತರಲ್ಲಿ ಯಾವುದೇ ಗೊಂದಲ ಬೇಡ ಎಂದು ಸ್ಪಷ್ಟಪಡಿಸಿದರು.

ಕಳೆದ ಎರಡು ಮೂರು ತಿಂಗಳಿಂದ ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆ ಸಂಬಂಧ ಓಡಾಟ ನಡೆಸುತ್ತಿದ್ದು ಜನರಿಂದ ಉತ್ತಮ ಬೆಂಬಲ ವ್ಯಕ್ತವಾಗುತ್ತಿದೆ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಹಾಸನ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಗೆಲುವು ಶತಸಿದ್ಧ ಜೆಡಿಎಸ್ ವರಿಷ್ಠರು ನನಗೆ ಟಿಕೆಟ್ ನೀಡುವ ಬಗ್ಗೆ ಭರವಸೆ ಇದೆ ಎಂದರು.

ನ್ಯೂಜಿಲೆಂಡ್ ನೂತನ ಪ್ರಧಾನಿಯಾಗಿ ಕ್ರಿಸ್ ಹಿಪ್ಕಿನ್ಸ್ ಅಧಿಕಾರ ಸ್ವೀಕಾರ

ಪ್ರೀತಮ್ ಗೌಡ ಪ್ರತಿಕ್ರಿಯೆ:
ಭವಾನಿ ರೇವಣ್ಣ ಅವರು ಜೆಡಿಎಸ್ ಪಕ್ಷದಿಂದ ಸ್ಪರ್ಧೆ ಮಾಡುವ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಹಾಲಿ ಬಿಜೆಪಿ ಶಾಸಕ ಪ್ರೀತಮ್ ಜೆ ಗೌಡ ಅವರು ಬಿಜೆಪಿಯಿಂದ ನನಗೆ ಟಿಕೆಟ್ ನೀಡುವ ಬಗ್ಗೆ ಅಕೃತವಾದ ಘೋಷಣೆ ಮಾಡಲಾಗಿಲ್ಲ ಆದ್ದರಿಂದ ಟಿಕೆಟ್ ಕನರ್ಮ್ ಆದ ನಂತರ ಹಾಗೂ ನಾಮಪತ್ರ ಸಲ್ಲಿಸಿದ ಬಳಿಕ ನನ್ನ ಪ್ರತಿಸ್ರ್ಪ ಯಾರು ಎಂಬುದನ್ನು ಗಮನಿಸಿ ಪ್ರತಿಕ್ರಿಯೆ ನೀಡುತ್ತೇನೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷಕ್ಕೆ ಎ.ಕೆ.ಆಂಟನಿ ಪುತ್ರ ಗುಡ್‍ಬೈ

ಅಲ್ಲದೆ ಬಿಜೆಪಿ ವರಿಷ್ಠರು ಜಿಲ್ಲೆಯ ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡು ಎಂದು ಹೇಳುತ್ತಾರೆ ಆ ಕ್ಷೇತ್ರದಿಂದಲೇ ಸ್ಪರ್ಧೆ ಮಾಡಬೇಕಾಗುತ್ತದೆ ನಾನು ಪಕ್ಷದ ಶಿಸ್ತಿನ ಸಿಪಾಯಿ ಎಂದು ಹೇಳುವ ಮೂಲಕ ಹಾಸನದಿಂದ ಸ್ಪರ್ಧೆ ನೀಡುವ ಕುರಿತು ದ್ವಂದ್ವ ಹೇಳಿಕೆ ನೀಡುವುದರೊಂದಿಗೆ ಅಚ್ಚರಿ ಮೂಡಿಸಿದ್ದಾರೆ.

Bhavani Revanna, JDS, Hasan, Assembly Constituency,

Articles You Might Like

Share This Article