Friday, June 14, 2024
Homeರಾಜ್ಯನಿರೀಕ್ಷಣಾ ಜಾಮೀನು ಕೋರಿ ಭವಾನಿ ರೇವಣ್ಣ ಹೈಕೋರ್ಟ್‌ ಮೊರೆ

ನಿರೀಕ್ಷಣಾ ಜಾಮೀನು ಕೋರಿ ಭವಾನಿ ರೇವಣ್ಣ ಹೈಕೋರ್ಟ್‌ ಮೊರೆ

ಬೆಂಗಳೂರು, ಜೂ.3- ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧನ ಭೀತಿಯಲ್ಲಿರುವ ಭವಾನಿ ರೇವಣ್ಣರ ನಿರೀಕ್ಷಣಾ ಜಾಮೀನು ನಿರಾಕರಿಸಿರುವ ಸೆಷನ್‌ ನ್ಯಾಯಾಲಯದ ಕ್ರಮ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ.

ಎಸ್‌‍ಐಟಿ ಜಾರಿ ಮಾಡಿರುವ ನೋಟಿಸ್‌‍ನಲ್ಲಿ ಯಾವುದೇ ಕಾನೂನಿನ ನಿಬಂಧನೆ ಬಗ್ಗೆ ಉಲ್ಲೇಖಿಸಲಾಗಿಲ್ಲ. ಹೀಗಾಗಿ ಬಂಧನದ ಭೀತಿ ಇದೆ ಎಂದು ಅರ್ಜಿಯಲ್ಲಿ ಭವಾನಿ ರೇವಣ್ಣ ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಕೆ.ಆರ್‌.ನಗರ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿಯವರಿಗೆ ಎಸ್‌‍ಐಟಿ ನೋಟಿಸ್‌‍ ಜಾರಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿತ್ತು. ವಿಚಾರಣೆಗೊಳಗಾದರೆ ಬಂಧಿಸುವ ಸಾಧ್ಯತೆ ಇದೆ. ಆದ್ದರಿಂದ ನಿರೀಕ್ಷಣಾ ಜಾಮೀನು ನೀಡಬೇಕೆಂದು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ. ಪ್ರಕರಣದಲ್ಲಿ ಸೆಷನ್‌ ಕೋರ್ಟ್‌ ನಿರೀಕ್ಷಣಾ ಜಾಮೀನು ನಿರಾಕರಿಸಿತ್ತು.

RELATED ARTICLES

Latest News