ನಾಳೆ ಗುಜರಾತಿಗೆ ಸಿಎಂ ಬೊಮ್ಮಾಯಿ ಪ್ರಯಾಣ

Social Share

ಬೆಂಗಳೂರು,ಡಿ.11-ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಳೆ ಗುಜರಾತಿಗೆ ಪ್ರಯಾಣ ಬೆಳೆಸಲಿದ್ದಾರೆ.
ಗುಜರಾತ್ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಅವರು ನಾಳೆ ಅಧಿಕಾರ ಸ್ವೀಕರಿಸಲಿದ್ದು, ಈ ಸಮಾರಂಭದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಭಾಗಿಯಾಗಲಿದ್ದಾರೆ.

ಬೆಳಗ್ಗೆ 9 ಗಂಟೆಗೆ ಎಚ್‍ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದಲ್ಲಿ ತೆರಳಲಿರುವ ಬೊಮ್ಮಾಯಿ ಅವರು ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾಗಿಯಾಗಿ ನಂತರ ಸಂಜೆ 7 ಗಂಟೆಗೆ ಬೆಂಗಳೂರಿಗೆ ಹಿಂತಿರುಗಲಿದ್ದಾರೆ. ಸಿಎಂ ಜೊತೆ ಸಂಪುಟದ ಕೆಲವು ಸಹೋದ್ಯೋಗಿಗಳ ಕೂಡ ತೆರಳಲಿದ್ದಾರೆ ಎಂದು ತಿಳಿದುಬಂದಿದೆ.

ಊಟದಲ್ಲಿ ಕೂದಲು ಸಿಕ್ಕಿದ್ದಕ್ಕೆ ಪತ್ನಿಗೆ ತಳಿಸಿ ತಲೆಬೋಳಿಸಿದ ಸೈಕೋ ಪತಿ

ಗುಜರಾತ್ ವೀಕ್ಷಕರಾಗಿ ಈಗಾಗಲೇ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತೆರಳಲಿದ್ದು, ನಾಳಿನ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.

ಸುಗಮ ಸಂಚಾರ ಜಾರಿ- ಅಪಘಾತ ತಡೆ ಸಭೆಯಲ್ಲಿ ಸಾರ್ವಜನಿಕರ ಸಲಹೆ ಆಲಿಕೆ

ಪ್ರಧಾನಿ ನರೇಂದ್ರಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಷಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿದಂತೆ ಬಿಜೆಪಿ ಆಡಳಿತವಿರುವ ಮುಖ್ಯಮಂತ್ರಿಗಳು, ಕೇಂದ್ರ ಸಚಿವರು ಸೇರಿದಂತೆ ಮತ್ತಿತರರು ಭಾಗಿಯಾಗಲಿದ್ದಾರೆ.

Bhupendra Patel, Chief Minister, Gujarat, CM Bommai,

Articles You Might Like

Share This Article