ಬೀದರ್, ಫೆ.28- ತಾಯಿಯನ್ನು ಬೈಕ್‍ನಲ್ಲಿ ಕರೆದುಕೊಂಡು ಹೋಗುತ್ತಿದ್ದ ಮಗನನ್ನು ದುಷ್ಕರ್ಮಿಗಳು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ನಡು ರಸ್ತೆಯಲ್ಲಿ ಭೀಕರವಾಗಿ ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ ಬಸವ ಕಲ್ಯಾಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಆನಂದ ಪುಲೆ(26) ಕೊಲೆಯಾದ ನತದೃಷ್ಟ. ಕಣ್ಣೆದುರೆ ಮಗನನ್ನು ಹೊಡೆದು ಕೊಲೆ ಮಾಡಿರುವುದನ್ನು ಕಂಡ ತಾಯಿಯ ರೋಧನ ಮುಗಿಲು ಮುಟ್ಟಿತ್ತು.
ನಾಳೆಯಿಂದ ಸರ್ಕಾರಿ ಕಚೇರಿಗಳು ಬಂದ್..?
ಬಸವಕಲ್ಯಾಣದ ತ್ರಿಪುರಾಂತ ಬಳಿ ಆನಂದ ಪುಲೆ ಬೈಕ್‍ನಲ್ಲಿ ತಾಯಿಯನ್ನು ಕರೆದುಕೊಂಡು ತೆರಳುತ್ತಿದ್ದಾಗ ಹಳೆ ದ್ವೇಷದಿಂದ ದುಷ್ಕರ್ಮಿಗಳು ಆತನನ್ನು ಅಡ್ಡಗಟ್ಟಿ ಮನಬಂದಂತೆ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.
ಚಂದ್ರಯಾನ-3ರ ಮಿಷನ್‍ನಲ್ಲಿ ಇಸ್ರೋದ ಮತ್ತೊಂದು ಸಾಧನೆ
ಸುದ್ದಿ ತಿಳಿದು ಬಸವ ಕಲ್ಯಾಣ ಠಾಣೆ ಪೊಲೀಸರು ಸ್ಥಳಗಕ್ಕಾಮಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ಪರಾರಿಯಾಗಿರುವ ಪ್ರಮುಖ ಆರೋಪಿ ದಿಗಂಬರ ದಾಸೋರೆ ಸೇರಿದಂತೆ ಉಳಿದ ಆರೋಪಿಗಳಿಗಾಗಿ ಸ್ಥಳದ ಸುತ್ತಮುತ್ತಲಿನ ಸಿಸಿ ಟಿವಿಗಳನ್ನು ಪರಿಶೀಲಿಸಿ ಪತ್ತೆಗೆ ಬಲೆ ಬೀಸಿದ್ದಾರೆ.
Bidar, son, murder, front, mother,