ಬೆಂಗಳೂರು, ಅ.9– ಬಿಗ್ಬಾಸ್ ಏನು ದೊಡ್ಡ ಕಾರ್ಖಾನೆಯಲ್ಲ. ಸಣ್ಣಪುಟ್ಟ ಲೋಪಗಳಿದ್ದರೆ ಸರಿಪಡಿಸಿಕೊಳ್ಳಲಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುವ ಮೂಲಕ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಕ್ರಮಕ್ಕೆ ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ರಾತ್ರಿಯೇ ತಾವು ಬೆಂಗಳೂರು ದಕ್ಷಿಣ ಜಿಲ್ಲಾಧಿಕಾರಿ ಅವರಿಗೆ ಕರೆ ಮಾಡಿ, ಒಂದು ಅವಕಾಶ ನೀಡುವಂತೆ ಸೂಚನೆ ನೀಡಿದ್ದೇನೆ. ನಮಲ್ಲಿ ಕೈಗಾರಿಕೆಗಳು ಬೆಳೆಯಬೇಕು. ಸಣ್ಣಪುಟ್ಟ ಲೋಪಗಳಾಗಿದ್ದರೆ, ಅದನ್ನು ಸರಿಪಡಿಸಿಕೊಂಡು ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ನಿಯಮಗಳನ್ನು ಪಾಲಿಸುವಂತೆ ತಮ ಬಳಿ ಬಂದಿದ್ದ ಸಂಸ್ಥೆಯವರಿಗೆ ಸೂಚನೆ ನೀಡಿದ್ದೇನೆ ಎಂದಿದ್ದಾರೆ. ಬಿಗ್ಬಾಸ್ ದೊಡ್ಡ ಕಾರ್ಖಾನೆ ಏನಲ್ಲ, ನಿಯಮ ಉಲ್ಲಂಘನೆಯಾಗಿದ್ದರೆ, ಸರಿಪಡಿಸಿಕೊಳ್ಳುತ್ತಾರೆ ಎಂದಿದ್ದಾರೆ.
ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಪಟ್ಟಂತೆ ತಮಗೆ ಯಾವುದೇ ಮಾಹಿತಿ ಇಲ್ಲ. ಪಕ್ಷ ಯಾವುದೇ ತೀರ್ಮಾನ ತೆಗೆದುಕೊಂಡರೂ ನಾವು ಅದಕ್ಕೆ ಬದ್ಧರಾಗಿರುತ್ತೇವೆ. ಯಾರೂ ಕೂಡ ಅನಗತ್ಯವಾಗಿ ಹೇಳಿಕೆ ನೀಡಿ ಗೊಂದಲ ಮೂಡಿಸಬಾರದು ಎಂದು ಈ ಸಂದರ್ಭದಲ್ಲಿ ಡಿ.ಕೆ.ಶಿವಕುಮಾರ್ ಎಚ್ಚರಿಕೆ ನೀಡಿದರು.ತಮ ಬಳಿ ಯಾರೂ ಚರ್ಚೆ ಮಾಡಿಲ್ಲ. ಒಂದು ವೇಳೆ ಹೈಕಮಾಂಡ್ ತಮನ್ನು ಕರೆದರೆ, ತಾವು ಸಲಹೆ ನೀಡುವುದಾಗಿ ಹೇಳಿದರು.