Saturday, August 23, 2025
Homeರಾಷ್ಟ್ರೀಯ | Nationalಬಿಹಾರ : ಟ್ಯಾಂಕರ್‌ಗೆ ಆಟೋ ಡಿಕ್ಕಿಯಾಗಿ 8 ಮಂದಿ ದುರ್ಮರಣ

ಬಿಹಾರ : ಟ್ಯಾಂಕರ್‌ಗೆ ಆಟೋ ಡಿಕ್ಕಿಯಾಗಿ 8 ಮಂದಿ ದುರ್ಮರಣ

Bihar: 8 killed in road accident near Sigriyawa Station in Daniyawan area, Patna district

ಪಾಟ್ನಾ,ಆ.23- ಆಟೋರಿಕ್ಷಾ ಮತ್ತು ಟ್ಯಾಂಕರ್‌ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 8 ಜನ ಮೃತಪಟ್ಟಿರುವ ಘಟನೆ ರಾಜಧಾನಿ ಪಾಟ್ನಾದ ಶಹಜಹಾನ್‌ಪುರ ಪೊಲೀಸ್‌‍ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ಎಲ್ಲರೂ ಗಂಗಾನದಿಯಲ್ಲಿ ಸ್ನಾನ ಮಾಡಲು ಆಟೋದಲ್ಲಿ ಹೋಗುತ್ತಿದ್ದರು ಎಂದು ತಿಳಿದುಬಂದಿದೆ.

ಸಾವನ್ನಪ್ಪಿದವರೆಲ್ಲರೂ ನಳಂದ ಹಿಲ್‌್ಸ ಪೊಲೀಸ್‌‍ ಠಾಣಾ ವ್ಯಾಪ್ತಿ ಪ್ರದೇಶದ ಮಾಲಗಾಂವ್‌ ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ.ಮೃತಪಟ್ಟವರಲ್ಲಿ 5 ಮಹಿಳೆಯರು ಮತ್ತು ಒಬ್ಬ ಆಟೋ ಚಾಲಕ ಮತ್ತು ಇಬ್ಬರು ಪುರುಷರು ಸೇರಿದ್ದಾರೆ. ಎಲ್ಲರೂ ಒಂದೇ ಕುಟುಂಬದವರು ಎಂದು ಹೇಳಲಾಗುತ್ತಿದೆ.

ಗಾಯಾಳುಗಳನ್ನು ಸ್ಥಳೀಯರ ಸಹಾಯದಿಂದ ಪಾಟ್ನಾದ ಪಿಎಂಸಿಎಚ್‌ಗೆ ದಾಖಲಿಸಲಾಗಿದೆ. ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲಿಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.ಟ್ಯಾಂಕರ್‌ ಅತಿವೇಗದಲ್ಲಿ ಬರುತ್ತಿದ್ದು, ಚಾಲಕನ ನಿಯಂತ್ರಣ ಕಳೆದುಕೊಂಡಿದ್ದರಿಂದ ಈ ಅಪಘಾತ ಸಂಭವಿಸಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

RELATED ARTICLES

Latest News