Thursday, August 7, 2025
Homeರಾಷ್ಟ್ರೀಯ | Nationalಬಿಹಾರದಲ್ಲಿ ಶಾಲಾ ಸಿಬ್ಬಂದಿಗೆ ವೇತನ ಹೆಚ್ಚಳ

ಬಿಹಾರದಲ್ಲಿ ಶಾಲಾ ಸಿಬ್ಬಂದಿಗೆ ವೇತನ ಹೆಚ್ಚಳ

Bihar Schools Pay Hike: CM Nitish Kumar Doubles Salaries Of Key Staff

ಪಾಟ್ನಾ,ಆ.1- ಮಧ್ಯಾಹ್ನ ಊಟದ ಅಡುಗೆಯವರು, ಶಾಲೆಗಳಲ್ಲಿ ರಾತ್ರಿ ಕಾವಲುಗಾರರು ಮತ್ತು ದೈಹಿಕ ಶಿಕ್ಷಣ ಮತ್ತು ಆರೋಗ್ಯ ಬೋಧಕರಿಗೆ ವೇತನ ಹೆಚ್ಚಳ ಮಾಡಿ ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರು ಮತ್ತೊಂದು ಬಂಪರ್‌ ಕೊಡುಗೆ ನೀಡಿದ್ದಾರೆ.

ಇದು ಶಾಲಾ ಬೆಂಬಲ ಸಿಬ್ಬಂದಿಯ ಯೋಗಕ್ಷೇಮ ಮತ್ತು ಕೆಲಸದ ಪರಿಸ್ಥಿತಿಗಳನ್ನು ಹೆಚ್ಚಿಸುವ ಉದ್ದೇಶವನ್ನು ಹೊಂದಿದೆ ಎಂದು ಮುಖ್ಯಮಂತ್ರಿ ತಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್‌್ಸ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಸರ್ಕಾರ ಹೊರಡಿಸಿರುವ ಹೊಸ ಮಾರ್ಗಸೂಚಿಗಳ ಪ್ರಕಾರ, ಶಿಕ್ಷಣ ವ್ಯವಸ್ಥೆ ಬಲಪಡಿಸುವಲ್ಲಿ ಅಡುಗೆಯವರು (ಬಿಸಿಯೂಟ ತಯಾರಕರು), ರಾತ್ರಿ ಕಾವಲುಗಾರರು ಮತ್ತು ದೈಹಿಕ ಶಿಕ್ಷಣ ಮತ್ತು ಆರೋಗ್ಯ ಬೋಧಕರು ಪ್ರಮುಖ ಪಾತ್ರ ವಹಿಸಿದ್ದಾರೆ. ಇದನ್ನ ಗಮನದಲ್ಲಿಟ್ಟುಕೊಂಡು, ಈ ಕಾರ್ಮಿಕರ ಗೌರವಧನವನ್ನು ದ್ವಿಗುಣಗೊಳಿಸುವ ಮೂಲಕ ಗೌರವಾನ್ವಿತ ಹೆಚ್ಚಳ ಮಾಡಲು ನಾವು ನಿರ್ಧರಿಸಿದ್ದೇವೆ ಎಂದು ತಮ ಪೋಸ್ಟ್‌ನಲ್ಲಿ ಹಂಚಿಕೊಂಡಿದ್ದಾರೆ.

2005ರ ನವೆಂಬರ್‌ನಲ್ಲಿ ನಮ್ಮ ಸರ್ಕಾರ ರಚನೆಯಾದಾಗಿನಿಂದ, ನಾವು ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸಲು ನಿರಂತರವಾಗಿ ಕೆಲಸ ಮಾಡುತ್ತಿದ್ದೇವೆ. 2005 ರಲ್ಲಿ ಶಿಕ್ಷಣದ ಒಟ್ಟು ಬಜೆಟ್‌ 4,366 ಕೋಟಿ ರೂ.ಗಳಾಗಿದ್ದು, ಈಗ ಅದು 77,690 ಕೋಟಿ ರೂ.ಗಳಿಗೆ ಏರಿಕೆಯಾಗಿದೆ. ಹೆಚ್ಚಿನ ಸಂಖ್ಯೆಯ ಶಿಕ್ಷಕರ ನೇಮಕಾತಿ, ಹೊಸ ಶಾಲಾ ಕಟ್ಟಡಗಳ ನಿರ್ಮಾಣ ಮತ್ತು ಮೂಲಸೌಕರ್ಯಗಳ ಅಭಿವೃದ್ಧಿಯಿಂದಾಗಿ ಶಿಕ್ಷಣ ವ್ಯವಸ್ಥೆಯಲ್ಲಿ ವ್ಯಾಪಕ ಸುಧಾರಣೆ ಕಂಡುಬಂದಿದೆ.

ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸುವಲ್ಲಿ ಅಡುಗೆಯವರು, ರಾತ್ರಿ ಕಾವಲುಗಾರರು ಮತ್ತು ದೈಹಿಕ ಶಿಕ್ಷಣ ಮತ್ತು ಆರೋಗ್ಯ ಬೋಧಕರು ಪ್ರಮುಖ ಪಾತ್ರ ವಹಿಸಿದ್ದಾರೆ. ಇದನ್ನ ಗಮನದಲ್ಲಿಟ್ಟುಕೊಂಡು, ಗೌರವಧನ ದ್ವಿಗುಣಗೊಳಿಸುವ ಮೂಲಕ ಗೌರವಾನ್ವಿತ ಹೆಚ್ಚಳ ಮಾಡಲು ನಾವು ನಿರ್ಧರಿಸಿದ್ದೇವೆ.

ಶಿಕ್ಷಣ ಇಲಾಖೆ ಅಡಿಯಲ್ಲಿ ಮಧ್ಯಾಹ್ನದ ಬಿಸಿಯೂಟ ತಯಾರಿಕೆಯಲ್ಲಿ ಕೆಲಸ ಮಾಡುವ ಅಡುಗೆಯವರ ಗೌರವಧನವನ್ನು ದ್ವಿಗುಣಗೊಳಿಸಲು ನಿರ್ಧರಿಸಲಾಗಿದೆ. ಬಿಸಿಯೂಟ ತಯಾರಕರ ಗೌರವಧನವನ್ನು 1,650 ರೂ.ಗಳಿಂದ 3,300 ರೂ.ಗಳಿಗೆ ಹೆಚ್ಚಿಸಲಾಗಿದೆ. ಅದೇ ಸಮಯದಲ್ಲಿ ಮಾಧ್ಯಮಿಕ/ಉನ್ನತ ಶಿಕ್ಷಣ ಶಾಲೆಯಲ್ಲಿ ಕೆಲಸ ಮಾಡುವ ರಾತ್ರಿ ಕಾವಲುಗಾರರ ಗೌರವಧನವನ್ನು 5000 ರಿಂದ 10,000 ರೂ.ಗಳಿಗೆ ದ್ವಿಗುಣಗೊಳಿಸಲು ನಿರ್ಧರಿಸಲಾಗಿದೆ.

ಅಲ್ಲದೇ, ದೈಹಿಕ ಶಿಕ್ಷಣ ಮತ್ತು ಆರೋಗ್ಯ ಬೋಧಕರ ಗೌರವಧನವನ್ನು 8 ಸಾವಿರದಿಂದ 16,000 ರೂ. ಗಳಿಗೆ, ವಾರ್ಷಿಕ ವೇತನವನ್ನ 200 ರೂ.ಗಳಿಂದ 400 ರೂ.ಗಳಿಗೆ ಹೆಚ್ಚಿಸಲಾಗಿದೆ. ಇದು ಕಾರ್ಯನಿರತ ಸಿಬ್ಬಂದಿ ಮನೋಸ್ಥೈರ್ಯವನ್ನು ಹೆಚ್ಚಿಸುತ್ತದೆ ಎಂದು ನಿತೀಶ್‌ ಕುಮಾರ್‌ ತಿಳಿಸಿದ್ದಾರೆ.

ಈಗಾಗಲೇ ನಿತೀಶ್‌ ಕುಮಾರ್‌ ಅವರು ರಾಜ್ಯದ ಜನತೆಗೆ ವಿದ್ಯುತ್‌ ಸೇರಿದಂತೆ ಈಗಾಗಲೇ ಹಲವು ಉಚಿತ ಭರವಸೆ ನೀಡಿದ್ದಾರೆ. ಈ ವರ್ಷದ ಅಂತ್ಯಕ್ಕೆ ಬಿಹಾರದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಮತದಾರರ ಮೂಗಿಗೆ ರಾಜಕೀಯ ಪಕ್ಷಗಳ ಮುಖಂಡರ ಭರ್ಜರಿ ಉಚಿತ ಉಡುಗೊರೆಗಳನ್ನು ಘೋಷಣೆ ಮಾಡುವ ಮೂಲಕ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತ್ತಿದ್ದಾರೆ.

ಈ ಘೋಷಣೆಯು ಈ ಉದ್ಯೋಗಿಗಳಿಗೆ ಕೊನೆಗೂ ಸಮಾಧಾನಕರವಾಗಿದೆ ಮತ್ತು ಬಿಹಾರದ ಶೈಕ್ಷಣಿಕ ವ್ಯವಸ್ಥೆಯ ನಿರ್ಮಾಣದಲ್ಲಿ ಅವರ ನಿರ್ಣಾಯಕ ಕೊಡುಗೆಯನ್ನು ಗುರುತಿಸಲು ರಾಜ್ಯ ಸರ್ಕಾರವು ಇಟ್ಟಿರುವ ಒಂದು ಕಾರ್ಯತಂತ್ರದ ಹೆಜ್ಜೆಯಾಗಿದೆ.

RELATED ARTICLES

Latest News