Monday, July 15, 2024
Homeರಾಷ್ಟ್ರೀಯಬಿಹಾರ ರೈಲು ದುರಂತದಲ್ಲಿ, ನಾಲ್ವರ ಸಾವು, 70 ಕ್ಕೂ ಹೆಚ್ಚು ಮಂದಿಗೆ ಗಾಯ

ಬಿಹಾರ ರೈಲು ದುರಂತದಲ್ಲಿ, ನಾಲ್ವರ ಸಾವು, 70 ಕ್ಕೂ ಹೆಚ್ಚು ಮಂದಿಗೆ ಗಾಯ

ಪಾಟ್ನಾ,ಅ.12- ರೈಲಿನ 21 ಭೋಗಿಗಳು ಹಳಿತಪ್ಪಿ ನಾಲ್ಕು ಮಂದಿ ಸಾವನ್ನಪ್ಪಿದ್ದು, 70 ಕ್ಕೂ ಹೆಚ್ಚು ಜನ ಗಾಯಗೊಂಡಿರುವ ರಾತ್ರಿ ಬಿಹಾರದಲ್ಲಿ ಘಟನೆ ನಡೆದಿದೆ. ದೆಹಲಿಯ ಆನಂದ್ ವಿಹಾರ್ ನಿಲ್ದಾಣದಿಂದ ರೈಲು ಅಸ್ಸಾಂನ ಗುವಾಹಟಿಯ ಕಾಮಾಖ್ಯ ಜಂಕ್ಷನ್‍ಗೆ ಹೋಗುವ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ.

ಆರು ಎಸಿ ಬೋಗಿಗಳು ಪಲ್ಟಿಯಾಗಿ ರೈಲ್ವೇ ಹಳಿ ಮೇಲೆ ಬಿದ್ದಿದೆ. ನಾರ್ತ್ ಈಸ್ಟ್ ಎಕ್ಸ್‍ಪ್ರೆಸ್ ರೈಲು 12506 ನಂಬರಿನ ರೈಲು ಹಳಿ ತಪ್ಪಿದೆ. ಸ್ಥಳೀಯರು ಮತ್ತು ಜಿಲ್ಲಾಡಳಿತ ಪ್ರಯಾಣಿಕರನ್ನು ರಕ್ಷಿಸಿದ್ದು, ತೀವ್ರವಾಗಿ ಗಾಯಗೊಂಡವರನ್ನು ಪಾಟ್ನಾದ ಏಮ್ಸ್ ಅಸ್ಪತ್ರೆಗೆ ದಾಖಲಿಸಲಾಗಿದೆ. ರೈಲಿನ ವಸ್ತುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದು, ಅಸ್ತವ್ಯಸ್ತಗೊಂಡಿದ್ದಕ್ಕೆ ಪ್ರಯಾಣಿಕರು ಗಾಬರಿಗೊಂಡು ವೀಡಿಯೋ, ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಸ್ಥಳೀಯ ಬಕ್ಸರ್ ಸಂಸದರೂ ಆಗಿರುವ ಕೇಂದ್ರ ಸಚಿಚ ಅಶ್ವಿನಿ ಕುಮಾರ್ ಚೌಬೆ ಅವರು ರೈಲು ಹಳಿತಪ್ಪಿದ ಬಗ್ಗೆ ಮಾಹಿತಿ ಪಡೆದು ಘಟನಾ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ರಕ್ಷಣಾ ಕಾರ್ಯಾಚರಣೆ ಪೂರ್ಣ ತೆರವು ಮತ್ತು ರಕ್ಷಣಾ ಕಾರ್ಯಾಚರಣೆ ಪೂರ್ಣಗೊಂಡಿದೆ. ಎಲ್ಲಾ ಕೋಚ್ಗಳನ್ನು ಪರಿಶೀಲಿಸಲಾಗಿದೆ. ಪ್ರಯಾಣಿಕರನ್ನು ಅವರ ಮುಂದಿನ ಪ್ರಯಾಣಕ್ಕಾಗಿ ಶೀಘ್ರದಲ್ಲೇ ವಿಶೇಷ ರೈಲಿಗೆ ಸ್ಥಳಾಂತರಿಸಲಾಗುವುದು ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಎಕ್ಸ್ ನಲ್ಲಿ ಮಾಹಿತಿ ನೀಡಿದ್ದಾರೆ.

ಜೈಲಿನಲ್ಲಿ ಚಂದ್ರಬಾಬು ನಾಯ್ಡು ಅವರಿಗೆ ಜೀವಭಯವಿದೆ : ನಾರಾ ಲೋಕೇಶ್

ಪರಿಹಾರ ಮತ್ತು ರಕ್ಷಣಾ ಕಾರ್ಯವನ್ನು ವೇಗಗೊಳಿಸಲು ವಿಪತ್ತು ನಿರ್ವಹಣಾ ಇಲಾಖೆ, ಆರೋಗ್ಯ ಇಲಾಖೆ ಅಲರ್ಟ್ ಆಗಿರುವಂತೆ ಸೂಚಿಸಿದ್ದು, ಸಹಾಯವಾಣಿ ಸಹ ನೀಡಲಾಗಿದೆ. ಬಕ್ಸರ್ ಮತ್ತು ಭೋಜ್ಪುರದ ಜಿಲ್ಲಾ ಅಧಿಕಾರಿಗಳೊಂದಿಗೆ ಚರ್ಚಿಸಿದ್ದೇನೆ ಎಂದು ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಹೇಳಿದ್ದಾರೆ.

ಈ ಘಟನೆಯನ್ನು ಸರ್ಕಾರ ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಅಸ್ಸಾಂ ಮುಖ್ಯಮಂತ್ರಿಗಳ ಕಚೇರಿ ಮಾಹಿತಿ ನೀಡಿದೆ. ರಘುನಾಥಪುರದಲ್ಲಿ ರೈಲು ಸಂಖ್ಯೆ 12506ರ ದುರದೃಷ್ಟಕರ ಹಳಿತಪ್ಪುವಿಕೆಯನ್ನು ಮುಖ್ಯಮಂತ್ರಿಗಳ ಕಾರ್ಯಾಲಯವು ಸೂಕ್ಷ್ಮವಾಗಿ ಗಮನಿಸುತ್ತಿದೆ ಮತ್ತು ಬಕ್ಸರ್ ಮತ್ತು ಇತರ ಏಜೆನ್ಸಿಗಳ ಜಿಲ್ಲಾ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದೆ ಎಂದು ಅಸ್ಸಾಂ ಮುಖ್ಯಮಂತ್ರಿಗಳ ಕಚೇರಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದೆ.

ರೈಲ್ವೇ ಮಾರ್ಗ ಬದಲಾವಣೆ: ರೈಲು ಅಪಘಾತದಿಂದಾಗಿ ಇದೇ ಮಾರ್ಗದಲ್ಲಿ ಚಲಿಸಬೇಕಿದ್ದ 2 ರೈಲು ಕ್ಯಾನ್ಸಲ್ ಆಗಿವೆ, ಜೊತಗೆ 21 ಕ್ಕೂ ಹೆಚ್ಚು ರೈಲುಗಳ ಮಾರ್ಗಗಳನ್ನು ಬೇರೆ ಮಾರ್ಗಕ್ಕೆ ಬದಲಿಸಲಾಗಿದೆ. ಇನ್ನು ಬಿಹಾರ ರೈಲ್ವೆ ಅಪಘಾತಕ್ಕೆ ಸಂಬಂಧಿಸಿದಂತೆ, ಜನರಿಗೆ ಮಾಹಿತಿ ನೀಡಲು ಭಾರತೀಯ ರೈಲ್ವೆ ಸಹಾಯವಾಣಿ ಸಂಖ್ಯೆಗಳನ್ನೂ ನೀಡಿದೆ.

ಮೋದಿ ಸರ್ಕಾರದಿಂದ ಆರ್‌ಟಿಐ ಕಾಯಿದೆ ದುರ್ಬಲ ; ಜೈರಾಮ್ ರಮೇಶ್

ಪಾಟ್ನಾ ಸಹಾಯವಾಣಿ- 9771449971, ಡಣಾಪುರ ಸಹಾಯವಾಣಿ- 8905697493, ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಜಂಕ್ಷನ್- 9794849461, 8081206628, ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ವಾಣಿಜ್ಯ ನಿಯಂತ್ರಣ- 8081212134 ಸಹಾಯವಾಣಿಯನ್ನು ಆರಂಭಿಸಲಾಗಿದೆ.

RELATED ARTICLES

Latest News