ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ, ಸ್ಥಳದಲ್ಲೇ ಮೂವರು ಸಾವು

ಶ್ರೀನಿವಾಸಪುರ, ಮಾ.5- ಕೂಲಿ ಕೆಲಸಕ್ಕೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಮೂವರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳ್ಳಂಬೆಳಗ್ಗೆ ತಾಲ್ಲೂಕಿನ ಹೊಗಳಗೆರೆ ತಿಂಡ್ಲಿ ರಸ್ತೆಯಲ್ಲಿ ನಡೆದಿದೆ. ಹೊಗಳಗೆರೆ ನಿವಾಸಿಗಳಾದ ಯಲ್ಲಯ್ಯ (25), ಯಶವಂತ (24) ಹಾಗೂ ವೆಂಕಟೇಶಯ್ಯ (50) ಮೃತಪಟ್ಟ ದುರ್ದೈವಿಗಳು.

ಇವರು ಇಂದು ಬೆಳಗ್ಗೆ ಕೂಲಿ ಕೆಲಸಕ್ಕಾಗಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ವೇಗವಾಗಿ ಬಂದ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದೆ. ಮೂವರಿಗೂ ಗಂಭೀರ ಪೆಟ್ಟುಬಿದ್ದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸುದ್ದಿ ತಿಳಿದ ಕೂಡಲೇ ಶ್ರೀನಿವಾಸಪುರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಅಪಘಾತ ವೆಸಗಿದ ವಾಹನ ಪತ್ತೆಗೆ ಶೋಧ ಕೈಗೊಂಡಿದ್ದಾರೆ.

ಆಕ್ರಂದನ: ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಶ್ರೀನಿವಾಸಪುರ ಸರ್ಕಾರಿ ಆಸ್ಪತ್ರೆಯಲಿಡಲಾಗಿದೆ. ಆಸ್ಪತ್ರೆ ಮುಂಭಾಗ ಮೃತರ ಕುಟುಂಬ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿತ್ತು. ಇಡೀ ಗ್ರಾಮವೇ ಇಂದು ಬೆಳಗ್ಗೆ ನಡೆದ ಘಟನೆಯಿಂದ ಶೋಕದಲ್ಲಿ ಮುಳುಗಿದೆ.