ಬೆಂಗಳೂರು,ಮಾ.20- ಅತಿವೇಗವಾಗಿ ಬೈಕ್‌ನಲ್ಲಿ ಹೋಗುತ್ತಿದ್ದಾಗ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸಹೋದರರಿಬ್ಬರೂ ಮೃತಪಟ್ಟಿರುವ ಘಟನೆ ಅಶೋಕ ನಗರ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗಿನ ಜಾವ ನಡೆದಿದೆ.
ನೀಲಸಂದ್ರ ನಿವಾಸಿಗಳಾದ ಶಕೀಲ್ ಬಶೀರ್(23) ಮತ್ತು ಅಸ್ಲಂ ಬಶೀರ್(22) ಮೃತ ಸಹೋದರರು. ಇವರು ಅಶೋಕ ನಗರದ ಬಜಾಜ್‌ಸ್ಟ್ರೀಟ್‌ನಲ್ಲಿ ಹೋಟೆಲ್ ನಡೆಸುತ್ತಿದ್ದರು.
ಇಂದು ಬೆಳಗಿನ ಜಾವ 4.30ರ ಸುಮಾರಿನಲ್ಲಿ ಇವರಿಬ್ಬರು ಹೆಲ್ಮೆಟ್ ಧರಿಸದೆ ಅತಿವೇಗವಾಗಿ ಬೈಕ್‌ನಲ್ಲಿ ಹೋಗುತ್ತಿದ್ದಾಗ ಆನೆಪಾಳ್ಯ ಜಂಕ್ಷನ್ ಬಳಿ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ರಸ್ತೆಗೆ ಉರುಳಿ ಬಿದ್ದಿದ್ದಾರೆ.
ಪರಿಣಾಮ ಇಬ್ಬರ ತಲೆ ಹಾಗೂ ಇನ್ನಿತರ ಭಾಗಗಳಿಗೆ ಗಂಭೀರ ಪೆಟ್ಟಾಗಿದೆ. ತಕ್ಷಣ ಇವರಿಬ್ಬರನ್ನು ಆಸ್ಪತ್ರೆಗೆ ಕರೆದೊಯ್ದರಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಸುದ್ದಿ ತಿಳಿದು ಅಶೋಕ ನಗರ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.