ಬೈಕ್ ಮೇಲೆ ಕಂಟೈನರ್ ಉರುಳಿ ಬಿದ್ದು ಸ್ಥಳದಲ್ಲೇ ಸವಾರ ಸಾವು

Container--04
ದೊಡ್ಡಬಳ್ಳಾಪುರ, ಜೂ.14- ಚಲಿಸುತ್ತಿದ್ದ ದ್ವಿಚಕ್ರ ವಾಹನದ ಮೇಲೆ ಕಂಟೈನರ್ ಉರುಳಿಬಿದ್ದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ-207ರ ಚಿಕ್ಕಬೆಳವಂಗಲ ಸಮೀಪದ ಕೋಲಿಗೆರೆ ಗ್ರಾಮದ ಬಳಿ ಸಂಭವಿಸಿದೆ. ವಿಜಯ್‍ಕುಮಾರ್ (40) ಮೃತಪಟ್ಟ ವ್ಯಕ್ತಿ. ದಾಬಸ್‍ಪೇಟೆ-ಹೊಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ದಾಬಸ್‍ಪೇಟೆ ಕಡೆಯಿಂದ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಂಟೈನರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಕ್ಕದಲ್ಲಿ ಬುಲೆಟ್‍ನಲ್ಲಿ ಚಲಿಸುತ್ತಿದ್ದ ಸವಾರನ ಮೇಲೆ ಉರುಳಿ ಬಿದ್ದಿದೆ.

Container--01

ಕಂಟೈನರ್ ಕೆಳಭಾಗದಲ್ಲಿ ಸಿಲುಕಿದ್ದರಿಂದ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ಹದಗೆಟ್ಟ ರಸ್ತೆಯಿಂದ ಮೇಲಿಂದ ಮೇಲೆ ಈ ರಸ್ತೆಯಲ್ಲಿ ಅಪಘಾತಗಳು ಸಂಭವಿಸುತ್ತಲವೇ ಇವೆ. ಕಾಮಗಾರಿ ಅರ್ಧಕ್ಕೇ ನಿಂತಿದ್ದು, ವಾಹನ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿದೆ. ಸಂಪೂರ್ಣವಾಗಿ ಕಾಮಗಾರಿ ಕೈಗೊಳ್ಳದೆ ರಸ್ತೆಯ ಅಲ್ಲಲ್ಲಿ ಅರ್ಧಂಬರ್ಧ ಕಾಮಗಾರಿಗಳನ್ನು ಕೈಗೆತ್ತಿಕೊಂಡು ಅರ್ಧಕ್ಕೇ ಬಿಡಲಾಗಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ದೊಡ್ಡಬೆಳವಂಗಲ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Container--03

Container--02

Sri Raghav

Admin