ಬೆಂಗಳೂರು, ಜ.3- ಸ್ನೇಹಿತರಿಬ್ಬರು ಬೈಕ್‍ನಲ್ಲಿ ಹೋಗುತ್ತಿದ್ದಾಗ ಅತಿವೇಗದಿಂದಾಗಿ ನಿಯಂತ್ರಣ ತಪ್ಪಿ ಫ್ಲೈಓವರ್ ಬ್ರಿಡ್ಜ್‍ಗೆ ಡಿಕ್ಕಿ ಹೊಡೆದ ಪರಿಣಾಮ ಒಬ್ಬಾತ ಮೃತಪಟ್ಟಿರುವ ಘಟನೆ ಕೆಜಿ ಹಳ್ಳಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಗಿನ ಜಾವ ನಡೆದಿದೆ
ಹೆಬ್ಬಾಳ ನಿವಾಸಿ ಕುಶಾಲ್(27) ಮೃತಪಟ್ಟವರು. ಈತ ಇಂಟೀರಿಯಲ್ ಡೆಕೋರೇಟ್ ವೃತ್ತಿ ಮಾಡುತ್ತಿದ್ದರು.
ನೈಟ್ ಕಫ್ರ್ಯೂ ಜಾರಿಯಲ್ಲಿದ್ದರೂ ಸಹ ಕುಶಾಲ್ ತನ್ನ ಸ್ನೇಹಿತನನ್ನು ಕರೆದುಕೊಂಂಡು ಅಪಾಚಿ ಬೈಕ್‍ನಲ್ಲಿ ಇಂದು ಬೆಳಗಿನ ಜಾವ 1 ಗಂಟೆ ಸುಮಾರಿನಲ್ಲಿ ನಾಗವಾರ ಫ್ಲೈಓವರ್ ಬ್ರಿಡ್ಜ್, ಸರ್ವೀಸ್ ರಸ್ತೆಯಲ್ಲಿ ಹೋಗುತ್ತಿದ್ದರು.
ಕುಶಾಲ್ ಬೈಕ್ ಚಲಾಯಿಸುತ್ತಿದ್ದನು. ಅತಿವೇಗದಿಂದಾಗಿ ಬೈಕ್ ನಿಯಂತ್ರಣ ತಪ್ಪಿ ಫ್ಲೈಓವರ್ ಬ್ರಿಡ್ಜ್‍ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರೂ ಕೆಳಗೆ ಬಿದ್ದು ಗಾಯಗೊಂಡರು.
ಕುಶಾಲ್ ಗಂಭೀರ ಗಾಯಗೊಂಡು, ತೀವ್ರ ರಕ್ತಸ್ರಾವವಾಗಿ ಮೃತಪಟ್ಟಿದ್ದಾರೆ. ಸ್ನೇಹಿತ ಗಾಯಗೊಂಡು ಪ್ರಾಣಾಪಾಯದಿಂದ ಪಾರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಸುದ್ದಿ ತಿಳಿದ ಕೆಜಿ ಹಳ್ಳಿ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಮೃತದೇಹವನ್ನು ಅಂಬೇಡ್ಕರ್ ಮೆಡಿಕಲ್ ಆಸ್ಪತ್ರೆಗೆ ರವಾನಿಸಿ, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
