Tuesday, December 3, 2024
Homeಬೆಂಗಳೂರುವ್ಹೀಲಿಂಗ್ ಹಾವಳಿ: 6 ಯುವಕರ ವಿರುದ್ಧ ಎಫ್‍ಐಆರ್

ವ್ಹೀಲಿಂಗ್ ಹಾವಳಿ: 6 ಯುವಕರ ವಿರುದ್ಧ ಎಫ್‍ಐಆರ್

ಬೆಂಗಳೂರು,ಫೆ.26- ನಗರದ ಮೂರು ವಿಭಾಗಗಳಲ್ಲಿ ವೀಲಿಂಗ್ ಮಾಡುವವರ ವಿರುದ್ಧ ನಗರ ಸಂಚಾರಿ ಪೊಲೀಸರು ಕಾರ್ಯಾಚರಣೆ ಕೈಗೊಂಡು ಒಟ್ಟು 6 ಮಂದಿ ಯುವಕರ ವಿರುದ್ಧ ಎಫ್‍ಐಆರ್ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಂಡಿದ್ದಾರೆ.

ಪೂರ್ವ ವಿಭಾಗ : ಬಾಣಸವಾಡಿ 100 ಅಡಿ ಮುಖ್ಯರಸ್ತೆಯಲ್ಲಿ ವೀಲಿಂಗ್ ಮಾಡುತ್ತಿದ್ದ ಮೂವರು ಸವಾರರನ್ನು ಬಾಣಸವಾಡಿ ಸಂಚಾರ ಠಾಣೆ ಪೊಲೀಸರು ಪತ್ತೆ ಹಚ್ಚಿ ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.
ಪೋಷಕರ ವಿರುದ್ಧ ಪ್ರಕರಣ: ಇಬ್ಬರು ದ್ವಿಚಕ್ರ ವಾಹನ ಸವಾರರು ವಯಸ್ಕರಾಗಿದ್ದು, ಈ ಇಬ್ಬರು ಸವಾರರ ವಿರುದ್ಧ ಎರಡು ಪ್ರತ್ಯೇಕ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಮತ್ತೊಬ್ಬ ಸವಾರ ಅಪ್ರಾಪ್ತನಾದ ಕಾರಣ ಆತನ ಪೋಷಕರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಕಾನೂನು ರೀತಿ ಕ್ರಮ ಕೈಗೊಳ್ಳಲಾಗಿದೆ.

ದಕ್ಷಿಣ ವಿಭಾಗ : ಅಪಾಯಕಾರಿ ರೀತಿಯಲ್ಲಿ ಸಾರ್ವಜನಿಕರಿಗೆ ಭಯವನ್ನುಂಟು ಮಾಡುವ ರೀತಿ ವೀಲಿಂಗ್ ಮಾಡುತ್ತಿದ್ದ ಸವಾರನನ್ನು ಕುಮಾರಸ್ವಾಮಿ ಲೇಔಟ್ ಸಂಚಾರಿ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನಿನ್ನೆ ಸಂಜೆ 7.20 ರ ಸುಮಾರಿನಲ್ಲಿ ಆರೋಪಿ ಶೋಯಬ್ ಪಾಷ (22) ತನ್ನ ಡಿಯೋ ಸ್ಕೂಟರ್‍ನಲ್ಲಿ ರಿಂಗ್ ರಸ್ತೆಯ ಇಲಿಯಾಸ್ ನಗರ ರಸ್ತೆಯಿಂದ ಕೆಎಸ್ ಲೇಔಟ್ ಜಂಕ್ಷನ್ ಕಡೆಗೆ ಹೋಗುವಾಗ ಅಪಾಯಕಾರಿ ರೀತಿಯಲ್ಲಿ ವೀಲಿಂಗ್ ಮಾಡುತ್ತಾ ಸಾರ್ವಜನಿಕರಿಗೆ ಭಯ ಉಂಟುಮಾಡುವ ರೀತಿಯಲ್ಲಿ ಹೋಗುತ್ತಿದ್ದಾಗ ಪೊಲೀಸರು ಆತನನ್ನು ವಾಹನ ಸಮೇತ ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ವೃದ್ಧೆ ಕೊಲೆ : ಮೃತದೇಹ ಡ್ರಮ್ ಒಳಗೆ ಇಟ್ಟು ಹಂತಕ ಪರಾರಿ

ಪಶ್ಚಿಮ ವಿಭಾಗ : ಸಾರಿಗೆ ಮತ್ತು ರಸ್ತೆ ಸುರಕ್ಷತೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು ಮತ್ತು ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತರು ವೀಲಿಂಗ್ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲು ಸೂಚಿಸಿದ್ದರು.
ಅದರಂತೆ ಪಶ್ಚಿಮ ಸಂಚಾರ ವಿಭಾಗದಲ್ಲಿ ಅಪಾಯಕಾರಿ ರೀತಿಯಲ್ಲಿ ಸಾರ್ವಜನಿಕರ ಪ್ರಾಣಕ್ಕೆ ಹಾಗೂ ಆಸ್ತಿಗೆ ತೊಂದರೆ ಉಂಟಾಗುವಂತೆ ವೀಲಿಂಗ್ ಮಾಡುತ್ತಿದ್ದ ಮೂವರು ಯುವಕರ ವಿರುದ್ಧ ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣೆ ಪೊಲೀಸರು ಕಾನೂನು ಕ್ರಮ ಕೈಗೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮುಂದಿನ ದಿನಗಳಲ್ಲಿ ವೀಲಿಂಗ್ ಮಾಡುವವರ ವಿರುದ್ಧ ಕಾರ್ಯಾಚರಣೆ ಕೈಗೊಳ್ಳಲಿದ್ದು, ಈ ರೀತಿಯ ಪ್ರಕರಣಗಳಲ್ಲಿ ಭಾಗಿಯಾಗದಂತೆ ಪಶ್ಚಿಮ ಸಂಚಾರ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಅನಿತಾ ಬಿ. ಹದ್ದಣ್ಣವರ್ ಪತ್ರಿಕಾ ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.

RELATED ARTICLES

Latest News