ಬೆಂಗಳೂರು, ಫೆ.23- ಔಟರ್ ರಿಂಗ್ ರಸ್ತೆ-ಪ್ಲೈಓವರ್‍ಗಳ ಮೇಲೆ ಸಾರ್ವಜನಿಕರ ಪ್ರಾಣಕ್ಕೆ ಹಾನಿಯಾಗುವಂತೆ ದ್ವಿ ಚಕ್ರ ವಾಹನಗಳಲ್ಲಿ ವೀಲಿಂಗ್ ಮಾಡುತ್ತಾ ವಿಡಿಯೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಾಕುತ್ತಿದ್ದ ಸವಾರನನ್ನು ಕಾಮಾಕ್ಷಿಪಾಳ್ಯ ಸಂಚಾರ ಠಾಣೆ ಪೊಲೀಸರು ಪತ್ತೆಹಚ್ಚಿದ್ದಾರೆ. ವೀಲಿಂಗ್ ಮಾಡುತ್ತ ಸಹಚರರ ಮೂಲಕ ವಿಡಿಯೋಗಳನ್ನು ಅಪ್‍ಲೋಡ್ ಮಾಡುತ್ತಿದ್ದವರನ್ನು ಪತ್ತೆ ಮಾಡಲು ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯಕ್ತರು ಒಂದು ತಂಡವನ್ನು ನೇಮಿಸಿದ್ದರು.
ಈ ತಂಡವು ನಿನ್ನೆ ಕಾರ್ಯಾಚರಣೆ ನಡೆಸಿ ಸುಮನಹಳ್ಳಿ ಪ್ಲೈ ಓವರ್ ಮೇಲೆ ಮೀಲಿಂಗ್ ಮಾಡುತ್ತಿದ್ದ ಸವಾರನನ್ನು ದ್ವಿಚಕ್ರ ವಾಹನ ಸಮೇತ ವಶಕ್ಕೆ ಪಡೆದು ಆತನ ವಿರುದ್ದ ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದೆ. ಆರೋಪಿ ಹೊಂಡಾ ಡಿಯೋ ವಾಹನದಲ್ಲಿ ವೀಲಿಂಗ್ ಮಾಡುತ್ತಾ ಸದರಿ ವೀಲಿಂಗ್ ದೃಶ್ಯಾವಳಿಗಳನ್ನು ತನ್ನ ಸ್ನೇಹಿತರುಗಳಿಂದ ವಿಡಿಯೋ/ರೀಲ್ಸ್ ಮಾಡಿಸಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರುವುದು ವಿಚಾರಣೆಯಿಂದ ತಿಳಿದುಬಂದಿರುತ್ತೆ.
ಹೊತ್ತಿ ಉರಿದ ಪ್ಲಾಸ್ಟಿಕ್ ಗೋದಾಮು: ವಾಹನಗಳು ಬೆಂಕಿಗಾಹುತಿ
ಈ ಬಗ್ಗೆ ತನಿಖೆ ಮುಂದಿವರೆಸಿ ಆರೋಪಿ ಹಾಗೂ ಆತನಿಗೆ ಸಹಕರಿಸಿದ ಇತರರ ವಿರುದ್ದ ಹೆಚ್ಚಿನ ಸಾಕ್ಷ್ಯಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಲಿದ್ದಾರೆ. ಈ ಕಾರ್ಯಾಚರಣೆಯನ್ನು ಪಶ್ಚಿಮ ಸಂಚಾರ ವಿಭಾಗದ ಉಪ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ಸಹಾಯಕ ಪೊಲೀಸ್ ಆಯುಕ್ತ ಸದಾನಂದ ಎ. ತಿಪ್ಪಣ್ಣವರ ನೇತೃತ್ವದಲ್ಲಿ ಇನ್ಸ್‍ಪೆಕ್ಟರ್ ಯೋಗೇಶ್ ಹಾಗೂ ಸಿಬ್ಬಂದಿಗಳ ತಂಡ ಕೈಗೊಂಡಿರುತ್ತೆ.
ವೀಲಿಂಗ್: ಸವಾರ ಪೊಲೀಸ್ ವಶಕ್ಕೆ
ಬೆಂಗಳೂರು, ಫೆ.23- ವೀಲಿಂಗ್ ಮಾಡುವವರನ್ನು ಪತ್ತೆಹಚ್ಚಿಲು ಹಲಸೂರು ಸಂಚಾರ ಠಾಣೆ ಪೊಲೀಸರು ವಿಶೇಷ ಕಾರ್ಯಾಚರಣೆ ಕೈಗೊಂಡು ಸವಾರನ ವಿರುದ್ಧ ಎಫ್‍ಐಆರ್ ದಾಖಲಿಸಿದ್ದಾರೆ. ಸ್ವಾಮಿ ವಿವೇಕಾನಂದ ರಸೆ ್ತಯಲ್ಲಿ ಠಾಣಾ ಸಿಬ್ಬಂದಿ ಗಸ್ತಿನಲ್ಲಿರುವಾಗ ಸವಾರನೊಬ್ಬ ಈ ರಸ್ತೆಯಲ್ಲಿ ವೀಲಿಂಗ್ ಮಾಡುತ್ತಿದ್ದಾಗ ವಾಹನ ಸಮೇತ ಆತನನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿ ಎಫ್‍ಐಆರ್ ದಾಖಲಿಸಿಕೊಂಡು ಕಾನೂನು ರೀತಿ ಕ್ರಮ ಕೈಗೊಳ್ಳಲಾಗಿದೆ ಎಂದು ಪೂರ್ವ ಸಂಚಾರ ವಿಭಾಗದ ಉಪಪೊಲೀಸ್ ಆಯುಕ್ತರಾದ ಕುಲದೀಪ್ ಕುಮಾರ್ ಆರ್. ಜೈನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಸ್ತೆ ಹಂಪ್ಸ್ ಎಗರಿ ಬಿದ್ದು ಡೆಲಿವರಿ ಬಾಯ್ ಸಾವು
ಬೆಂಗಳೂರು, ಫೆ.23- ಅತಿ ವೇಗವಾಗಿ ಬರುತ್ತಿದ್ದ ಸ್ಕೂಟರ್ ರಸ್ತೆ ಹಂಪ್ಸ್ ಬಳಿ ಬ್ರೇಕ್ ಹಾಕಿದಾಗ ಹಾರಿ ಬಿದ್ದು ಅಮೆಜಾನ್ ಡೆಲಿವರಿ ಬಾಯ್ ಮೃತಪಟ್ಟಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬೊಮ್ಮಸಂದ್ರ ನಿವಾಸಿ ಅಭಿಷೇಕ್ (26) ಮೃತಪಟ್ಟ ಡೆಲಿವರಿ ಬಾಯ್.
ಕೋನಪ್ಪ ಅಗ್ರಹಾರ ಜಂಕ್ಷನ್ ಕಡೆಯಿಂದ ಹೊಸೂರು ರಸ್ತೆ ಜಂಕ್ಷನ್ ಕಡೆಗೆ ರಾತ್ರಿ 10.40ರ ಸುಮಾರಿನಲ್ಲಿ ಅಭಿಷೇಕ್ ತನ್ನ ಸ್ಕೂಟರ್‍ನಲ್ಲಿ ಅತಿ ವೇಗವಾಗಿ ಹೋಗುತ್ತಿದ್ದರು.
ಮಾರ್ವಾಡಿ ಮನೆಗಳಲ್ಲಿ ಕಳ್ಳತನ ಮಾಡುತಿದ್ದ ಅಸ್ಸಾಂ ವ್ಯಕ್ತಿ ವಶಕ್ಕೆ
ಬೆರಟೇನ ಅಗ್ರಹಾರದ ಮೆಟ್ರೋ ನಿಲ್ದಾಣದ ಬಳಿ ರಸ್ತೆ ಹಂಪ್ ಇರುವುದು ಗಮನಿಸಿ ತಕ್ಷಣ ಬ್ರೇಕ್ ಹಾಕಿದ್ದರಿಂದ ನಿಯಂತ್ರಣ ತಪ್ಪಿ ಸುಮಾರು 35 ರಿಂದ 40 ಅಡಿ ದೂರ ಹಾರಿ ಬಿದ್ದಿದ್ದಾರೆ. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಆತನನ್ನು ಸಾರ್ವಜನಿಕರು ತಕ್ಷಣ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ದಿದ್ದಾರೆ. ಅಲ್ಲಿನ ವೈದ್ಯರು ಪರೀಕ್ಷಿಸಿ ದಾರಿಮಧ್ಯೆಯೇ ಮೃತಪಟ್ಟಿದ್ದಾರೆಂದು ತಿಳಿಸಿದ್ದಾರೆ. ಸುದ್ದಿ ತಿಳಿದು ಎಲೆಕ್ಟ್ರಾನಿಕ್ ಸಿಟಿ ಸಂಚಾರಿ ಠಾಣೆ ಪೊಲೀಸರು ಸ್ತಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.