Tuesday, April 16, 2024
Homeರಾಜ್ಯಬಿಜೆಪಿ ಅಜೆಂಡಾ ಪ್ರಜಾಪ್ರಭುತ್ವಕ್ಕೆ ವಿರುದ್ಧವಾದದ್ದು : ಜಿ.ಪರಮೇಶ್ವರ್

ಬಿಜೆಪಿ ಅಜೆಂಡಾ ಪ್ರಜಾಪ್ರಭುತ್ವಕ್ಕೆ ವಿರುದ್ಧವಾದದ್ದು : ಜಿ.ಪರಮೇಶ್ವರ್

ಕೊರಟಗೆರೆ, ಏ.3-` ಕರ್ನಾಟಕ ಸೇರಿದಂತೆ ಬಿಜೆಪಿ ಪಕ್ಷ ಅಧಿಕಾರ ಕಳೆದುಕೊಂಡಿರುವ ರಾಜ್ಯಗಳ ಮೇಲೆ ಕೇಂದ್ರ ಸರ್ಕಾರವು ಮಲತಾಯಿ ಧೋರಣೆ ತೋರುತ್ತಿದೆ ಇದು ಪ್ರಜಾ ಪ್ರಭುತ್ವಕ್ಕೆ ವಿರುದ್ಧವಾದ ಅಜೆಂಡಾವಾಗಿದೆ’ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆರೋಪಿಸಿದರು.

ಪಟ್ಟಣದ ರಾಜೀವ ಭವನದಲ್ಲಿ ಪಕ್ಷದ ವಿವಿಧ ಪದಾಧಿಕಾರಿಗಳು ಹಾಗೂ ಮುಖಂಡರ ಜೊತೆ ಸಭೆ ನಡೆಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು , `ರಾಜ್ಯಕ್ಕೆ ಬರ ಪರಿಹಾರ ಅನುದಾನ ಹಂಚಿಕೆವಿಚಾರ ಹಾಗೂ ಯೋಜನೆ ನೀಡುವುದರಲ್ಲಿ ಕೇಂದ್ರ ಸರ್ಕಾರ ತಾರತಮ್ಯ ಮಾಡುತ್ತಿದೆ ‘ ಎಂದು ಹೇಳಿದರು.

`ದೇಶದಲ್ಲಿ ಒಕ್ಕೂಟ ಪ್ರಜಾಪ್ರಭುತ್ವ ವ್ಯವಸ್ಥೆ ಇದೆ ಎಂಬುದನ್ನು ಕೇಂದ್ರ ಸರ್ಕಾರ ಮರೆತಿದೆ. ರಾಜ್ಯದಲ್ಲಿ ಭೀಕರ ಬರಗಾಲವಿದ್ದರೂ ಜನರ ಸಂಕಷ್ಟಕ್ಕೆ ಈವರೆಗೂ ಸ್ಪಂದಿಸಿಲ್ಲ, ಅನುದಾನ ನಿಡುವಂತೆ ಸುಪ್ರೀಂ ಕೋರ್ಟ್ ಮೊರೆ ಹೋಗಬೇಕಾದ ಪರಿಸ್ಥಿತಿ ಬಂದಿದೆ. ಇದು ಒಳ್ಳೆಯ ಬೆಳವಣೆಗೆಯಲ್ಲ.

ಜನರು ಬಿಜೆಪಿ ಪಕ್ಷವನ್ನು ತಿರಸ್ಕರಿಸಲಿದ್ದಾರೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ನಾಯಕರು ಆಡುವ ಮಾತುಗಳು ಗಮನಿಸಿದರೆ ದೇಶದ ಪ್ರಜಾಪ್ರಭುತ್ವಕ್ಕೆ ಅಪಾಯವಿದೆ ಎನಿಸುತ್ತದೆ, ಒಂದು ದೇಶ ಒಂದು ಚುನಾವಣೆ ಮುಂದಾಗಿದ್ದು ಸಂವಿಧಾನ ಬದಲಾಯಿಸಲು ಪ್ರಾರಂಭಿಸಿದ್ದಾರೆ’ ಎಂದು ಆರೋಪಿಸಿದರು.

`ತುಮಕೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮುದ್ದಹನುಮೇಗೌಡ ಅವರು ಸಜ್ಜನ ರಾಜಕಾರಣಿ. ಜಿಲ್ಲೆಯ ಸಮಸ್ಯೆಗಳ ಬಗ್ಗೆ ಸಂಸತ್ತಲ್ಲಿ ಧ್ವನಿ ಎತ್ತಿದವರು, ಬಿಜೆಪಿಯ ಅಭ್ಯರ್ಥಿ ಸೋಮಣ್ಣ ತುಮಕೂರಿನವರಲ್ಲ ಪಕ್ಷದ ಮುಖಂಡರು ಹೊರಗಿನವರನ್ನು ಆಭ್ಯರ್ಥಿಯನ್ನಾಗಿ ಮಾಡಿದ್ದಾರೆ, ಸಂಸದ ಬಸವರಾಜು ಅವರು ಸಂಸತ್ತನಲ್ಲಿ ಒಮ್ಮೆಯು ರಾಜ್ಯದ ನೀರಾವರಿ ಯೋಜನೆಯಾದ ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ಇನ್ನಿತರ ಸಮಸ್ಯೆಗಳ ಬಗ್ಗೆ ಮಾತನಾಡಿಲ್ಲ. ಹೊರಗಿನವರನ್ನು ಗೆಲ್ಲಿಸಿದರೆ ಯಾವ ಕೆಲಸ ಮಾಡಲು ಸಾಧ್ಯವಿಲ್ಲ ಸದಾ ಜನಜರ ಪರವಾಗಿ ನಿಲ್ಲುವ ಮುದ್ದಹನುಮೇಗೌಡರನ್ನು ಜನ ಗೆಲ್ಲಿಸಲಿದ್ದಾರೆ ‘ಎಂದು ಭರವಸೆ ವ್ಯಕ್ತಪಡಿಸಿದರು.

ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಎಸ್.ಪಿ.ಮುದ್ದಹನುಮೇಗೌಡರು ಏಪ್ರಿಲ್ 4 ರಂದು ಬೆಳಗ್ಗೆ 10.30 ಕ್ಕೆ ನಾಮಪತ್ರ ಸಲ್ಲಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಜನರು ಭಾಗವಹಿಸುವ ಮೂಲಕ ಕಾಂಗ್ರೆಸ್ ಪಕ್ಷದ ಬಲ ಹೆಚ್ಚಿಸಬೇಕು ಎಂದು ಕಾರ್ಯಕರ್ತರಿಗೆ ಪರಮೇಶ್ವರ್ ಕರೆ ನೀಡಿದರು.

RELATED ARTICLES

Latest News