ಆರ್.ಆರ್.ನಗರ ಉಪಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಭಾಯಿ ಭಾಯಿ..!?

Spread the love

ಬೆಂಗಳೂರು, ಅ.4- ರಾಜಕೀಯದಲ್ಲಿ ಯಾರೂ ಶಾಶ್ವತ ಶತ್ರುಗಳು ಅಲ್ಲ, ಶಾಶ್ವತ ಮಿತ್ರರೂ ಅಲ್ಲ ಎಂಬ ಮಾತಿದೆ. ಅದು ಕೇವಲ ಮಾತಷ್ಟೇ ಅಲ್ಲ, ಅದು ಆಗಾಗ ಸಾಬೀತಾಗುತ್ತಲೇ ಇದೆ. ಶಾಸಕ ಸ್ಥಾನಕ್ಕೆ ಮುನಿರತ್ನ ರಾಜೀನಾಮೆ ಕೊಡುವ ಮೂಲಕ ಮೈತ್ರಿ ಸರ್ಕಾರದ ಪತನಕ್ಕೆ ಕಾರಣವಾಗಿದ್ದ ಆರ್.ಆರ್. ನಗರ ಕ್ಷೇತ್ರದ ಉಪ ಚುನಾವಣೆಯಲ್ಲಿ ಮತ್ತೊಮ್ಮೆ ಆ ಮಾತು ಸಾಬೀತಾಗುವಂತೆ ಕಾಣುತ್ತಿದೆ. ಈಗ ಚುನಾವಣೆ ಎದುರಿಸಲು ಒಳ ಒಪ್ಪಂದಕ್ಕೆ ರಾಜಕೀಯ ನಾಯಕರು ಮುಂದಾಗಿದ್ದಾರೆ. ಆಶ್ಚರ್ಯ ಎಂದರೆ ಆರ್.ಆರ್. ನಗರದ ಮಟ್ಟಿಗೆ ಈ ಬಾರಿ ಜೆಡಿಎಸ್-ಬಿಜೆಪಿ ಮಧ್ಯ ಒಳ ಒಪ್ಪಂದವಾಗಿದೆ ಎನ್ನಲಾಗಿದೆ.

ತಮ್ಮ ಸರ್ಕಾರ ಬೀಳಲು ಕಾರಣವಾಗಿದ್ದ ಮುನಿರತ್ನ ಅವರನ್ನು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಏಕೆ ಬೆಂಬಲಿಸುತ್ತಾರೆ ಎಂಬುದು ಸಹಜವಾಗಿ ಏಳುವ ಪ್ರಶ್ನೆ. ಆದರೆ, ಸಿಎಂ ಯಡಿಯೂರಪ್ಪ ಹಾಗೂ ಮಾಜಿ ಸಿಎಂ ಎಚ್‍ಡಿಕೆ ಅವರ ರಾಜಕೀಯ ಲೆಕ್ಕಾಚಾರವೇ ಬೇರೆ ಇದೆ ಎನ್ನಲಾಗಿದೆ.

ಪ್ರತಿಷ್ಠೆಯ ವಿಚಾರವಾಗಿದ್ದು, ಕೊಟ್ಟ ಮಾತನ್ನು ಉಳಿಸಿಕೊಳ್ಳುವ ಹೊಣೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮೇಲಿದೆ. ಹೀಗಾಗಿಯೇ ಜೆಡಿಎಸ್ ಜೊತೆಗೆ ಒಳ ಒಪ್ಪಂದಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ. ಇದಕ್ಕೆ ಪುಷ್ಟಿ ಕೊಡುವಂತೆ ಸಿಎಂ ಯಡಿಯೂರಪ್ಪ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಅವರು ಕಳೆದ ಒಂದು ತಿಂಗಳ ಅವಯಲ್ಲಿ ಎರಡು ಬಾರಿ ಭೇಟಿ ಮಾಡಿದ್ದಾರೆ.

ಆರ್.ಆರ್. ನಗರದಲ್ಲಿ ಒಕ್ಕಲಿಗ ಸಮುದಾಯದ ಮತಗಳು ಹೆಚ್ಚಾಗಿವೆ. ಜೆಡಿಎಸ್ ಒಕ್ಕಲಿಗ ಸಮುದಾಯದ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ಮತಗಳ ವಿಭಜನೆಯಾಗುತ್ತವೆ.ಜತೆಗೆ ಅದರಿಂದ ಬಿಜೆಪಿಗೆ ಲಾಭವಾಗುತ್ತದೆ ಎಂಬುದು ರಾಜಕೀಯ ಲೆಕ್ಕಾಚಾರ. ಜತೆಗೆ ಈ ಒಪ್ಪಂದಕ್ಕೆ ಮುಂದಾಗಲು ಮತ್ತೊಂದು ಕಾರಣ ಶಿರಾ ಉಪಚುನಾವಣೆ.

ಶಿರಾ ಉಪಚುನಾವಣೆಯಲ್ಲಿ ಕಳೆದ ಚುನಾವಣೆಯಲ್ಲಿ ಬಿಜೆಪಿ ಗಳಿಸಿರುವುದು ಮೂರನೆ ಸ್ಥಾನ. ಜತೆಗೆ ಗೊಲ್ಲ ಅಭಿವೃದ್ಧಿ ನಿಗಮ ವಿಚಾರಕ್ಕೆ ಸಂಬಂಸಿದಂತೆ ಕ್ಷೇತ್ರದಲ್ಲಿ ವಿವಾದವಾಗಿದೆ. ಹೀಗಾಗಿ ನೆಲೆಯಿಲ್ಲದ ಕ್ಷೇತ್ರದಲ್ಲಿ ಗೆಲುವು ಅಸಾಧ್ಯ ಎಂಬ ತೀರ್ಮಾನಕ್ಕೆ ಬಿಜೆಪಿ ಬಂದಿದೆ ಎನ್ನಲಾಗಿದೆ. ಹೀಗಾಗಿ ಆರ್.ಆರ್. ನಗರ ಕ್ಷೇತ್ರದಲ್ಲಿ ಬಿಜೆಪಿಗೆ ಸಹಾಯ ಮಾಡಬೇಕು, ಹಾಗೆ ಶಿರಾ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷಕ್ಕೆ ಬಿಜೆಪಿ ಸಹಕಾರ ಕೊಡಬೇಕು ಎಂಬ ತೀರ್ಮಾನಕ್ಕೆ ಬರಲಾಗಿದೆ ಎನ್ನಲಾಗಿದೆ.

ಇದೇ ವಿಚಾರಕ್ಕೆ ಸಂಬಂಸಿದಂತೆ ಜೆಡಿಎಸ್ ನಾಯಕ ಕುಮಾರಸ್ವಾಮಿ ಅವರು ಆರ್.ಆರ್. ನಗರ ಜೆಡಿಎಸ್ ಟಿಕೆಟ್ ಆಕಾಂಕ್ಷಿ ಅವರೊಂದಿಗೆ ಮಾತನಾಡುವಾಗ ಬಿಜೆಪಿ ನಮಗೆ ಏನು ಮೋಸ ಮಾಡಿದೆ ಎಂದು ಪ್ರಶ್ನೆ ಮಾಡಿದ್ದಾರಂತೆ.

ರಾಜೀನಾಮೆ ಕೊಟ್ಟು ಹೋದವರು ಜೆಡಿಎಸ್-ಕಾಂಗ್ರೆಸ್ ಶಾಸಕರು. ಹೋಗಲಿಕ್ಕೆ ಬಿಟ್ಟವರು ಯಾರು? ಹೀಗಾಗಿ ಬಿಜೆಪಿ ನಾಯಕರ ಮೇಲೆ ವೃಥಾ ಆರೋಪ ಬೇಡ ಎಂದು ಕುಮಾರಸ್ವಾಮಿ ಅವರು ಆರ್.ಆರ್. ನಗರದಲ್ಲಿ ಬಿಜೆಪಿಗೆ ಬೆಂಬಲ ಕೊಡುವುದನ್ನು ಪರೋಕ್ಷವಾಗಿ ತಿಳಿಸಿದ್ದಾರೆ ಎನ್ನಲಾಗಿದೆ.

2018ರಲ್ಲಿ ನಡೆದಿದ್ದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿದ್ದ ಬಿ.ಸತ್ಯನಾರಾಯಣ ಅವರು ಕಾಂಗ್ರೆಸ್ ಪಕ್ಷದ ಟಿ.ಬಿ.ಜಯಚಂದ್ರ ಅವರ ವಿರುದ್ಧ ಗೆಲುವು ಸಾಸಿದ್ದರು. ಆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಎಸ್.ಆರ್.ಗೌಡ 16 ಸಾವಿರ ಮತಗಳನ್ನು ಪಡೆಯುವುದರೊಂದಿಗೆ ಮೂರನೆ ಸ್ಥಾನದಲ್ಲಿದ್ದರು.

80 ಸಾವಿರಕ್ಕೂ ಅಕ ಮತಗಳನ್ನು ಪಡೆಯುವ ಮೂಲಕ ಜೆಡಿಎಸ್ ಅಭ್ಯರ್ಥಿಯಾಗಿದ್ದ ದಿ. ಮಾಜಿ ಶಾಸಕ ಬಿ. ಸತ್ಯನಾರಾಯಣ ಅವರು ಗೆದ್ದಿದ್ದರು. ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಮಾಜಿ ಸಚಿವ ಟಿ.ಬಿ. ಜಯಚಂದ್ರ ಅವರು 70 ಸಾವಿರ ಮತಗಳನ್ನು ಪಡೆದಿದ್ದರು. ಬಿಜೆಪಿ ಅಭ್ಯರ್ಥಿ ಎಸ್.ಆರ್. ಗೌಡ ಅವರು ಮೂರನೆ ಸ್ಥಾನ ಹಾಗೂ ಪಕ್ಷೇತರರಾಗಿ ಸ್ರ್ಪಸಿದ್ದ ಸಿ.ಎಂ. ನಾಗರಾಜ್ ಅವರು 12 ಸಾವಿರ ಮತಗಳನ್ನು ಗಳಿಸಿದ್ದರು.

Sri Raghav

Admin