ಬೆಂಗಳೂರು,ಸೆ.14-ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೀದಿಯಲ್ಲಿ ನಿಂತು ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವ ಬೃಹನ್ನಳೆ ನಾಟಕವಾಡುತ್ತಿದ್ದಾರೆ ಎಂದು ಪ್ರತಿಪಕ್ಷ ಬಿಜೆಪಿ ಆರೋಪಿಸಿದೆ.
ಈ ಕುರಿತು ತನ್ನ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ಸಿದ್ದರಾಮಯ್ಯ ವಿರುದ್ದ ಸಾಲು ಸಾಲು ಟೀಕೆಗಳನ್ನು ಪೋಸ್ಟ್ ಮಾಡಿರುವ ಬಿಜೆಪಿ, ಎಲ್ಲದಕ್ಕೂ ಕೇಂದ್ರ ಸರ್ಕಾರದ ಮೇಲೆ ಬೊಟ್ಟು ಮಾಡುತ್ತಾ ಪತ್ರ ಬರೆಯುತ್ತೇನೆ ಎನ್ನುತ್ತಾ ಕಾಲ ಕಳೆಯುತ್ತಿರುವ ನೀವು ಮುಖ್ಯಮಂತ್ರಿ ಆಗಿರುವುದು ಯಾವ ಪುರುಷಾರ್ಥಕ್ಕೆ ಎಂದು ಪ್ರಶ್ನೆ ಮಾಡಿದೆ.
ಬಿಜೆಪಿ ಟ್ವೀಟ್ ವಿವರ:
ಗ್ಯಾರಂಟಿ ಈಡೇರಿಸಲು 10 ಕೆಜಿ ಅಕ್ಕಿ ಬೇಕು, ಕೇಂದ್ರಕ್ಕೆ ಸರ್ಕಾರಕ್ಕೆ ಪತ್ರ ಬರೆಯುತ್ತೇನೆ..!
ರಾಜ್ಯದಲ್ಲಿ ಬರಗಾಲ ತಾಂಡವವಾಡುತ್ತಿದೆ, ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುತ್ತೇನೆ..!
ಕಾವೇರಿಯಲ್ಲಿ ನೀರಿಲ್ಲ ಆದರೂ ತಮಿಳುನಾಡಿಗೆ ನೀರು ಬಿಟ್ಟಿದ್ದೇವೆ, ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುತ್ತೇನೆ..!
ರಾಜ್ಯದಲ್ಲಿ ಕಲುಷಿತ ನೀರು ಪೂರೈಕೆಯಿಂದ ಅಪಾರ ಸಾವು-ನೋವು, ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುತ್ತೇನೆ..!
ರಾಜ್ಯದಲ್ಲಿ 200ಕ್ಕೂ ಹೆಚ್ಚು ರೈತರ ಸರಣಿ ಆತ್ಮಹತ್ಯೆ, ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುತ್ತೇನೆ..!
ರಾಜ್ಯದ 195 ತಾಲೂಕುಗಳಲ್ಲಿ ಬರ ಘೋಷಣೆ: ಇಲ್ಲಿದೆ ಪಟ್ಟಿ
ರಾಜ್ಯ ಸರ್ಕಾರದ ಸಂಪುಟದಲ್ಲಿ ಗೂಂಡಾ ಸಚಿವರುಗಳ ಉಪಟಳ ಹೆಚ್ಚಾಗಿದೆ. ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುತ್ತೇನೆ..! ಎಂದು ಸಿದ್ದರಾಮಯ್ಯ ಹೇಳುತ್ತಾರೆ ಎಂದು ಬಿಜೆಪಿ ಟ್ವೀಟ್ ಮಾಡಿದೆ.
BJP Attack On CM Siddaramaiah