Friday, May 24, 2024
Homeರಾಜ್ಯಬಿಜೆಪಿ ಅಭ್ಯರ್ಥಿಗಳ ಪಟ್ಟಿ ಕೊಡುವಂತೆ ವಿಜಯೇಂದ್ರಗೆ ವರಿಷ್ಠರ ಸೂಚನೆ

ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಕೊಡುವಂತೆ ವಿಜಯೇಂದ್ರಗೆ ವರಿಷ್ಠರ ಸೂಚನೆ

ಬೆಂಗಳೂರು,ಫೆ.19- ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಪಕ್ಷದ ಎಲ್ಲ ಹಂತದ ನಾಯಕರ ಜೊತೆ ಇನ್ನೊಂದು ಸುತ್ತಿನ ಸಭೆ ನಡೆಸಿ ಬಿಜೆಪಿ ಚುನಾವಣಾ ಸಮಿತಿಗೆ ಪಟ್ಟಿಯನ್ನು ಕಳುಹಿಸಿಕೊಡುವಂತೆ ಕೇಂದ್ರ ವರಿಷ್ಠರು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಸೂಚಿಸಿದ್ದಾರೆ. ದೆಹಲಿಯಲ್ಲಿ ನಡೆದ ಪಕ್ಷದ ಕಾರ್ಯಕಾರಿಣಿ ಸಭೆ ಮುಕ್ತಾಯವಾದ ನಂತರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹಸಚಿವ ಅಮಿತ್ ಷಾ ಮತ್ತಿತರ ಪಕ್ಷದ ಪ್ರಮುಖರ ಜೊತೆ ಮಾತುಕತೆ ನಡೆಸಿರುವ ವಿಜಯೇಂದ್ರ ಲೋಕಸಭೆ ಚುನಾವಣೆಗೆ ಪೂರ್ವ ಸಿದ್ದತೆ ಕುರಿತಂತೆ ಮಾಹಿತಿ ನೀಡಿದ್ದಾರೆ.

ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗ ಆಯ್ಕೆ , ಪ್ರದೇಶವಾರು, ಜಾತಿ, ಮತದಾರರ ನಾಡಿಮಿಡಿತ ಹೀಗೆ ಪ್ರತಿಯೊಂದು ಅಂಕಿಅಂಶಗಳ ವಿವರವುಳ್ಳ ಮಾಹಿತಿಯನ್ನು ವರಿಷ್ಠರಿಗೆ ನೀಡಿದ್ದಾರೆ. ಒಂದೊಂದು ಕ್ಷೇತ್ರಕ್ಕೂ ಮೂರಕ್ಕೂ ಹೆಚ್ಚು ಆಕಾಂಕ್ಷಿಗಳ ಅಭ್ಯರ್ಥಿಗಳ ಪಟ್ಟಿಯನ್ನು ನೀಡಲಾಗಿದ್ದು ಅಂತಿಮವಾಗಿ ವರಿಷ್ಠರೇ ತೀರ್ಮಾನಿಸಬೇಕೆಂದು ವಿಜಯೇಂದ್ರ ಮನವಿ ಮಾಡಿದ್ದಾರೆ.

ಪಟ್ಟಿಯನ್ನು ವೀಕ್ಷಣೆ ಮಾಡಿರುವ ವರಿಷ್ಠರು ಇನ್ನೊಂದು ಸುತ್ತಿನ ರಾಜ್ಯ ನಾಯಕರ ಜೊತೆ ಮಾತುಕತೆ ನಡೆಸಿ ಅಂತಿಮ ಪಟ್ಟಿಯನ್ನು ಕಳುಹಿಸಿಕೊಡಿ ಇದರಲ್ಲಿ ಯಾರಿಗೆ ಟಿಕಟ್ ನೀಡಬೇಕು ಎಂಬುದನ್ನು ನಾವೇ ತೀರ್ಮಾನಿಸುತ್ತೇವೆ ಎಂದು ಹೇಳಿರುವುದಾಗಿ ತಿಳಿದುಬಂದಿದೆ.

ಇಡಿ ಮುಚ್ಚಿದರೆ ಬಿಜೆಪಿ ತೊರೆಯಲಿದ್ದಾರೆ ಘಟಾನುಘಟಿ ನಾಯಕರು : ಕೇಜ್ರಿ

ಮೂಲಗಳ ಪ್ರಕಾರ ಕೆಲವು ಕ್ಷೇತ್ರಗಳಿಗೆ ಒಂದೇ ಹೆಸರನ್ನು ಶಿಫಾರಸ್ಸು ಮಾಡಲಾಗಿದ್ದು, ತುಮಕೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಉತ್ತರ, ದಾವಣಗೆರೆ, ಕೊಪ್ಪಳ, ಬೆಳಗಾವಿ, ದಕ್ಷಿಣ ಕನ್ನಡ ಸೇರಿದಂತೆ ಒಟ್ಟು 10ರಿಂದ 12 ಕ್ಷೇತ್ರಗಳಿಗೆ ಹೊಸ ಅಭ್ಯರ್ಥಿಗಳ ಶಿಫಾರಸ್ಸು ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಇದೀಗ ವರಿಷ್ಠರ ಸೂಚನೆಯಂತೆ ವಿಜಯೇಂದ್ರ ವಿಧಾನಮಂಡಲದ ಕಲಾಪ ಮುಗಿದ ನಂತರ ಕೋರ್ ಕಮಿಟಿ ಸಭೆ ನಡೆಸಿ ಪಟ್ಟಿಯನ್ನು ಅಂತಿಮಗೊಳಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

RELATED ARTICLES

Latest News