ಬೆಂಗಳೂರು,ಫೆ.3- ಬರಲಿರುವ ವಿಧಾನಸಭೆ ಚುನಾವಣೆಗೆ ವಿಶೇಷ ರಣತಂತ್ರ ರೂಪಿಸಲು ಮುಂದಾಗಿರುವ ಆಡಳಿತಾರೂಢ ಬಿಜೆಪಿ ಸಂಜೆ ಪ್ರಮುಖ ನಾಯಕರನ್ನೊಳಗೊಂಡ ಕೋರ್ ಕಮಿಟಿ ಸಭೆ ನಡೆಯಲಿದೆ.
ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಯಲ್ಲಿ ನಡೆಯಲಿರುವ ಸಭೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ , ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸೇರಿದಂತೆ ಮತ್ತಿತರ ಪ್ರಮುಖರು ಭಾಗಿಯಾಗಲಿದ್ದಾರೆ.
ಚುನಾವಣೆಗೆ ಹಂತಿಮ ಹಂತದ ಸಿದ್ಧತೆ ಬಗ್ಗೆ ಚರ್ಚೆ ಮಾಡುವ ನಿಟ್ಟಿನಲ್ಲಿ ವಿಶೇಷ ಕೋರ್ ಕಮಿಟಿ ಸಭೆಯನ್ನು ನಡೆಯಲಿದೆ. ಸಭೆಯಲ್ಲಿ ರಾಜ್ಯದಲ್ಲಿ ಚುನಾವಣಾ ಚಿತ್ರಣ, ಅಂತಿಮ ಹಂತದ ತಯಾರಿ, ಪ್ರಚಾರ, ಸಂಭಾವ್ಯ ಅಭ್ಯರ್ಥಿಗಳ ಬಗ್ಗೆ ಮಹತ್ವದ ಸಮಾಲೋಚನೆ ನಡೆಯಲಿದೆ.
ಇದಾದ ಬಳಿಕ ಕಾರ್ಯಕಾರಿಣಿ ಸಭೆ ನಾಳೆಯೂ ನಡೆಯಲಿದೆ. ಈ ಸಭೆಯಲ್ಲಿ ಚುನಾವಣೆ ತಂತ್ರಗಾರಿಕೆಯ ಜÁರಿ ಕುರಿತಾಗಿ ಜವಾಬ್ದಾರಿಗಳನ್ನು ಹಂಚುವ ಸಾಧ್ಯತೆ ಇದೆ. ಇಷ್ಟೇ ಅಲ್ಲದೆ, ಜಿಲ್ಲೆಗಳ ಕೋರ್ ಕಮಿಟಿ, ಜಿಲ್ಲಾ ಉಸ್ತುವಾರಿಗಳು, ಸಹ ಉಸ್ತುವಾರಿಗಳ ವಿಶೇಷ ಸಭೆಗಳೂ ನಿಗದಿಯಾಗಿವೆ.
ಬಿಜೆಪಿಗೆ ಈ ಚುನಾವಣೆ ಸಾಕಷ್ಟು ಮಹತ್ವದ್ದಾಗಿದೆ. ಈಗಾಗಲೇ ರಾಷ್ಟ್ರೀಯ ನಾಯಕರು ರಾಜ್ಯಕ್ಕೆ ಹಲವು ಸುತ್ತಿನ ಪ್ರವಾಸ ಕೈಗೊಂಡಿದ್ದಾರೆ. ಪ್ರಧಾನಿ ನರೇಂದ್ರಮೋದಿ ಅವರು ಫೆಬ್ರವರಿ 6 ರಂದು ರಾಜ್ಯಕ್ಕೆ ಆಗಮಿಸಲಿದ್ದಾರೆ. ಈಗಾಗಲೇ ಜನವರಿ ತಿಂಗಳಲ್ಲಿ ಎರಡು ಬಾರಿ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ.
ಉತ್ತರ ದಕ್ಷಿಣದಿಂದ ಕಾಂಗ್ರೆಸ್ ಪ್ರತ್ಯೇಕ ಪ್ರಜಾಧ್ವನಿ ಕಹಳೆ
ಫೆಬ್ರವರಿ ತಿಂಗಳಲ್ಲಿ ಒಟ್ಟು ಮೂರು ಬಾರಿ ಪ್ರಧಾನಿ ಮೋದಿ ರಾಜ್ಯ ಪ್ರವಾಸ ನಡೆಸಲಿದ್ದಾರೆ. ಫೆಬ್ರವರಿ 6ಕ್ಕೆ ತುಮಕೂರು ಜಿಲ್ಲೆಯ ಗುಬ್ಬಿಗೆ ಆಗಮಿಸಲಿದ್ದು, ಎನ್‍ಎಎಲ್ ನೂತನ ಹೆಲಿಕಾಪ್ಟರ್ ಉತ್ಪಾದನಾ ಘಟಕ ಉದ್ಘಾಟನೆ ಮಾಡಲಿದ್ದಾರೆ. ಅದೇ ವೇದಿಕೆಯಲ್ಲಿ ಜಲಜೀವನ್ ಮಿಷನ್ ಕಾಮಗಾರಿಗೆ ಶಂಕುಸ್ಥಾಪನೆ ಮಾಡಲಿದ್ದಾರೆ. ಫೆಬ್ರವರಿ 13ಕ್ಕೆ ಬೆಂಗಳೂರಿನಲ್ಲಿ ಏರ್ ಶೋ ಉದ್ಘಾಟನೆಗೆ ಪ್ರಧಾನಿ ಮೋದಿ ಆಗಮಿಸಲಿದ್ದಾರೆ.
ಫೆಬ್ರವರಿ 27ರಂದು ಮತ್ತೆ ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಗೆ ಪ್ರಧಾನಿ ಆಗಮಿಸಲಿದ್ದಾರೆ.
ಈ ಮೂಲಕ ಮೋದಿ ಮೇನಿಯ ಸೃಷ್ಟಿಸಲು ಬಿಜೆಪಿ ತಂತ್ರ ರೂಪಿಸುತ್ತಿದೆ. ಇದರ ಜೊತೆಗೆ ಅಮಿತ್ ಶಾ ಕೂಡಾ ರಾಜ್ಯಕ್ಕೆ ಸರಣಿ ಪ್ರವಾಸ ಕೈಗೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆಯಲಿರುವ ಸಮಾವೇಶದಲ್ಲೂ ಶಾ ಭಾಗವಹಿಸಲಿದ್ದಾರೆ.
ಅಪ್ಪಿತಪ್ಪಿ ನಿಮ್ಮ ಬ್ಯಾಂಕ್ ಖಾತೆಗಳಲ್ಲಿ ಹೆಚ್ಚಿನ ವಹಿವಾಟು ನಡೆಸೀರಿ ಜೋಕೆ.. !
ಒಟ್ಟಿನಲ್ಲಿ ರಾಷ್ಟ್ರೀಯ ನಾಯಕರ ಮೂಲಕ ಚುನಾವಣಾ ಪ್ರಚಾರಕ್ಕೆ ಬಿಜೆಪಿ ಆದ್ಯತೆ ನೀಡುತ್ತಿದೆ. ಇದರ ಜೊತೆಗೆ ಸ್ಥಳೀಯವಾಗಿ ಚುನಾವಣೆಗೆ ಏನೆಲ್ಲಾ ತಂತ್ರಗಾರಿಕೆಗಳನ್ನು ಕೈಗೊಳ್ಳಬೇಕು ಎಂಬ ನಿಟ್ಟಿನಲ್ಲಿ ಸರಣಿ ಸಭೆಗಳನ್ನು ಬಿಜೆಪಿ ರಾಜ್ಯ ನಾಯಕರು ನಡೆಸುತ್ತಿದ್ದಾರೆ.
BJP, core committee, meeting,