Friday, May 3, 2024
Homeರಾಜ್ಯದಿನೇಶ್ ಗುಂಡೂರಾವ್ ಮಾನಸಿಕ ಅಸ್ವಸ್ಥರಾಗಿದ್ದಾರೆ : ಬಿಜೆಪಿ

ದಿನೇಶ್ ಗುಂಡೂರಾವ್ ಮಾನಸಿಕ ಅಸ್ವಸ್ಥರಾಗಿದ್ದಾರೆ : ಬಿಜೆಪಿ

ಬೆಂಗಳೂರು,ಏ.6- ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಥಹಳ್ಳಿಯ ವ್ಯಕ್ತಿಯೊಬ್ಬರನ್ನು ರಾಷ್ಟ್ರೀಯ ತನಿಖಾ ದಳದವರು ವಶಕ್ಕೆ ಪಡೆದ ಸುದ್ದಿ ಉಲ್ಲೇಖಿಸಿ ಎಕ್ಸ್ನಲ್ಲಿ ಪೊಸ್ಟ್ ಮಾಡಿದ್ದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಿರುದ್ಧ ಕಿಡಿಕಾರಿರುವ ಬಿಜೆಪಿ, ಸಚಿವ ದಿನೇಶ್ ಗುಂಡೂರಾವ್ ಅನಾರೋಗ್ಯಕ್ಕೆ ಒಳಗಾಗಿ ಮಾನಸಿಕ ಅಸ್ವಸ್ಥ ರಾಗಿದ್ದಾರೆ ಎಂದು ಟೀಕಿಸಿದೆ.

ಕಾಂಗ್ರೆಸ್ ಐಟಿ ಸೆಲ್ ಹರಡುವ ಸುಳ್ಳು ಸುದ್ದಿಯನ್ನೇ ಸತ್ಯ ಎಂದು ಬಿಂಬಿಸಲು ಹೊರಟಿದ್ದಾರೆ. ನೀವು ಆರೋಗ್ಯ ಸಚಿವರೋ ಅಥವಾ ಸುಳ್ಳು ಹೇಳುವ ಸಚಿವರೋ? ಎಂದು ಬಿಜೆಪಿ ಪ್ರಶ್ನಿಸಿದೆ. ಸಾಕ್ಷಿ ವಿಚಾರಣೆ, ಆರೋಪಿ ವಿಚಾರಣೆ ತಿಳಿಯದಷ್ಟು ಮೂರ್ಖರು ಸಚಿವ ಸ್ಥಾನದಲ್ಲಿ ಕೂತಿರುವುದು ದುರಂತ. ಕೂಡಲೇ ರಾಜ್ಯದ ಜನರ ಮುಂದೆ ಕ್ಷಮೆ ಕೇಳಿ ಮಾನ ಉಳಿಸಿಕೊಳ್ಳಿ ಎಂದು ಆಗ್ರಹಿಸಿದೆ.

ಟ್ವೀಟ್ನಲ್ಲಿ ಏನಿತ್ತು:
ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಥಹಳ್ಳಿಯ ಬಿಜೆಪಿ ಮುಖಂಡ ಸಾಯಿಪ್ರಸಾದ್ನನ್ನು ರಾಷ್ಟ್ರೀಯ ತನಿಖಾ ದಳದವರು ವಶಕ್ಕೆ ಪಡೆದಿದ್ದಾರೆ. ಸ್ಪೋಟಕ್ಕೆ ನಮ್ಮ ಸರ್ಕಾರವೇ ಕಾರಣ ಅನ್ನೋವಂತೆ ಮಾತಾನಾಡುತ್ತಿದ್ದ ರಾಜ್ಯದ ಕೇಸರಿ ಕಲಿಗಳು ಈಗ ಏನು ಹೇಳುತ್ತಾರೆ? ಬಿಜೆಪಿ ಮುಖಂಡನನ್ನು ಎನ್ಐಎ ವಶಕ್ಕೆ ಪಡೆದಿದೆ ಎಂದ ಮೇಲೆ ರಾಮೇಶ್ವರಂ ಕೆಫೆ ಸ್ಪೋಟದಲ್ಲಿ ಬಿಜೆಪಿ ಕೈವಾಡ ಇದೆ ಎಂದು ಅರ್ಥಅಲ್ಲವೇ? ಧರ್ಮ ರಕ್ಷಣೆ ಹೆಸರಲ್ಲಿ ರಾಜ್ಯದಲ್ಲಿ ಬಿಜೆಪಿ ನಡೆಸುತ್ತೀರೋ ಕೇಸರಿ ಭಯೋತ್ಪಾದನೆ ಎಷ್ಟು ಗಂಭೀರ ಸಮಸ್ಯೆಗಳನ್ನು ಹುಟ್ಟು ಹಾಕುತ್ತಿದೆ ಅನ್ನೋದಕ್ಕೆ ಇದಕ್ಕಿಂತಾ ಸಾಕ್ಷಿ ಬೇಕಾ? RSS ಸಿದ್ಧಾಂತಗಳನ್ನು ದೇಶದ ಮೇಲೆ ಹೇರುತ್ತಿರುವ ಕೇಂದ್ರ ಬಿಜೆಪಿಯು ಇದಕ್ಕೇನು ಹೇಳುತ್ತದೆ? ಎಂದು ಪ್ರಶ್ನಿಸಿದ್ದರು.

ರಾಷ್ಟ್ರದ ಭದ್ರತೆ ವಿಚಾರವನ್ನೂ ಲೆಕ್ಕಿಸದೇ ರಾಮೇಶ್ವರಂ ಬಾಂಬ್ ಸ್ಪೋಟ ಪ್ರಕರಣವನ್ನು ಕಾಂಗ್ರೆಸ್ ಸರ್ಕಾರದ ಮೇಲೆ ಹೊರಿಸಿದ ರಾಜ್ಯ ಬಿಜೆಪಿ ನಾಯಕರು ಈಗ ಉತ್ತರ ನೀಡಲೇ ಬೇಕು ಎಂದಿದ್ದರು.

RELATED ARTICLES

Latest News