Saturday, July 27, 2024
Homeರಾಜಕೀಯವಾಲ್ಮೀಕಿ ಅಭಿವೃದ್ದಿ ನಿಗಮದ ಭ್ರಷ್ಟಾಚಾರದಲ್ಲಿ ಕೆಲವು ಸಚಿವರು-ಶಾಸಕರು ಭಾಗಿ : ಸಿಬಿಐಗೆ ತನಿಖೆಗೆ ಬಿಜೆಪಿ ಒತ್ತಾಯ

ವಾಲ್ಮೀಕಿ ಅಭಿವೃದ್ದಿ ನಿಗಮದ ಭ್ರಷ್ಟಾಚಾರದಲ್ಲಿ ಕೆಲವು ಸಚಿವರು-ಶಾಸಕರು ಭಾಗಿ : ಸಿಬಿಐಗೆ ತನಿಖೆಗೆ ಬಿಜೆಪಿ ಒತ್ತಾಯ

ಬೆಂಗಳೂರು,ಜೂ.8– ವಾಲ್ಮೀಕಿ ಅಭಿವೃದ್ದಿ ನಿಗಮದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರದಲ್ಲಿ ಇನ್ನೂ ಕೆಲವು ಸಚಿವರು ಮತ್ತು ಶಾಸಕರು ಭಾಗಿಯಾಗಿರುವ ಸಂಶಯ ವ್ಯಕ್ತವಾಗಿದ್ದು, ರಾಜ್ಯ ಸರ್ಕಾರ ಇದನ್ನು ಸಿಬಿಐಗೆ ಒತ್ತಾಯಿಸಬೇಕೆಂದು ಪ್ರತಿಪಕ್ಷ ಬಿಜೆಪಿ ಒತ್ತಾಯಿಸಿದೆ. ಎಸ್‌‍ಐಟಿಯಿಂದ ಈ ಪ್ರಕರಣವನ್ನು ಬೇಧಿಸಲು ಸಾಧ್ಯವಿಲ್ಲ. ಏಕೆಂದರೆ ಇದು ಸರ್ಕಾರದ ಕೆಳಗೆಯೇ ಕಾರ್ಯ ನಿರ್ವಹಿಸುವುದರಿಂದ ಸಚಿವರು ಮತ್ತು ಶಾಸಕರನ್ನು ವಿಚಾರಣೆಗೆ ಕರೆಸಲು ಸಾಧ್ಯವಿಲ್ಲ. ಹೀಗಾಗಿ ಸರ್ಕಾರ ಕೂಡಲೇ ಸಿಬಿಐಗೆ ವಹಿಸುವಂತೆ ಒತ್ತಾಯಿಸಿದೆ.

ತನ್ನ ಅಧಿಕೃತ ಸಾಮಾಜಿಕ ಜಾಲತಾಣ ಎಕ್‌್ಸನಲ್ಲಿ ಪೋಸ್ಟ್‌ ಮಾಡಿರುವ ಬಿಜೆಪಿ, ಸಚಿವರಾದ ಶರಣ ಪ್ರಕಾಶ್‌ ಪಾಟೀಲ್‌ ಅವರ ಕಾರ್ಯಾಲಯದ ಸಿಸಿಟಿವಿ ದೃಶ್ಯಾವಳಿಗಳು ಹಾಗೂ ಯೂನಿಯನ್‌ ಬ್ಯಾಂಕಿನ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿರುವ ದೃಶ್ಯಗಳನ್ನು ನಾಶ ಮಾಡುವ ಸಂಭವವಿದ್ದು ಅವುಗಳನ್ನು ಕೂಡ ಸಾಕ್ಷಿಯಾಗಿ ಪರಿಗಣಿಸಬೇಕು ಎಂದು ನ್ಯಾಯಾಲಯದಲ್ಲಿ ಎಸ್‌‍ಐಟಿ ವಶದಲ್ಲಿರುವ 8ನೇ ಆರೋಪಿ ಹೇಳಿರುವುದು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕೆಂದು ಆಗ್ರಹಿಸಿದೆ.

ಮಹರ್ಷಿ ವಾಲ್ಮೀಕಿ ನಿಗಮದಲ್ಲಿ ನಡೆದ ಅವ್ಯವಹಾರ ಸರ್ಕಾರದ ಮುಖ್ಯಮಂತ್ರಿ ಆದಿಯಾಗಿ ಕಾಂಗ್ರೆಸ್ಸಿನ ಬಹುತೇಕ ನಾಯಕರು ಸೇರಿಕೊಂಡು ಮಾಡಿರುವ ಮಹಾನ್‌ ಭ್ರಷ್ಟಾಚಾರ ಎಂದು ವಾಗ್ದಾಳಿ ನಡೆಸಿದೆ.

ತನ್ನ ಮೊಬೈಲ್‌ನಲ್ಲಿ ನಿಗಮದ ಅಧ್ಯಕ್ಷರಾದ ಬಸವರಾಜ್‌ ದದ್ದಲ್‌ ಜೊತೆ ನಡೆಸಿರುವ ಸಂಭಾಷಣೆಯನ್ನು ವಶಪಡಿಸಿಕೊಂಡಿದ್ದು ಅದನ್ನು ನಾಶ ಮಾಡುವ ಸಂಭವವಿರುತ್ತದೆ. ಹಾಗಾಗಿ ಅದರ ಒಂದು ಪ್ರತಿಯನ್ನು ನ್ಯಾಯಾಲಯ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದೆ.

ಮುಖ್ಯಮಂತ್ರಿಗಳು, ಸಚಿವರು, ಶಾಸಕರು ಭಾಗಿಯಾಗಿರುವ ಈ ಒಂದು ಹಗರಣವನ್ನು ಎಸ್‌‍ಐಟಿ ನಿಷ್ಪಕ್ಷಪಾತ ತನಿಖೆ ನಡೆಸುವುದು ಅಸಾಧ್ಯ, ಆದಕಾರಣ ಸಿದ್ದರಾಮಯ್ಯನವರು ಈ ಪ್ರಕರಣವನ್ನು ಸಿಬಿಐಗೆ ವಹಿಸಿ ತಾವು ಕೂಡ ರಾಜೀನಾಮೆ ನೀಡಿ ತನಿಖೆಗೆ ಸಹಕರಿಸಬೇಕು ಎಂದು ಬಿಜೆಪಿ ಆಗ್ರಹಿಸಿದೆ.

RELATED ARTICLES

Latest News