ಬಿಜೆಪಿ ಚುನಾವಣ ರಣತಂತ್ರ: ಮೋದಿ ರ‍್ಯಾಲಿಗಳಿಗೆ ಸಿದ್ಧತೆ

Social Share

ಬೆಂಗಳೂರು,ಡಿ.12- ವಿಧಾನಸಭಾ ಚುನಾವಣೆಗೆ ಪೂರ್ವಭಾವಿಯಾಗಿ ರಾಜ್ಯ ಬಿಜೆಪಿ, ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹಸಚಿವ ಅಮಿತ್ ಶಾ, ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರಿಂದ ರಾಜ್ಯಾದ್ಯಂತ ಸಾರ್ವಜನಿಕ ಸರಣಿ ರ‍್ಯಾಲಿಗಳನ್ನು ನಡೆಸಲು ಸಿದ್ಧತೆ ನಡೆಸಿದೆ.

ಜನವರಿ ತಿಂಗಳಿನಲ್ಲಿ ಬೆಳಗಾವಿಯಲ್ಲಿ ನಡೆಯಲಿರುವ ರೈತ ಮೋರ್ಚಾ ಸಮಾವೇಶದಲ್ಲಿ ಪ್ರಧಾನಿ ಮೋದಿ ಭಾಗವಹಿಸುವ ನಿರೀಕ್ಷೆಯಿದೆ. ಇನ್ನು ಅಮಿತ್ ಶಾ ಅವರು ಚಿತ್ರದುರ್ಗದಲ್ಲಿ ಎಸ್‍ಸಿ ಮೋರ್ಚಾ
ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ, ಇದೇ ಸಂದರ್ಭದಲ್ಲಿ ಪ್ರತಿಪಕ್ಷ ಕಾಂಗ್ರೆಸ್ ಕೂಡ ಜನವರಿ 8 ರಂದು ಎಸ್‍ಸಿ/ಎಸ್‍ಟಿ ಸಮಾವೇಶವನ್ನು ಆಯೋಜಿಸಿದೆ.

ಡಿಸೆಂಬರ್ 18ರಂದು ಪಕ್ಷದ ಕಾರ್ಯಕರ್ತರ ಸಮಾವೇಶವನ್ನು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಉದ್ಘಾಟಿಸಲಿದ್ದಾರೆ. ಡಿ.15-20 ಮತ್ತು 21ರಂದು ಬಾಗಲಕೋಟೆಯಲ್ಲಿ ನಡ್ಡಾ ಅವರು ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡುವ ನಿರೀಕ್ಷೆಯಿದೆ.

ರಾಜ್ಯ ಜಿಎಸ್‍ಟಿ ಸಂಗ್ರಹ ಕುಸಿತ

ಜನವರಿ 12 ರಂದು ಉಡುಪಿಯಲ್ಲಿ ಪಕ್ಷದ ಯುವ ಮೋರ್ಚಾ ಸಮಾವೇಶದಲ್ಲಿ ಆದಿತ್ಯನಾಥ್ ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ. ಈ ಬಾರಿ ಮುಖ್ಯಮಂತ್ರಿ ಬೊಮ್ಮಾಯಿಯವರ ನೇತೃತ್ವದಲ್ಲಿ ಬಿಜೆಪಿ ಚುನಾವಣೆ ಎದುರಿಸುತ್ತಿರುವುದರಿಂದ ಆರ್‍ಎಸ್‍ಎಸ್ ಮುಖಂಡರು ಚುನಾವಣಾ ಪ್ರಚಾರ ಕುರಿತು ಮುಖ್ಯಮಂತ್ರಿಗಳ ಜತೆ ಮಾತುಕತೆ ನಡೆಸಿದ್ದಾರೆ.

ಆರ್‍ಎಸ್‍ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಅವರು ಬೊಮ್ಮಾಯಿ ಅವರನ್ನು ಭೇಟಿ ಮಾಡಿದ್ದು, ಶುಕ್ರವಾರ ರಾತ್ರಿ ಆರ್‍ಎಸ್‍ಎಸ್ ಹಿರಿಯ ಪ್ರಚಾರಕ ಮುಕುಂದ ಸಿಆರ್ ಅವರು ಸಿಎಂ ಅವರೊಂದಿಗೆ ಎರಡು ಗಂಟೆಗಳ ಕಾಲ ಸಭೆ ನಡೆಸಿದ್ದರು.

ಮಾಜಿ ಸಚಿವ ಅನಿಲ್ ದೇಶಮುಖ್‍ಗೆ ಜಾಮೀನು ಮಂಜೂರು

ಸಭೆಯಲ್ಲಿ ಸಂಪುಟ ವಿಸ್ತರಣೆ ಹಾಗೂ ಮಾಜಿ ಸಚಿವರಾದ ಕೆ.ಎಸ್.ಈಶ್ವರಪ್ಪ, ಸಿ.ಪಿ.ಯೋಗಿಶ್ವರ ಮತ್ತು ರಮೇಶ್ ಜಾರಕಿಹೊಳಿ ಅವರ ಸೇರ್ಪಡೆ ಕುರಿತು ಕೆಲವು ಸ್ಥಾನಗಳಲ್ಲಿ ಪಕ್ಷದ ಬಲ ಹೆಚ್ಚಿಸುವ ಕುರಿತು ಚರ್ಚೆ ನಡೆಸಿದರು ಎಂದು ಮೂಲಗಳು ತಿಳಿಸಿವೆ.

ರಾಜ್ಯ ಚುನಾವಣೆ ಕುರಿತು ತಂತ್ರ ರೂಪಿಸುತ್ತಿರುವವರಲ್ಲಿ ಕೇಂದ್ರ ಸಚಿವ ಭೂಪೇಂದರ್ ಯಾದವ್ ಹಾಗೂ ಪಿಯೂಷ್ ಗೋಯಲ್ ಅವರು ಪ್ರಮುಖರಾಗಿದ್ದಾರೆ.

ಗುಜರಾತ್‍ನ ಸಿಎಂ ಭೂಪೇಂದ್ರ ಪಟೇಲ್ ಅಧಿಕಾರ ಸ್ವೀಕರ

ಕೆಲವು ದಿನಗಳ ಹಿಂದಷ್ಟೇ ಸಿಎಂ ಬೊಮ್ಮಾಯಿ ದೆಹಲಿ ಭೇಟಿ ನೀಡಿದ್ದ ಸಂದರ್ಭದಲ್ಲಿ ಈ ಇಬ್ಬರೂ ನಾಯಕರನ್ನ ಭೇಟಿ ಮಾಡಿದ್ದು, ಕೆಲ ಪ್ರಮುಖ ವಿಚಾರಗಳ ಕುರಿತು ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗಿದೆ.

BJP, election, strategy, PM Modi, public, rallies,

Articles You Might Like

Share This Article