Monday, October 14, 2024
Homeರಾಜ್ಯನಾಗಮಂಗಲ ಗಲಭೆ ಪೂರ್ವ ನಿಯೋಜಿತ ಕೃತ್ಯ : ಬಿಜೆಪಿ ಸತ್ಯ ಶೋಧನಾ ಸಮಿತಿ ವರದಿ

ನಾಗಮಂಗಲ ಗಲಭೆ ಪೂರ್ವ ನಿಯೋಜಿತ ಕೃತ್ಯ : ಬಿಜೆಪಿ ಸತ್ಯ ಶೋಧನಾ ಸಮಿತಿ ವರದಿ

BJP fact finding committee report

ಬೆಂಗಳೂರು,ಸೆ.20– ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣಪತಿ ವಿಸರ್ಜನೆ ವೇಳೆ ನಡೆದ ಗಲಭೆಯು ಪೂರ್ವ ನಿಯೋಜಿತ ಕೃತ್ಯವಾಗಿದ್ದು, ಪೊಲೀಸ್‌‍ ಮತ್ತು ರಾಜ್ಯ ಸರ್ಕಾರದ ವೈಫಲ್ಯವೇ ಇದಕ್ಕೆ ಕಾರಣ ಎಂದು ಬಿಜೆಪಿ ಸತ್ಯ ಶೋಧನಾ ಸಮಿತಿ ಹೇಳಿದೆ.

ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್‌ ನಾರಾಯಣ ನೇತೃತ್ವದಲ್ಲಿ ಮಾಜಿ ಸಚಿವರಾದ ಭೈರತಿ ಬಸವರಾಜ್‌, ಕೆ.ಸಿ.ನಾರಾಯಣಗೌಡ, ಬಿಜೆಪಿ ಕಾರ್ಯದರ್ಶಿ ಲಕ್ಷ್ಮಿ ಅಶ್ವಿನ್‌ ಗೌಡ, ನಿವೃತ್ತ ಐಪಿಎಸ್‌‍ ಅಧಿಕಾರಿ ಭಾಸ್ಕರ್‌ ರಾವ್‌ ಅವರುಗಳು ಸತ್ಯ ಶೋಧನಾ ಸಮಿತಿ ವರದಿಯನ್ನು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಹಸ್ತಾಂತರಿಸಿದರು. ಸತ್ಯಶೋಧನಾ ಸಮಿತಿಯು ನಾಗಮಂಗಲ ಗಲಭೆಯನ್ನು ಪೂರ್ವ ನಿಯೋಜಿತ ಕೃತ್ಯ ಎಂಬುದನ್ನು ಉಲ್ಲೇಖಿಸಿದ್ದು, ಬಾಂಗ್ಲಾ ದೇಶದಿಂದ ಬಂದಿರುವ ಕೆಲವು ಕಿಡಿಗೇಡಿಗಳು ಇದರಲ್ಲಿ ಶಾಮೀಲಾಗಿದ್ದಾರೆ ಎಂದು ಹೇಳಿದೆ.

ದೇಶದ್ರೋಹಿಗಳು ಗಲಭೆ ಎಬ್ಬಿಸಲು ಮುಂಚಿತವಾಗಿಯೇ ಕತ್ತಿ, ತಲ್ವಾರ್‌, ಪೆಟ್ರೋಲ್‌ ಬಾಂಬ್‌, ಮಾಸ್ಕ್‌ಗಳನ್ನು ಖರೀದಿ ಮಾಡಿದ್ದಾರೆ. ಕಳೆದ ವರ್ಷ ಇಲ್ಲಿ ಗಲಭೆ ನಡೆದಿದ್ದರೂ ಗುಪ್ತಚರ ವಿಭಾಗ ಮತ್ತು ಪೊಲೀ ಸರು ಯಾವುದೇ ಮುಂಜಾಗ್ರತಾ ಕ್ರಮಗಳನ್ನು ಏಕೆ ತೆಗೆದುಕೊಂಡಿಲ್ಲ ಎಂದು ಪ್ರಶ್ನಿಸಿದೆ.

ಗಲಭೆಗೆ ರಾಜ್ಯ ಸರ್ಕಾರದ ವೈಫಲ್ಯವೂ ಪ್ರಮುಖ ಕಾರಣವಾಗಿದೆ. ನಾಗಮಂಗಲ ಸೂಕ್ಷ್ಮ ಪ್ರದೇಶ ಎಂದು ಗೊತ್ತಿದ್ದರೂ ಸ್ಥಳದಲ್ಲಿ ಹೆಚ್ಚಿನ ಪೊಲೀಸ್‌‍ ಏಕೆ ನಿಯೋಜಿಸಲಿಲ್ಲ. ಗಣಪತಿ ವಿಸರ್ಜನೆ ಇಂತಹ ದಿನವೇ ನಡೆಯುತ್ತವೆ ಎಂದು ಗೊತ್ತಿದ್ದರೂ ಗುಪ್ತಚರ ವಿಭಾಗದ ಎಡಿಜಿಪಿ ಒಂದೇ ಒಂದು ಬಾರಿ ಸ್ಥಳಕ್ಕೆ ಭೇಟಿ ಕೊಟ್ಟಿಲ್ಲ. ಇವೆಲ್ಲವೂ ಗೃಹ ಇಲಾಖೆಯ ವೈಫಲ್ಯಕ್ಕೆ ಹಿಡಿದ ಕೈಗನ್ನಡಿ ಎಂದು ಸತ್ಯಶೋಧನ ಸಮಿತಿ ಹೇಳಿದೆ.

ಗಣಪತಿ ಮೆರವಣಿಗೆ ನಡೆಯುವ ವೇಳೆ ಭದ್ರತೆಗಾಗಿ ಕೇವಲ 25 ಮಂದಿ ಪೊಲೀಸರನ್ನು ನಿಯೋಜನೆ ಮಾಡಲಾಗಿತ್ತು. ಆದರೆ ಗಲಭೆ ನಡೆಸಲು ಒಂದು ನಿರ್ಧಿಷ್ಟ ಸ್ಥಳದಲ್ಲಿ ನೂರಾರು ಮಂದಿ ಸೇರಿದ್ದರು. ಅವರ ಚಲನವಲನಗಳ ಬಗ್ಗೆ ಮಾಹಿತಿ ಕಲೆ ಹಾಕಲು ಏಕೆ ಸಾಧ್ಯವಾಗಲಿಲ್ಲ.

ಪೊಲೀಸರಿಗೆ ಮುಕ್ತ ಸ್ವಾತಂತ್ರ್ಯ ನೀಡಿದ್ದರೆ, ಗಲಭೆಯನ್ನು ನಿಯಂತ್ರಿಸಬಹುದಿತ್ತು. ಸರ್ಕಾರದ ತುಷ್ಟೀಕರಣವು ಕೂಡ ಇದಕ್ಕೆ ಮುಖ್ಯ ಕಾರಣವಾಗಿದೆ ಎಂದು ಸಮಿತಿ ಹೇಳಿದೆ.

RELATED ARTICLES

Latest News