ಬೆಂಗಳೂರು, ಮಾ.25- ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ರವರು ಸಂವಿಧಾನವನ್ನು ಗೌರವಿಸಬೇಕು, ಸಂವಿಧಾನದ ಮೂಲಕ ನಮ್ಮ ಹಕ್ಕನ್ನು ಪಡೆಯಬೇಕೆಂದು ಸಂವಿಧಾನದ ರಕ್ಷಣೆಗೆ ಇಡೀ ರಾಜ್ಯ ವ್ಯಾಪಿ ಹೋರಾಟ ನಡೆಸುತ್ತಿದ್ದಾರೆ ಹಾಗೂ ಹೊಸ ಹೊಸ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದಾರೆ.
ಆದರೆ ಬಿಜೆಪಿಗರು ಅವರು ನೀಡಿರುವ ಹೇಳಿಕೆಯನ್ನು ಉದ್ದೇಶಪೂರ್ವಕವಾಗಿ ದಾರಿ ತಪ್ಪಿಸುವ ಹಿನ್ನೆಲೆಯಲ್ಲಿ ಸಂವಿಧಾನವನ್ನು ಡಿ.ಕೆ.ಶಿವಕುಮಾರ್ ಅವರು ಬದಲಾಯಿಸುತ್ತಾರೆ ಎಂಬ ಹೇಳಿಕೆ ನೀಡಿದ್ದಾರೆ ಎಂದು ಸುಳ್ಳು ಹೇಳಿಕೆಯನ್ನು ಬಿಜೆಪಿಗರು ಸುಳ್ಳು ಸುದ್ದಿಯನ್ನು ಹರಡಿಸುತ್ತಿದ್ದಾರೆ. ಈ ಮೂಲಕ ಸಂವಿಧಾನಕ್ಕೆ ಹಾಗೂ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿರುವ ಇವರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಮಾನ್ಯ ಲೋಕಸಭಾ ಸ್ಪೀಕರ್ ಅವರಿಗೆ ಈ ಮೂಲಕ ಒತ್ತಾಯ ಪಡಿಸಲಾಗುತ್ತಿದೆ.
ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನವನ್ನು ದಿನನಿತ್ಯ ಸ್ಥರಿಸುವ ಕಾಂಗ್ರೆಸ್ಸಿಗರು ಎಂದಿಗೂ ಸಹ ಸಂವಿಧಾನವನ್ನು ವಿರೋಧಿಸುವ ಮಾತನ್ನ ಆಡುವುದಿಲ್ಲ. ಆದರೆ ಸಂವಿಧಾನವನ್ನು ಬದಲಾಯಿಸುತ್ತೇವೆ ಎಂದು ಹೇಳಿ ಬಾಬಾ ಸಾಹೇಬ್ ಅಂಬೇಡ್ಕರ್ ರವರ ಹೆಸರನ್ನು ಹೇಳುವುದು ಒಂದು ವಾಡಿಕೆ ಆಗಿದೆ ಎಂಬ ಹೇಳಿಕೆಯನ್ನು ಗೃಹ ಸಚಿವ ಅಮಿತ್ ಷಾ ಹೇಳಿಕೆ ನೀಡಿದ್ದನ್ನು ಮರೆಮಾಚಲು ಇಂತಹ ಸುಳ್ಳು ಹೇಳಿಕೆಗಳನ್ನು ನೀಡುವ ಮೂಲಕ ನಿಜವಾದ ದೇಶದ್ರೋಹದ ಹೇಳಿಕೆಗಳನ್ನು ಬಿಜೆಪಿ ನಾಯಕರು ನೀಡುತ್ತಿದ್ದಾರೆ.
ಕರ್ನಾಟಕದಲ್ಲೂ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ ಹಾಗೂ ಸುನಿಲ್ ಕುಮಾರ್ ಸಂವಿಧಾನ ಬದಲಾವಣೆಗೆ ಡಿ.ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ ಎಂಬ ಮಾಹಿತಿ ನೀಡಿರುವುದು ಅವರ ಸುಳ್ಳುತನ ಹಾಗೂ ಜನರನ್ನು ದಾರಿ ತಪ್ಪಿಸುವ ಅವರ ನೀಚತನವನ್ನು ಎತ್ತಿ ತೋರುತ್ತದೆ.
ಸಂವಿಧಾನದ ಬಗ್ಗೆ ಅಪಪ್ರಚಾರ ಮಾಡುತ್ತಿರುವ ಬಿಜೆಪಿ ನಾಯಕರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಪ್ರತಿಭಟನೆ ಹಾಗೂ ಪ್ರತಿಕೃತಿ ದಹಿಸಲಾಯಿತು. ಈ ಪ್ರತಿಭಟನೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳು ಹಾಗೂ ಎಂಇಐ ಅಧ್ಯಕ್ಷರಾದ ಎಸ್.ಮನೋಹರ್, ಮುಖಂಡರಾದ ಎ.ಆನಂದ್, ಪ್ರಕಾಶ್, ಹೇಮರಾಜು ಚಂದ್ರಶೇಖರ್, ಕೆ.ಟಿ.ನವೀನ್, ಉಮೇಶ್, ಸುಂಕದಕಟ್ಟೆ ನವೀನ್, ಕುಶಾಲ್ ಹರುವೇಗೌಡ, ಆನಂದ, ಓಬಳೇಶ್, ನವೀನ್ ಸಾಯಿ, ಚಿನ್ನಿ ಪ್ರಕಾಶ್ ಸೇರಿದಂತೆ ಹಲವು ಕಾರ್ಯಕರ್ತರು ಉಪಸ್ಥಿತರಿದ್ದರು.