ಬಿಜೆಪಿ ಜನ ಸಂಕಲ್ಪ ಯಾತ್ರೆ ರದ್ದು

Social Share

ಬೆಂಗಳೂರು,ಅ.23- ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ ನಿಧನದ ಹಿನ್ನೆಲೆಯಲ್ಲಿ ಚಿತ್ತಾಪುರ ಮತ್ತು ಆಳಂದದಲ್ಲಿ ಇಂದು ನಡೆಯಬೇಕಿದ್ದ ಜನಸಂಕಲ್ಪ ಯಾತ್ರೆಯನ್ನು ಮುಂದೂಡಲಾಗಿದೆ ಎಂದು ಸಂಯೋಜಕರೂ ಆಗಿರುವ ಎನ್.ರವಿಕುಮಾರ್ ತಿಳಿಸಿದ್ದಾರೆ.

ಇಂದು ಚಿತ್ತಾಪುರ ಮತ್ತು ಅಳಂದಗಳಲ್ಲಿ ಜನಸಂಕಲ್ಪ ಯಾತ್ರೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಜನಸಂಕಲ್ಪ ಯಾತ್ರೆಯನ್ನು ನಡೆಸಲು ಉದ್ದೇಶಿಸಲಾಗಿತ್ತು.

ವಿಧಾನಸಭೆ ಉಪಾಧ್ಯಕ್ಷ ಆನಂದ ಮಾಮನಿ ಅವರ ನಿಧನದ ಹಿನ್ನೆಲೆಯಲ್ಲಿ ಇಂದಿನ ಜನಸಂಕಲ್ಪ ಯಾತ್ರೆಯನ್ನು ಮುಂದೂಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

BIG NEWS : ನೀಟ್ ಕೌನ್ಸೆಲಿಂಗ್ ನೋಂದಣಿ ದಿನಾಂಕ ವಿಸ್ತರಣೆ

ಆನಂದ್ ಮಾಮನಿ ಅವರ ಅಕಾಲಿಕ ನಿಧನವು ಪಕ್ಷಕ್ಕೆ ಆಘಾತ ನೀಡಿದೆ. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯರೂ ಆಗಿರುವ ಎನ್.ರವಿಕುಮಾರ್ ವಿಷಾದ ವ್ಯಕ್ತಪಡಿಸಿದ್ದಾರೆ.

Articles You Might Like

Share This Article