ಹುಬ್ಬಳ್ಳಿ,ಡಿ.4- ರಾಜ್ಯದಲ್ಲಿ ಬಿಜೆಪಿಯ ಜನಸಂಕಲ್ಪ ಯಾತ್ರೆಗೆ ಅಭೂತಪೂರ್ವ ಬೆಂಬಲ ಸಿಗುತ್ತಿದೆ. ಡಿಸೆಂಬರ್ ತಿಂಗಳಲ್ಲಿ ಇದನ್ನು ಇನ್ನಷ್ಟು ತೀವ್ರಗೊಳಿಸಿ ಜನರ ವಿಶ್ವಾಸ ಪಡೆಯುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚುನಾವಣೆ ವರ್ಷ ಇರುವುದರಿಂದ ಪ್ರತಿ ಬಾರಿಯಂತೆ ಜನರ ಬಳಿ ಹೋಗುತ್ತಿದ್ದೇವೆ. ನಮ್ಮ ಜನ ಸಂಕಲ್ಪ ಯಾತ್ರೆ ಈಗಾಗಲೇ ಕಲ್ಯಾಣ ಕರ್ನಾಟಕ, ಮಧ್ಯ ಕರ್ನಾಟಕ ಹಾಗೂ ಕಿತ್ತೂರು ಕರ್ನಾಟಕ ಭಾಗದಲ್ಲಿ ನಡೆದಿದೆ. ಜನ ಸಂಕಲ್ಪ ಯಾತ್ರೆಯನ್ನು ತೀವ್ರಗೊಳಿಸುತ್ತೇವೆ ಎಂದರು.
ಇದರ ಜೊತೆಗೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಿ, ಜನರ ವಿಶ್ವಾಸ ಗಳಿಸುವ ಕೆಲಸ ಮಾಡುತ್ತೇವೆ ಎಂದುಎಂದು ತಿಳಿಸಿದರು.
ಗುಜರಾತ್ ಚುನಾವಣೆ : ನಾಳೆ 2ನೇ ಹಂತದ ಮತದಾನ
ಶಿರಾಳಕೊಪ್ಪದಲ್ಲಿ ಗೋಡೆಗಳ ಮೇಲೆ ಜಾಯಿನ್ ಪಿಎಫ್‍ಐ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಸಿಎಂ ಅದರ ಬಗ್ಗೆ ಪೊಲೀಸರು ಕ್ರಮ ತೆಗೆದುಕೊಳ್ಳುತ್ತಾರೆ ಎಂದಷ್ಟೇ ಹೇಳಿದರು.
ಅನ್ನಭಾಗ್ಯಕ್ಕೆ ಕನ್ನ : ನಕಲಿ ನ್ಯಾಯಬೆಲೆ ಅಂಗಡಿಗಳಿಂದ ರೇಷನ್ ಎತ್ತುವಳಿ
#BJP, #JanSankalpYatra, #CMBommai,