Saturday, September 14, 2024
Homeರಾಜಕೀಯ | Politicsಬಿಜೆಪಿ-ಜೆಡಿಎಸ್ ಮೈತ್ರಿ ಅಪಸ್ವರ ; ಸ್ಥಳೀಯ ನಾಯಕರಿಗೆ ಹೈ ಎಚ್ಚರಿಕೆ

ಬಿಜೆಪಿ-ಜೆಡಿಎಸ್ ಮೈತ್ರಿ ಅಪಸ್ವರ ; ಸ್ಥಳೀಯ ನಾಯಕರಿಗೆ ಹೈ ಎಚ್ಚರಿಕೆ

ಬೆಂಗಳೂರು,ಅ.10- ಬಿಜೆಪಿ-ಜೆಡಿಎಸ್ ಮೈತ್ರಿಗೆ ಅಪಸ್ವರ ಎತ್ತುತ್ತಿರುವ ನಾಯಕರ ಬಾಯಿಗೆ ಬೀಗ ಹಾಕಲು ಮುಂದಾಗಿರುವ ರಾಷ್ಟ್ರೀಯ ನಾಯಕರು ಪಕ್ಷದ ತೀರ್ಮಾನವನ್ನು ಪ್ರತಿಯೊಬ್ಬರೂ ಗೌರವಿಸದಿದ್ದರೆ ಶಿಸ್ತು ಕ್ರಮ ಜರುಗಿಸುವ ಎಚ್ಚರಿಕೆ ಕೊಟ್ಟಿದೆ. ರಾಷ್ಟ್ರ ಹಾಗೂ ಪಕ್ಷದ ಹಿತದೃಷ್ಟಿಯಿಂದ ಕೆಲವು ಸಂದರ್ಭದಲ್ಲಿ ಇಷ್ಟವಿಲ್ಲದಿದ್ದರೂ ಕೆಲವು ರಾಜಕೀಯ ತೀರ್ಮಾನವನ್ನು ತೆಗೆದುಕೊಳ್ಳಬೇಕಾಗುತ್ತದೆ.

ಜೆಡಿಎಸ್-ಬಿಜೆಪಿ ಮೈತ್ರಿ ಬಗ್ಗೆ ಏನೇ ಅಪಸ್ವರ, ಟೀಕೆಗಳು ಇದ್ದರೂ ಹೈಕಮಾಂಡ್ ತೀರ್ಮಾನವನ್ನು ಯಾರೊಬ್ಬರೂ ಪ್ರಶ್ನೆ ಮಾಡುವಂತಿಲ್ಲ ಎಂದು ತಾಕೀತು ಮಾಡಿದೆ. ಸಂಸದರಾದ ಬಿ.ಎನ್.ಬಚ್ಚೇಗೌಡ, ಡಿ.ವಿ.ಸದಾನಂದಗೌಡ, ಶಾಸಕರಾದ ಎಸ್.ಟಿ.ಸೋಮಶೇಖರ್, ಮಾಜಿ ಸಚಿವರಾದ ವಿ.ಸೋಮಣ್ಣ, ಎಂ.ಪಿ.ರೇಣುಕಾಚಾರ್ಯ, ಮಾಜಿ ಶಾಸಕ ಪ್ರೀತಂ ಗೌಡ ಸೇರಿದಂತೆ ಹಲವರು ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ ಹೈಕಮಾಂಡ್ ಈ ಸಂದೇಶ ಮಹತ್ವ ಪಡೆದುಕೊಂಡಿದೆ.

2024 ರ ಲೋಕಸಭೆ ಚುನಾವಣೆಯಲ್ಲಿ ನಮಗೆ ಒಂದೊಂದು ಕ್ಷೇತ್ರವೂ ಕೂಡ ಅತಿ ಮುಖ್ಯವಾಗಿರುತ್ತದೆ. ಕಾಂಗ್ರೆಸ್ ತನ್ನ ವೈಮನಸ್ಸು ಮರೆತು ಬಿಟ್ಟು ಹೋಗಿದ್ದ ಪಕ್ಷಗಳನ್ನೆಲ್ಲಾ ಒಗ್ಗೂಡಿಸಿಕೊಂಡು ಹೋಗುತ್ತಿದೆ. ಅಲ್ಲಿ ಸಣ್ಣ ಅಪಸ್ವರವೂ ಇಲ್ಲದಿರುವಾಗ ಇಲ್ಲಿ ಇಷ್ಟು ದೊಡ್ಡ ವಿರೋಧವೇಕೆ ಎಂದು ದೆಹಲಿ ನಾಯಕರು ಪ್ರಶ್ನಿಸಿದ್ದಾರೆ.

ಹ್ಯಾಟ್ರಿಕ್ ಗೆಲುವಿನೊಂದಿಗೆ ಮತ್ತೆ ಕೆಸಿಆರ್ ಅಧಿಕಾರಕ್ಕೆ : ಕೆಟಿಆರ್ ವಿಶ್ವಾಸ

ಮಹಾರಾಷ್ಟ್ರದಲ್ಲಿ ಶಿವಸೇನೆ ವಿರುದ್ಧ ಕಾಂಗ್ರೆಸ್ ಎನ್‍ಸಿಪಿ ಅನೇಕ ದಶಕಗಳಿಂದ ಹೋರಾಟ ಮಾಡಿಕೊಂಡೇ ಬಂದಿತ್ತು. ಉಗ್ರ ಹಿಂದುತ್ವದ ಬಿಜೆಪಿ ಹಾಗೂ ಶಿವಸೇನೆ ಮೈತ್ರಿಯನ್ನು ಅನೇಕ ಸಂದರ್ಭಗಳಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾಗಾಂಧಿ, ರಾಹುಲ್ ಗಾಂಧಿ ಸೇರಿದಂತೆ ಅನೇಕರು ಟೀಕೆ ಮಾಡಿದ್ದರು.

ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಅದೇ ಶಿವಸೇನೆ ಬಿಜೆಪಿ ಜೊತೆ ಮೈತ್ರಿ ಮುರಿದುಕೊಂಡು ಕಾಂಗ್ರೆಸ್ ಹಾಗೂ ಎನ್‍ಸಿಪಿ ಜೊತೆ ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಮಾಡಿತು. ಅಲ್ಲಿನ ಯಾವುದಾದರೂ ಸ್ಥಳೀಯ ನಾಯಕರು ಅಪಸ್ವರ ತೆಗೆದರೆ ಎಂದು ರಾಜ್ಯ ನಾಯಕರಿಗೆ ಪ್ರಶ್ನಿಸಿದೆ ಎಂದು ಗೊತ್ತಾಗಿದೆ.

ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಕೆಳಹಂತದ ಕಾರ್ಯಕರ್ತರು ಒಪ್ಪಿಕೊಳ್ಳುತ್ತಿಲ್ಲ ಎಂದು ನಮ್ಮ ಗಮನಕ್ಕೂ ಬಂದಿದೆ. ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕಾಂಗ್ರೆಸ್ ಪ್ರವರ್ಧಮಾನಕ್ಕೆ ಬರುತ್ತಿದೆ. ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಂತೇ ಲೋಕಸಭೆ ಚುನಾವಣೆಯಲ್ಲೂ ಅದೇ ಫಲಿತಾಂಶ ಪುನರಾವರ್ತನೆಯಾದರೆ 28 ಕ್ಷೇತ್ರಗಳ ಪೈಕಿ 25 ಕ್ಷೇತ್ರಗಳನ್ನು ಕಾಂಗ್ರೆಸ್ ಗೆದ್ದರೂ ಅಚ್ಚರಿ ಪಡಬೇಕಾಗಿಲ್ಲ. ಇದೀಗ ಎರಡು ಪಕ್ಷಗಳು ಮೈತ್ರಿ ಮಾಡಿಕೊಂಡಿರುವುದಿರಂದ ಕನಿಷ್ಟ ಪಕ್ಷ ನಮಗೆ 18 ರಿಂದ 20 ಸ್ಥಾನಗಳನ್ನು ಗೆಲ್ಲುವ ಅವಕಾಶವಿದೆ. ಇದಕ್ಕೆ ಯಾರೂ ಕೂಡ ವಿರೋಧ ವ್ಯಕ್ತಪಡಿಸಬಾರದು, ಜೊತೆಗೆ ಬಹಿರಂಗ ಹೇಳಿಕೆ ನೀಡಬಾರದು ಎಂದು ನಿರ್ಬಂಧ ಹಾಕಿದೆ.

ಯಶವಂತಪುರದ ಶಾಸಕ ಎಸ್.ಟಿ.ಸೋಮಶೇಖರ್ ಮೈತ್ರಿಗೆ ಏಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆಂಬ ಮರ್ಮವನ್ನು ಮೊದಲು ತಿಳಿದುಕೊಳ್ಳಿ. ಲೋಕಸಭೆ ಚುನಾವಣೆ ಬರುತ್ತಿದ್ದಂತೆ ಅವರು ಶಾಸಕ ಸ್ಥಾನಕ್ಕೆ ರಾಜಿನಾಮೆ ಕೊಡುವುದು ಬಹುತೇಕ ಖಚಿತ.

ಶಾಸಕ ಶಿವರಾಂ ಹೆಬ್ಬಾರ್ ಪರಿಸ್ಥಿತಿಯೂ ಭಿನ್ನವಾಗಿಲ್ಲ. ಮಾಜಿ ಸಚಿವರಾದ ವಿ.ಸೋಮಣ್ಣ, ಎಂ.ಪಿ.ರೇಣುಕಾಚಾರ್ಯ ಮತ್ತಿತರರು ಕಾಂಗ್ರೆಸ್ ಕದ ತಟ್ಟಿದ್ದಾರೆ. ಇವರ ಹೇಳಿಕೆಗೆ ಹೆಚ್ಚಿನ ಗಮನ ಕೊಡಬೇಡಿ. ಶೀಘ್ರದಲ್ಲೇ ಎರಡು ಪಕ್ಷಗಳ ವತಿಯಿಂದ ಬೃಹತ್ ಸಮಾವೇಶವನ್ನು ನಡೆಸಲಾಗುವುದು. ಪಕ್ಷವಿರೋಧಿ ಹೇಳಿಕೆ ಕೊಟ್ಟರೆ ಶಿಸ್ತುಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ರಾಷ್ಟ್ರೀಯ ನಾಯಕರು ಎಚ್ಚರಿಕೆ ಕೊಟ್ಟಿದ್ದಾರೆ.

ಉದ್ಯಮಿಗೆ 5.39 ಕೋಟಿ ಪಂಗನಾಮ : ಹೆಚ್ಚು ಲಾಭಕ್ಕಾಗಿ ಹೂಡಿಕೆ ಮಾಡುವ ಮುನ್ನ ಹುಷಾರ್..!

ಕರ್ನಾಟಕದ ವಾಸ್ತವ ಸ್ಥಿತಿ ಏನೆಂಬುದನ್ನು ತಿಳಿದೇ ಮೈತ್ರಿ ಮಾಡಿಕೊಂಡಿದ್ದೇವೆ. ಬಿಜೆಪಿ-ಜೆಡಿಎಸ್ ಬೆಂಬಲಕ್ಕೆ ನಿಂತಿರುವ ಪ್ರಬಲ ಎರಡು ಸಮುದಾಯಗಳು ಕೈ ಹಿಡಿದರೆ ಫಲಿತಾಂಶ ಏನು ಬೇಕಾದರೂ ಆಗಬಹುದು. ಕೆಳಹಂತದ ನಾಯಕರನ್ನು ಮನವೊಲಿಸಬೇಕು. ಮಾಧ್ಯಮಗಳ ಮುಂದೆ ಅತಿಯಾದ ಹೇಳಿಕೆ ಕೊಡಬೇಕಾದ ಅಗತ್ಯವಿಲ್ಲ ಎಂದು ರಾಷ್ಟ್ರೀಯ ನಾಯಕರು ಕಟ್ಟಪ್ಪಣೆ ವಿಸಿದ್ದಾರೆ.

RELATED ARTICLES

Latest News