Friday, May 3, 2024
Homeರಾಜಕೀಯಸಮನ್ವಯ ಸಮಿತಿ ಸಭೆ : ಕಾಂಗ್ರೆಸ್ ಕಟ್ಟಿಹಾಕಲು ಬಿಜೆಪಿ-ಜೆಡಿಎಸ್ ನಾಯಕರ ಸಮಾಗಮ

ಸಮನ್ವಯ ಸಮಿತಿ ಸಭೆ : ಕಾಂಗ್ರೆಸ್ ಕಟ್ಟಿಹಾಕಲು ಬಿಜೆಪಿ-ಜೆಡಿಎಸ್ ನಾಯಕರ ಸಮಾಗಮ

ಬೆಂಗಳೂರು,ಮಾ.29- ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ವೇಗಕ್ಕೆ ಕಡಿವಾಣ ಹಾಕಿ ದಾಖಲೆಯ ಫಲಿತಾಂಶದ ನಿರೀಕ್ಷೆಯಲ್ಲಿರುವ ಬಿಜೆಪಿ-ಜೆಡಿಎಸ್ ನಾಯಕರ ಮಹತ್ವದ ಸಮನ್ವಯ ಸಭೆ ಶುಕ್ರವಾರ ನಡೆಯಿತು. ಎರಡೂ ಪಕ್ಷಗಳ ನಾಯಕರು ಮತ್ತು ಕೆಳಹಂತದ ಕಾರ್ಯಕರ್ತರ ನಡುವೆ ಸಣ್ಣ ವೈಮನಸ್ಸಿಗೂ ಅವಕಾಶ ಕೊಡದೆ 28 ಲೋಕಸಭಾ ಕ್ಷೇತ್ರಗಳಲ್ಲಿ 25ರ ಗುರಿ ತಲುಪುವ ನಿಟ್ಟಿನಲ್ಲಿ ಈ ಸಭೆ ಮಹತ್ವ ಪಡೆದುಕೊಂಡಿತು.

ಇದೇ ಮೊದಲ ಬಾರಿಗೆ ಬಿಜೆಪಿ-ಜೆಡಿಎಸ್‍ನ ಉಭಯ ನಾಯಕರು ತಮ್ಮ ಹಳೆಯ ವೈಷಮ್ಯವನ್ನು ಮರೆತು ಸಮನ್ವಯ ಸಮಿತಿ ಸಭೆಯಲ್ಲಿ ಒಗ್ಗಟ್ಟು ಪ್ರದರ್ಶಿಸುವ ಮೂಲಕ ನಮ್ಮ ನಡುವೆ ಯಾವುದೇ ರೀತಿಯ ಭಿನ್ನಾಭಿಪ್ರಾಯ ಇಲ್ಲ ಎಂಬ ಸಂದೇಶವನ್ನು ರವಾನಿಸಿದರು.

ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಮಾಜಿ ಸಿಎಂಗಳಾದ ಎಚ್.ಡಿ.ಕುಮಾರಸ್ವಾಮಿ, ಡಿ.ವಿ.ಸದಾನಂದಗೌಡ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಬಿಜೆಪಿ ಲೋಕಸಭಾ ಚುನಾವಣಾ ರಾಜ್ಯ ಉಸ್ತುವಾರಿ ರಾಧಾ ಮೋಹನ್‍ದಾಸ್ ಅಗರವಾಲ್, ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್, ಮಾಜಿ ಸಚಿವರಾದ ಜಿ.ಟಿ.ದೇವೇಗೌಡ, ಬಂಡೆಪ್ಪ ಕಾಶ್ಯಂಪುರ್, ಸಿ.ಟಿ.ರವಿ ಸೇರಿದಂತೆ ಹಲವರು ಭಾಗವಹಿಸಿದ್ದರು. ರ್ಘ ಚರ್ಚೆ ನಡೆಸಿದ ಉಭಯತ್ರರು ಮೊದಲ ಬಾರಿಗೆ ವೇದಿಕೆಯಲ್ಲಿ ಬಿಜೆಪಿಯವರು ಕೇಸರಿ ಮತ್ತು ಜೆಡಿಎಸ್‍ನವರು ತೆನೆಹೊತ್ತ ಮಹಿಳೆಯ ಶಾಲುಗಳನ್ನು ಹಾಕಿಕೊಂಡಿದ್ದು ವಿಶೇಷವಾಗಿತ್ತು.

ಸಭೆಯಲ್ಲಿ ಮುಕ್ತವಾಗಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಎಲ್ಲರಿಗೂ ಅವಕಾಶ ನೀಡಲಾಗಿತ್ತು. ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಳ್ಳಲಾಗಿದೆ. ಯಾರಿಗೆ ಇಷ್ಟವೋ ಅಥವಾ ಕಷ್ಟವೋ ಎಂಬುದು ಮುಖ್ಯವಲ್ಲ. ಇದು ಎರಡೂ ಪಕ್ಷಗಳ ಅಸ್ತಿತ್ವದ ಪ್ರಶ್ನೆ ನಾವು ಹೆಚ್ಚು ಸ್ಥಾನ ಗೆದ್ದರೆ ಮಾತ್ರ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್‍ಗೆ ಪ್ರಬಲ ಸ್ಪರ್ಧೆ ಒಡ್ಡಲು ಸಾಧ್ಯವಾಗುತ್ತದೆ. ಇಲ್ಲದಿದ್ದರೆ ಎರಡೂ ಪಕ್ಷಗಳ ಶಾಸಕರನ್ನೇ ಅಪೋಶನ ಮಾಡಲು ಕಾಂಗ್ರೆಸ್ ಹಿಂದೆಮುಂದೆ ನೋಡುವುದಿಲ್ಲ ಎಂದು ಹೇಳಿದ್ದಾರೆ.

BJP-JDS Alliance

ಲೋಕಸಭೆ ಚುನಾವಣೆಯಲ್ಲಿ ನಮ್ಮಿಂದ ಸಣ್ಣ ಭಿನ್ನಾಭಿಪ್ರಾಯ ವ್ಯಕ್ತವಾದರೆ ಎದುರಾಳಿಗಳು ಅದನ್ನೇ ಅಸ್ತ್ರ ಮಾಡಿಕೊಳ್ಳುತ್ತವೆ. ಯಾವುದೇ ಕಾರಣಕ್ಕೂ ಇದಕ್ಕೆ ಅವಕಾಶ ಮಾಡಿಕೊಡಬಾರದು. ಏನೇ ಭಿನ್ನಾಭಿಪ್ರಾಯಗಳಿದ್ದರೂ ಪಕ್ಷಗಳ ಹಿತದೃಷ್ಟಿಯಿಂದ ಒಗ್ಗಟ್ಟಾಗಿ ಕೆಲಸ ಮಾಡಬೇಕೆಂಬ ಸಂದೇಶವನ್ನು ನೀಡಿದ್ದಾರೆ.

ನಮ್ಮ ಮುಂದೆ ದೊಡ್ಡ ಸವಾಲಿದೆ. ರಾಜ್ಯದಲ್ಲಿ ಕಾಂಗ್ರೆಸ್ ಅಕಾರದಲ್ಲಿದ್ದು, ಯಥೇಚ್ಛವಾಗಿ ಸಂಪನ್ಮೂಲಗಳನ್ನು ಬಳಕೆ ಮಾಡಲಿದೆ. ಕೇಂದ್ರ ಮತ್ತು ಹಿಂದಿನ ಸರ್ಕಾರದ ಅವಯಲ್ಲಿ ನಾವು ಮಾಡಿರುವ ಸಾಧನೆಗಳನ್ನೇ ಮುಂದಿಟ್ಟುಕೊಂಡು ಪ್ರಚಾರ ಮಾಡೋಣ. ನಮಗೆ ಹೆಚ್ಚಿನ ಸ್ಥಾನ ಗೆಲ್ಲಲು ಪೂರಕವಾದ ವಾತಾವರಣವಿದೆ. ಅದಕ್ಕೂ ಮುನ್ನ ಎಲ್ಲರೂ ಪರಸ್ಪರ ಸಮನ್ವಯ-ಒಗ್ಗಟ್ಟಿನಿಂದ ಶ್ರಮಿಸಬೇಕೆಂದು ನಾಯಕರು ಮನವಿ ಮಾಡಿಕೊಂಡರು.

ಹಾಸನ, ಮಂಡ್ಯ, ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ ಮತ್ತಿತರ ಕಡೆ ಕೆಳಹಂತದ ಕಾರ್ಯಕರ್ತರಲ್ಲಿ ಗೊಂದಲ ಇರುವುದು ನಿಜ. ಎಲ್ಲರನ್ನು ಮುಂದಿನ ದಿನಗಳಲ್ಲಿ ವಿಶ್ವಾಸಕ್ಕೆ ತೆಗೆದುಕೊಳ್ಳಲು ಆಯಾ ಪಕ್ಷಗಳ ಮುಖಂಡರೇ ಮುಂದಾಗಬೇಕು. ಸಮನ್ವಯತೆಯಿಂದ ಇದ್ದರೆ ಮಾತ್ರ ಗೆಲುವು ಸಾಧ್ಯ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಇನ್ನು ಮುಂದೆ ರಾಜ್ಯದಲ್ಲಿ ಪ್ರಧಾನಿ ನರೇಂದ್ರಮೋದಿ ಅವರು ಅಭ್ಯರ್ಥಿಗಳ ಪರ ಬಹಿರಂಗ ಪ್ರಚಾರಕ್ಕೆ ಆಗಮಿಸುವ ವೇಳೆ ಜೆಡಿಎಸ್ ವತಿಯಿಂದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಎಚ್.ಡಿ.ಕುಮಾರಸ್ವಾಮಿ ಅವರನ್ನು ಸಭೆಗೆ ಆಹ್ವಾನಿಸಬೇಕು. ಹಳೇ ಮೈಸೂರು ಭಾಗದಲ್ಲಿ ಮೋದಿಯವರೊಂದಿಗೆ ಜೆಡಿಎಸ್ ನಾಯಕರು ಕಡ್ಡಾಯವಾಗಿ ವೇದಿಕೆ ಹಂಚಿಕೊಳ್ಳಬೇಕು. ಪ್ರಚಾರದ ಸಂದರ್ಭದಲ್ಲಿ ಮೈತ್ರಿ ಪಕ್ಷದ ಪ್ರಮುಖರನ್ನು ಕಡೆಗಣಿಸಬಾರದು ಎಂದು ನಿರ್ಧರಿಸಲಾಗಿದೆ.

RELATED ARTICLES

Latest News