ಮಾಜಿ ಸಂಸದ ಕಿರಿತ್ ಸೋಮಯ್ಯ ವಾಹನದ ಮೇಲೆ ದಾಳಿ

ಮುಂಬೈ,ಏ.24- ಬಿಜೆಪಿಯ ಮಾಜಿ ಸಂಸದ ಕಿರಿತ್ ಸೋಮಯ್ಯ ಅವರ ವಾಹನದ ಮೇಲೆ ಶಂಕಿತ ಶಿವಸೇನೆ ಸದಸ್ಯರು ತಡರಾತ್ರಿ ದಾಳಿ ನಡೆಸಿ ಜಖಂಗೊಳಿಸಿದ್ದಾರೆ. ಈ ಸಂದರ್ಭದಲ್ಲಿ ಮಾಜಿ ಸಂಸದರಿಗೆ ಗಾಯಗಳಾಗಿವೆ.

ಬಂಧಿತ ದಂಪತಿಗಳಾದ ನವನೀತ್ ರಾಣಾ ಮತ್ತು ಅವರ ಪತಿ ರವಿ ರಾಣಾ ಅವರನ್ನು ಭೇಟಿಯಾಗಲು ಸೋಮಯ್ಯ ಅವರು ಹೋಗುತ್ತಿದ್ದ ಸಂದರ್ಭದಲ್ಲಿ ತಡರಾತ್ರಿ ಈ ಘಟನೆ ಸಂಭವಿಸಿದೆ.

ಪ್ರತಿಪಕ್ಷದ ನಾಯಕ ದೇವೇಂದ್ರ ಫಡ್ನವೀಸ್, ಆಸೀಸ್ ಸೆಲಾರ್ ಸೇರಿದಂತೆ ಬಿಜೆಪಿಯ ಪ್ರಮುಖರು ದಾಳಿಯನ್ನು ತೀವ್ರವಾಗಿ ಖಂಡಿಸಿ ದಾಳಿಕೋರರನ್ನು ತಕ್ಷಣ ಬಂಧಿಸಬೇಕೆಂದು ಒತ್ತಾಯಿಸಿದ್ದಾರೆ.

ಏಕಾಏಕಿ ದಾಳಿ ನಡೆಸಿರುವ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಗೃಹ ಸಚಿವ ದಿಲೀಪ್ ವಾಲ್ಸೆ ಪಾಟೀಲ್ ಅವರಿಗೆ ಪತ್ರ ಬರೆದು ಮನವಿ ಮಾಡುವುದಾಗಿ ಸೋಮಯ್ಯ ಅವರು ತಿಳಿಸಿದ್ದಾರೆ.