ಅಸಮಾಧಾನಿತರ ಮನವೊಲಿಕೆಗೆ ಸಿಎಂ-ಬಿಎಸ್‌ವೈ ರಹಸ್ಯ ಸಭೆ

Social Share

ಬೆಂಗಳೂರು,ಮಾ.14- ರಾಜ್ಯ ವಿಧಾನಸಭಾ ಚುನಾವಣೆ ಹೊಸ್ತಿಲಲ್ಲೇ ಕೆಲ ಬಿಜೆಪಿ ನಾಯಕರು ಕಾಂಗ್ರೆಸ್‍ನತ್ತ ಮುಖ ಮಾಡಿರುವುದು ಪಕ್ಷ ವರಿಷ್ಠರಿಗೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದ್ದು, ಮಹತ್ವದ ಬೆಳವಣಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಯಡಿ ಯೂರಪ್ಪ ರಹಸ್ಯ ಸಭೆ ನಡೆಸಿದ್ದಾರೆ.

ಮುಂಬರುವ ಚುನಾವಣೆಗೆ ಈಗಾಗಲೆ ರಾಜಕೀಯ ಪಕ್ಷಗಳ ತಂತ್ರ, ಪ್ರತಿತಂತ್ರಗಳು ಜೋರಾಗಿದ್ದು ಪಕ್ಷಾಂತರ ಪರ್ವವೂ ಬಿರುಸುಗೊಂಡಿದೆ. ಅದರಲ್ಲೂ ಕೆಲ ಸಚಿವರು ಕಾಂಗ್ರೆಸ್ ಸೇರುತ್ತಾರೆ ಎಂಬ ಸುದ್ದಿ ಹರಿದಾಡುತ್ತಿವೆ. ಇದರ ನಡುವೆ ಸಂಧಾನ ಮಾತುಕತೆಗಳು ಕೂಡ ಜೋರಾಗಿವೆ.

ಈ ಹಿನ್ನಲೆಯಲ್ಲಿ ಬಸವರಾಜ ಬೊಮ್ಮಾಯಿ ಅವರು ಯಡಿಯೂರಪ್ಪ ಅವರನ್ನು ಭೇಟಿ ಮಾಡಿ 40 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ. ಕರ್ನಾಟಕದಲ್ಲಿ ಮತ್ತೊಮ್ಮೆ ಕಮಲ ಅರಳಿಲು ಪ್ರಧಾನಿ ಮೋದಿ, ಅಮಿತ್ ಶಾ ಪಣ ತೊಟ್ಟಿದ್ದಾರೆ.

ಒಕ್ಕಲಿಗ ಸಮುದಾಯಕ್ಕೆ ಶಾಶ್ವತ ಕಪ್ಪುಚುಕ್ಕೆ ಮೆತ್ತುವ ಷಡ್ಯಂತ್ರ : ಹೆಚ್‌ಡಿಕೆ

ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ನೆಪದಲ್ಲಿ ರಾಜ್ಯಕ್ಕೆ ದಂಡಯಾತ್ರೆ ಕೈಗೊಂಡು ಮತಬೇಟೆ ನಡೆಸುತ್ತಿದ್ದಾರೆ. ಇದರ ನಡುವೆ ಬಿಜೆಪಿ ನಾಯಕರಿಗೆ ಕಾಂಗ್ರೆಸ್ ಗಾಳ ಹಾಕಿರುವ ವಿಚಾರ ಕಮಲ ಪಾಳಯದಲ್ಲಿ ತಳಮಳ ಸೃಷ್ಟಿಸಿದೆ. ಬಿಜೆಪಿ ತನ್ನ ನಾಯಕರನ್ನು ಹಿಡಿದಿಟ್ಟುಕೊಳ್ಳಲು ಕಸರತ್ತು ನಡೆಸಿತ್ತಿದೆ.

ಈ ಎಲ್ಲಾ ಬೆಳವಣಿಗೆಗಳ ಬೆನ್ನಲ್ಲೇ ಅಲರ್ಟ್ ಆಗಿರುವ ಸಿಎಂ ಬೊಮ್ಮಾಯಿ ಯಡಿಯೂರಪ್ಪರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿರುವುದು ಭಾರೀ ಕುತೂಹಲ ಮೂಡಿಸಿದೆ.

ಗೋವಿಂದರಾಜ ನಗರದಲ್ಲಿ ಪುತ್ರ ಅರುಣ್‍ಗೆ ಚಾಮರಾಜನಗರ ಜಿಲ್ಲೆಯ ಹನೂರು ಕ್ಷೇತ್ರದ ತನಗೆ ಟಿಕೆಟ್ ನೀಡಬೇಕೆಂದು ಸೋಮಣ್ಣ ಬೇಡಿಕೆ ಇಟ್ಟಿದ್ದಾರೆ ಎಂದು ತಿಳಿದುಬಂದಿದೆ. ಆದ್ರೆ, ಹೈಕಮಾಂಡ್ ಒಂದೇ ಕುಟುಂಬಕ್ಕೆ ಎರಡು ಟಿಕೆಟ್ ಕಷ್ಟ ಸಾಧ್ಯ ಎಂದು ಹೇಳಿದೆ. ಇದರಿಂದ ಮುನಿಸಿಕೊಂಡಿರುವ ಸೋಮಣ್ಣ ತಮ್ಮ ಪುತ್ರನ ರಾಜಕೀಯ ಭವಿಷ್ಯದ ಕುರಿತು ಕಾಂಗ್ರೆಸ್‍ನತ್ತ ಮುಖಮಾಡಿದ್ದಾರೆ ಎನ್ನಲಾಗಿದೆ.

ಬೆಂಗಳೂರು-ಮೈಸೂರು ಹೆದ್ದಾರಿ ಟೋಲ್ ಸಂಗ್ರಹ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ

ಆದ್ರೆ, ಸದ್ಯಕ್ಕೆ ಸೋಮಣ್ಣ ಜೊತೆ ಸಿಎಂ ಬಸವರಾಜ ಬೊಮ್ಮಾಯಿ, ಸೇರಿದಂತೆ ಹಲವು ಸಚಿವರು ಮಾತುಕತೆ ಮೂಲಕ ಸಮಧಾನಪಡಿಸಲು ಪಯತ್ನಿಸಿದ್ದಾರೆ. ಆದ್ರೆ, ಸೋಮಣ್ಣ ನಡೆ ದಿನದಿಂದ ದಿನಕ್ಕೆ ನಿಗೂಢವಾಗಿದೆ.

ಒಂದೆಡೆ ಸೋಮಣ್ಣ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಶತಪ್ರಯತ್ನ ಮಾಡುತ್ತಿದ್ದಾರೆ. ಮತ್ತೊಂದೆಡೆ ಕಾಂಗ್ರೆಸ್‍ನಲ್ಲಿ ವಿರೋಧ ವ್ಯಕ್ತವಾಗಿವೆ. ಯಾವುದೇ ಕಾರಣಕ್ಕೂ ಅವರನ್ನು ಕಾಂಗ್ರೆಸ್‍ಗೆ ಸೇರಿಸಿಕೊಳ್ಳುವುದು ಬೇಡ ಎಂದು ಸ್ವತಃ ಕೆಪಿಸಿಸಿ ಕಾರ್ಯಧ್ಯಕ್ಷ ಈಶ್ವರ್ ಖಂಡ್ರೆ ಸೇರಿದಂತೆ ಇನ್ನಿತರ ಲಿಂಗಾಯತ ನಾಯಕರು .ಕೆ.ಶಿವಕುಮಾರ್ ನಿಲುವಿಗೆ ವಿರೋಧ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

BJP leaders, CM Bommai, BS Yediyurappa, meeting,

Articles You Might Like

Share This Article