ಬೆಂಗಳೂರು,ಆ.10- ಅಧಿಕೃತ ವಿರೋಧ ಪಕ್ಷ ಕಾಂಗ್ರೆಸ್ ಮುಖ್ಯಮಂತ್ರಿ ಬದಲಾವಣೆಯಾಗಲಿದ್ದಾರೆ ಎಂದು ಮಾಡಿರುವ ಟ್ವೀಟ್‍ಗೆ ಕೇಸರಿ ಪಡೆ ಸಿಡಿದೆದ್ದಿದೆ. ಶೀಘ್ರದಲ್ಲೇ ರಾಜ್ಯಕ್ಕೆ ಮೂರನೇ ಮುಖ್ಯಮಂತ್ರಿ ಬರಲಿದ್ದಾರೆ ಎಂಬ ಟ್ವೀಟ್‍ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್, ಸಚಿವರು ಸೇರಿದಂತೆ ಸಾಲು ಸಾಲು ನಾಯಕರು ಕಾಂಗ್ರೆಸ್ ಮೇಲೆ ಮುಗಿಬಿದ್ದಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಬಲವಾಗಿ ಸಮರ್ಥಿಸಿಕೊಳ್ಳುತ್ತಿರುವ ಬಿಜೆಪಿ ನಾಯಕರು ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಡುವೆ ನಡೆಯುತ್ತಿರುವ ಅಕಾರ ಕುರ್ಚಿಯನ್ನು ಮರೆಮಾಚಲು ಬಿಜೆಪಿ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಕಿಡಿಕಾರಿದೆ. ಆದರೂ ಕಾಂಗ್ರೆಸ್ ಮಾಡಿರುವ ಟ್ವೀಟ್ ಆಡಳಿತಾರೂಢ ಬಿಜೆಪಿಯನ್ನು ಒಂದಿಷ್ಟು ಗೊಂದಲಕ್ಕೆ ಸಿಲಿಕಿಸಿರುವುದು ಸುಳ್ಳಲ್ಲ.
ಸಿಎಂ ಬೆಂಬಲಕ್ಕೆ ಸಚಿವರು: ಕಂದಾಯ ಸಚಿವ ಆರ್ ಅಶೋಕ್, 2023ರ ವಿಧಾನಸಭೆ ಚುನಾವಣೆ ತನವೂ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗುವುದಿಲ್ಲ, ಸಿಎಂ ಬೊಮ್ಮಾಯಿ ನೇತೃತ್ವದಲ್ಲಿಯೇ ಚುನಾವಣೆ ಎದುರಿಸಲಿದ್ದೇವೆ ಎಂದಿದ್ದಾರೆ.
ಕೇಂದ್ರ ಸಚಿವ ಅಮಿತ್ ಶಾ ಕೂಡ ಬೊಮ್ಮಾಯಿ ನಾಯಕತ್ವವನ್ನು ಕೊಂಡಾಡಿದ್ದಾರೆ. ಮುಖ್ಯಮಂತ್ರಿ ಸ್ಥಾನ ಬದಲಾವಣೆಯ ಪ್ರಶ್ನೆಯೇ ಇಲ್ಲ, ಮುಂದಿನ ವರ್ಷ ಚುನಾವಣೆ ಮುಗಿದ ನಂತರವೂ ಸರಳ ಮನುಷ್ಯ ಬೊಮ್ಮಾಯಿಯವರೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ. ಹತಾಶೆಯಿಂದ ಕಾಂಗ್ರೆಸ್ ಇಂತಹ ಸುಳ್ಳುವದಂತಿ ಹಬ್ಬಿಸುತ್ತಿದೆ.
ಕರ್ನಾಟಕಕ್ಕೆ ಬಿಜೆಪಿಯಿಂದ ಮೂರನೇ ಮುಖ್ಯಮಂತ್ರಿ ಎಂಬ ಕಾಂಗ್ರೆಸ್ ನ ಟ್ವೀಟ್ ಹಾಸ್ಯಾಸ್ಪದ. ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನಾಯಕತ್ವ ಯಾವಾಗಲೂ ಕಾಂಗ್ರೆಸ್ ನ್ನು ಮೂಲೆಗುಂಪು ಮಾಡಲಿದೆ ಎಂದು ಹೇಳಿದ್ದಾರೆ.
ಸಚಿವ ಉಮೇಶ್ ಕತ್ತಿ ಈ ಹಿಂದೆ ಹೇಳಿದ್ದರೆನ್ನಲಾದ ಸಿಎಂ ರೇಸ್ ನಲ್ಲಿ ನಾನು ಕೂಡ ಇದ್ದೇನೆ ಎಂಬ ವಿಡಿಯೊ ಕ್ಲಿಪ್‍ನ್ನು ಮಾಡಿದ್ದ ಕಾಂಗ್ರೆಸ್, ಬಿಜೆಪಿ ಸರ್ಕಾರದಲ್ಲಿ ಮೂರನೇ ಮುಖ್ಯಮಂತ್ರಿ ಬರಲಿದ್ದಾರೆ. ಅಮಿತ್ ಶಾ ಅವರು ರಾಜ್ಯಕ್ಕೆ ಬಂದುಹೋದ ಮೇಲೆ ಬಿಜೆಪಿಯಲ್ಲಿ ಮೋಡಕವಿದ ವಾತಾವರಣವಿದೆ ಎಂದು ಕೆಪಿಸಿಸಿ ನಿನ್ನೆ ಟ್ವೀಟ್ ಮಾಡಿತ್ತು.
ಅದಕ್ಕೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಪ್ರತಿಕ್ರಿಯಿಸಿ, ಶರ್ಟ್ ಬದಲಾಯಿಸುವಂತೆ ಹಿಂದೆ ವೀರೇಂದ್ರ ಪಾಟೀಲ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಬದಲಾವಣೆ ಮಾಡುವ ಸ್ಥಿತಿ ಇರುವುದು ಕಾಂಗ್ರೆಸ್‍ನಲ್ಲಿ. ಕಾಂಗ್ರೆಸ್ ಆಡಳಿತ ಸಂದರ್ಭದಲ್ಲಿ ಸಿಎಂ ಎಂದರೆ ಚಿಟ್ ಮಿನಿಸ್ಟರ್ ಎಂಬಂತಾಗಿದ್ದರು. ದಿಲ್ಲಿ ಮಾಲೀಕರು ಕಳುಹಿಸಿದ ಚೀಟಿ ಆಧಾರದ ಮೇಲೆ ಮುಖ್ಯಮಂತ್ರಿಗಳನ್ನು ಬದಲಾಯಿಸಿದ ಘನ ಉದಾಹರಣೆ ನಿಮ್ಮ ಪಕ್ಷಕ್ಕೆ ಮಾತ್ರ ಇದೆ ಎಂದು ಮೂದಲಿಸಿದ್ದರು.
ಬೊಮ್ಮಾಯಿ ನಾಯಕತ್ವವನ್ನು ಎಲ್ಲರೂ ಒಪ್ಪಿಕೊಂಡಿದ್ದು, ಮುಖ್ಯಮಂತ್ರಿ ಬದಲಾವಣೆ ಕಾಂಗ್ರೆಸ್ ನ ಭ್ರಮೆಯಷ್ಟೆ. ಬೊಮ್ಮಾಯಿ ನಾಯಕತ್ವದಲ್ಲಿ ಬಿಜೆಪಿ ಗಟ್ಟಿಯಾಗಿದೆ. ಕಾಂಗ್ರೆಸ್ ಪಕ್ಷದ ಎರಡು ಬಾಗಿಲಿನಿಂದ ಯಾರು ಇಳಿಯುತ್ತಾರೆ ಎಂದು ಸದ್ಯದಲ್ಲಿಯೇ ಗೊತ್ತಾಗಲಿದೆ ಎಂದಿದ್ದಾರೆ.
ಈ ಮಧ್ಯೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲು, ಕಾಂಗ್ರೆಸ್ ಟ್ವೀಟ್‍ಗೆ ಹರಿಹಾಯ್ದಿದ್ದಾರೆ. ವಿಡಿಯೊ ಹೇಳಿಕೆ ನೀಡಿರುವ ಅವರು, ಬೊಮ್ಮಾಯಿಯವರು ಸಿಎಂ ಅವಯನ್ನು ಪೂರ್ಣಗೊಳಿಸಲಿದ್ದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂ ಮೇಲಿನ ಇಡಿ ಕ್ರಮವನ್ನು ಮುಚ್ಚಿಹಾಕಲು ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ನಾಯಕರ ಮಧ್ಯೆ ಸಿಎಂ ಅಭ್ಯರ್ಥಿಗಾಗಿ ನಡೆಯುತ್ತಿರುವ ಜಗಳವನ್ನು ಜನರ ಮನಸ್ಸಿನಿಂದ ಮರೆಮಾಚಲು ಈ ರೀತಿ ಹೇಳಿಕೆಗಳನ್ನು ಕೊಡುತ್ತಾ ತಿರುಗುತ್ತಿದ್ದಾರೆ.
ಮುಂದಿನ ವರ್ಷ ಚುನಾವಣೆಯನ್ನು ಬಿಜೆಪಿಯು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮಾರ್ಗದರ್ಶನದಲ್ಲಿ ಸಿಎಂ ಬೊಮ್ಮಾಯಿ ನಾಯಕತ್ವದಲ್ಲಿ ಎದುರಿಸಲಿದೆ ಎಂದಿದ್ದಾರೆ.ಬಿಜೆಪಿಯಲ್ಲಿ ಗೊಂದಲ: ಇದೀಗ ದಿಢೀರ್ ಆಗಿ ಮತ್ತೆ ಸಿಎಂ ಬದಲಾವಣೆ ವಿಚಾರ ಮುಂಚೂಣಿಗೆ ಬಂದಿದೆ. ಆದರೆ ಈ ಬಾರಿ ಕಾಂಗ್ರೆಸ್ ಮುಖಂಡರಾಗಲಿ, ಪ್ರಭಾವಿ ನಾಯಕರಾಗಲಿ ಸಿಎಂ ಬದಲಾವಣೆಯ ಬಗ್ಗೆ ಭವಿಷ್ಯ ನುಡಿದಿರಲಿಲ್ಲ. ಬದಲಾಗಿ ಕಾಂಗ್ರೆಸ್ ಕೇವಲ ಟ್ವೀಟ್ ಮಾಡುವ ಮೂಲಕ ಬಿಜೆಪಿ ಮುಖಂಡರ ನಿದ್ದೆಗೆಡಿಸಿದೆ.
ರಾಜ್ಯಕ್ಕೆ ಸಂಕಟ, ಬಿಜೆಪಿಗೆ ಅಕಾರದಾಟ. ಅತಿವೃಷ್ಟಿಯಿಂದ ಜನತೆ ಪರದಾಡುತ್ತಿರುವಾಗ ಸಮರೋಪಾಯಲ್ಲಿ ನೆರವಿನ ಕಾರ್ಯ ಮಾಡುವುದನ್ನು ಬಿಟ್ಟು ಬಿಜೆಪಿ ಪಕ್ಷ 3ನೇ ಸಿಎಂ ಪ್ರತಿಷ್ಠಾಪನೆಗೆ ಕಸರತ್ತು ನಡೆಸುತ್ತಿದೆ. ರಾಜ್ಯ ಸಂಕಷ್ಟಕ್ಕೆ ಎದುರಾದಾಗಲೆಲ್ಲ ಬಿಜೆಪಿ ರಾಜಕೀಯದಾಟಕ್ಕೆ ಚಾಲನೆ ಕೊಡುತ್ತದೆ ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ಆರೋಪ ಮಾಡಿತ್ತು.