ಬೆಂಗಳೂರು,ಜು.29- ಭಾರತದಲ್ಲಿ ಉಂಟಾಗಿರುವ ನೆರೆ ಹಾವಳಿಯನ್ನು ಪರಿಶೀಲಿಸಿ ಸ್ಪಂದಿಸುವ ನಿಟ್ಟಿನಲ್ಲಿ ಪ್ರತಿಪಕ್ಷ ಬಿಜೆಪಿ ನಾಯಕರ ತಂಡವನ್ನು ರಚಿಸಿದೆ. ಈಗಾಗಲೇ ಉತ್ತರಕರ್ನಾಟಕ ಹಾಗೂ ಮಲೆನಾಡು ಭಾಗದಲ್ಲಿ ಭಾರೀ ಮಳೆಯಿಂದ ಅಪಾರ ಪ್ರಮಾಣದ ಬೆಳೆ ಹಾನಿ ಹಾಗೂ ಆಸ್ತಿಪಾಸ್ತಿ ಹಾನಿಗೊಂಡಿದ್ದು, ಈ ಸಂದರ್ಭದಲ್ಲಿ ಜನತೆಯ ಸಂಕಷ್ಟಕ್ಕೆ ಸ್ಪಂದಿಸುವ ನಿಟ್ಟಿನಲ್ಲಿ ಪ್ರತಿಪಕ್ಷದ ನಾಯಕ ಆರ್.ಅಶೋಕ್, ಮಾಜಿ ಸಚಿವರಾದ ಅಶ್ವಥನಾರಾಯಣ,
ಅರಗ ಜ್ಞಾನೇಂದ್ರ, ಶ್ರೀರಾಮುಲು ಹಾಗೂ ಮಾಜಿ ಸಚಿವೆ ಶಶಿಕಲಾ ಜೊಲ್ಲೆ , ಮೇಲನೆ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನಸಭೆಯ ವಿರೋಧ ಪಕ್ಷದ ಉಪನಾಯಕ ಅರವಿಂದ್ ಬೆಲ್ಲದ್ ನೇತೃತ್ವದಲ್ಲಿ 6 ತಂಡಗಳನ್ನು ರಚಿಸಲಾಗಿದ್ದು, ಇದರಲ್ಲಿ ಶಾಸಕರು, ಜಿಲ್ಲಾಧ್ಯಕ್ಷರು ಹಾಗೂ ರಾಜ್ಯ ಮಟ್ಟದ ಮುಖಂಡರು ಇರಲಿದ್ದು, ನಾಳೆಯಿಂದಲೇ ರಾಜ್ಯಾದ್ಯಂತ ಸಂಚರಿಸಲಿದೆ.
ವಿಧಾನಪರಿಷತ್ ವಿಪಕ್ಷ ನಾಯಕ ನಾರಾಯಣಸ್ವಾಮಿ ನೇತೃತ್ವದ ತಂಡ ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಪರಿಶೀಲನೆ ನಡೆಸಿದರೆ ಅರವಿಂದ್ ಬೆಲ್ಲದ್ ನೇತೃತ್ವದ ತಂಡ ಬಾಗಲಕೋಟೆ, ಬಿಜಾಪುರ ಜಿಲ್ಲೆಗಳಲ್ಲಿ ಪರಿಶೀಲನೆ ನಡೆಸಲಿದೆ.ಮಾಜಿ ಸಚಿವ ಬಿ.ಶ್ರೀರಾಮುಲು ನೇತೃತ್ವದ ತಂಡ ವಿಜಯನಗರಕ್ಕೆ ಭೇಟಿ ನೀಡಿ ಜನರ ಸಂಕಷ್ಟಗಳನ್ನು ಆಲಿಸಲಿದೆ. ಮಾಜಿ ಶಾಸಕ ಗಾಲಿ ಜನಾರ್ಧನ್ ರೆಡ್ಡಿ ಭಾಗಿಯಾಗಲಿದ್ದಾರೆ.
ಆರ್.ಅಶೋಕ್ ನೇತೃತ್ವದ ತಂಡ ಮಂಗಳೂರು, ಬೆಳಗಾವಿ ಜಿಲ್ಲೆಗಳಲ್ಲಿ ಅರಗ ಜ್ಞಾನೇಂದ್ರ ಅವರ ತಂಡ ಶಿವಮೊಗ್ಗ ಜಿಲ್ಲೆಗಳಲ್ಲಿ ಸಂಚರಿಸಲಿದೆ.