Thursday, May 2, 2024
Homeರಾಜ್ಯಬಿಜೆಪಿ ಶಾಸಕ ಬಸವರಾಜ ಮತ್ತಿಮಡು ಕಾರು ಅಪಘಾತ

ಬಿಜೆಪಿ ಶಾಸಕ ಬಸವರಾಜ ಮತ್ತಿಮಡು ಕಾರು ಅಪಘಾತ

ಕಲಬುರಗಿ,ಜ.14- ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಕಲಬುರಗಿ ಗ್ರಾಮೀಣ ಕ್ಷೇತ್ರದ ಬಿಜೆಪಿ ಶಾಸಕ ಬಸವರಾಜ ಮತ್ತಿಮಡು ಅವರು ಗಾಯಗೊಂಡಿರುವ ಘಟನೆ ಇಂದು ಮಧ್ಯಾಹ್ನ ನಗರದ ಹೊರವಲಯದ ಪಾಳಾ ಗ್ರಾಮದ ಬಳಿ ನಡೆದಿದೆ. ಶಾಸಕ ಹಾಗೂ ಅವರ ಜೊತೆಗಿದ್ದ ಗನ್ ಮ್ಯಾನ್ ಮತ್ತು ಆಪ್ತ ಸಹಾಯಕ ಕೂಡ ಗಾಯಗೊಂಡಿದ್ದು, ಚಾಲಕ ಗಂಭಿರವಾಗಿ ಗಾಯಗೊಂಡಿದ್ದಾನೆ.

ಆಯೋಧ್ಯೆಗೆ ಹೊಸ ಲುಕ್, ಝಗಮಗಿಸುವ ದೀಪಾಲಂಕಾರ

ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಯುನಿವರ್ಸಿಟಿ ಠಾಣೆ ಪೊಲೀಸರು ಹಾಗೂ ಸಂಚಾರಿ ಠಾಣೆ ಸಿಬ್ಬಂದಿಗಳು ಗಾಯಾಳುಗಳನ್ನ ಕಲಬುರಗಿ ನಗರದ ಯುನೈಟೆಡ್ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ತಮ್ಮ ಇನ್ನೋವಾ ಕಾರಿನಲ್ಲಿ ಶಾಸಕರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಮಾಹಿತಿ ತಿಳಿದು
ಶಾಸಕರ ಪತ್ನಿ ಜಯಶ್ರೀ ಅವರು ಆಸ್ಪತ್ರೆಗೆ ಧಾವಿಸಿದ್ದಾರೆ.

ಅಪಘಾತಕ್ಕೆ ನಿಖರ ಕಾರಣ ಗೊತ್ತಾಗುತ್ತಿಲ್ಲ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED ARTICLES

Latest News