ಬೆಂಗಳೂರು,ಮಾ.7- ರಾಸಾಯನಿಕ ವಸ್ತುಗಳನ್ನು ಪೂರೈಕೆ ಮಾಡಲು ಗುತ್ತಿಗೆದಾರರಿಂದ ಲಂಚಕ್ಕೆ ಬೇಡಿಕೆ ಇಟ್ಟು ಬಂಧನದ ಭೀತಿ ಎದುರಿಸುತ್ತಿದ್ದ ಆಡಳಿತಾರೂಢ ಬಿಜೆಪಿ ಪಕ್ಷದ ಶಾಸಕ ಮಾಡಾಳ್ ವಿರೂಪಾಕ್ಷಪ್ಪನವರಿಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ನ್ಯಾಯಾಲಯದ ಈ ತೀರ್ಪಿನಿಂದಾಗಿಮಾಡಾಳ್ ವಿರೂಪಾಕ್ಷಪ್ಪ ಸದ್ಯಕ್ಕೆ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.
ಲೋಕಾಯುಕ್ತ ಪೊಲೀಸರು ಬಂಧಿಸಬಹುದು ಎಂಬ ಹಿನ್ನಲೆಯಲ್ಲಿ ವಿರೂಪಾಕ್ಷಪ್ಪ ಹೈಕೋರ್ಟ್ ಏಕಸದಸ್ಯ ಪೀಠದ ಮುಂದೆ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು.
ಅರ್ಜಿ ವಿಚಾರಣೆ ನಡೆಸಿದ ಏಕಸದಸ್ಯ ಪೀಠದ ನ್ಯಾಯಾೀಧಿಶ ಕೆ.ನಟರಾಜನ್, ಮಾಡಾಳ್ ಅವರಿಗೆ 5 ಲಕ್ಷ ಭದ್ರತಾ ಠೇವಣಿ, ಇಬ್ಬರು ಶ್ಯೂರಿಟಿ, ನ್ಯಾಯಾಲಯದ ಆದೇಶ ತಲುಪಿದ 48 ಗಂಟೆಯೊಳಗೆ ಲೋಕಾಯುಕ್ತ ತನಿಖಾ ತಂಡದ ಮುಂದೆ ವಿಚಾರಣೆಗೆ ಹಾಜರಾಗುವುದು ಸೇರಿದಂತೆ ಕೆಲವು ಷರತ್ತುಗಳನ್ನು ವಿಧಿಸಿ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತು.
ಜಾಹೀರಾತುಗಳಲ್ಲಿ ಕಾಣಿಸಿಕೊಳ್ಳುವ ಸೆಲೆಬ್ರಿಟಿಗಳಿಗೆ ಹೊಸ ರೂಲ್ಸ್
ಲೋಕಾಯುಕ್ತ ಪೊಲೀಸರು ಸೂಕ್ತ ದಾಖಲೆ ಸಲ್ಲಿಸುವವರೆಗೂ ಜಾಮೀನು ಮಂಜೂರು ಮಾಡಲಾಗಿದೆ ಎಂದು ಆದೇಶಿಸಿ ಮುಂದಿನ ವಿಚಾರಣೆಯನ್ನು ಮಾ.17ಕ್ಕೆ ಮುಂದೂಡಿತು.
ಈ ಆದೇಶದ ಪ್ರತಿ ದೊರತ ನಂತರದ 48 ಗಂಟೆಯೊಳಗೆ ವಿರೂಪಾಕ್ಷಪ್ಪ ತನಿಖಾಕಾರ ಮುಂದೆ ಶರಣಾಗತಿಯಾಗಬೇಕು. ಸಾಕ್ಷ್ಯಗಳನ್ನು ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಬೆದರಿಸಬಾರದು. ಎಂದು ಆದೇಶಿಸಿರುವ ನ್ಯಾ.ಕೆ.ನಟರಾಜನ್, ತನಿಖಾಕಾಧಿರಿಗಳು ತನಿಖಾ ವರದಿಯನ್ನು ಸಲ್ಲಿಸಬೇಕು ಎಂದು ನಿರ್ದೇಶಿಸಿದರು.
ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಕೆ.ಸುಮನ್, ತಮ್ಮ ಕಕ್ಷಿದಾರರಾದ ಮಾಡಾಳ್ ವಿರೂಪಾಕ್ಷಪ್ಪ ಅವರು ಈ ಪ್ರಕರಣದಲ್ಲಿ ಎಲ್ಲಿಯೂ ನೇರವಾಗಿ ಭಾಗಿಯಾಗಿಲ್ಲ. ನಾಲ್ಕು ಬಾರಿ ಶಾಸಕರಾಗಿ ಕೆಎಸ್‍ಡಿಎಲ್‍ನಂತಹ ಪ್ರತಿಷ್ಠಿತ ಸಂಸ್ಥೆಯ ಅಧ್ಯಕ್ಷರಾಗಿದ್ದಾರೆ.
ಗುತ್ತಿಗೆದಾರರಿಗೆ ಅವರು ಹಣ ನೀಡುವಂತೆ ಕೇಳಿರುವುದಕ್ಕೆ ಯಾವುದೇ ಸಾಕ್ಷ್ಯಾಧಾರಗಳಿಲ್ಲ. ಹೀಗಾಗಿ ನ್ಯಾಯಾಲಯವು ಜಾಮೀನು ಮಂಜೂರು ಮಾಡಬೇಕೆಂದು ಮನವಿ ಮಾಡಿದರು.
ನಮ್ಮ ಕಕ್ಷಿದಾರರಿಗೆ 75 ವರ್ಷ ವಯಸ್ಸಾಗಿದೆ. ಅವರಿಗೆ ಹೃದಯ ಸಮಸ್ಯೆಯಿದೆ. ಇದರಲ್ಲಿ ರಾಜಕೀಯ ಪಿತೂರಿಯು ಅಡಗಿರುವುದನ್ನು ಅಲ್ಲಗೆಳೆಯುವಂತಿಲ್ಲ. ಅಲ್ಲದೆ ಲೋಕಾಯುಕ್ತ ಪೊಲೀಸರು ದಾಖಲೆಗಳನ್ನೇ ಸಲ್ಲಿಸಿಲ್ಲ. ಇದನ್ನು ಪರಿಗಣಿಸಿ ನ್ಯಾಯಾಲಯ ಜಾಮೀನು ಮಂಜೂರು ಮಾಡುವಂತೆ ನ್ಯಾಯಾೀಧಿಶರಿಗೆ ಕೋರಿದರು.
ಎಫ್‍ಐಆರ್‍ನಲ್ಲಿ ಯಾವುದೇ ಆರೋಪಗಳಿಲ್ಲ. ಲೋಕಾಯುಕ್ತ ಪೊಲೀಸರು ವಿಶೇಷ ತನಿಖಾ ತಂಡ ರಚಿಸಿದ್ದಾರೆ. ಟೆಂಡರ್ ಹಾಗೂ ಖರೀದಿ ಆದೇಶ ನೀಡಲಾಗಿದೆ. ಆದರೆ ಟೆಂಡರ್ ಅಂತಿಮಗೊಳಿಸುವ ಅಧಿಕಾರ ವಿರೂಪಾಕ್ಷಪ್ಪನವರಿಗೆ ಇಲ್ಲ. ಲಂಚಕ್ಕೆ ಯಾವುದೇ ಬೇಡಿಕೆ ಇಟ್ಟಿರುವ ಬಗ್ಗೆ ದೂರಿನಲ್ಲಿ ದಾಖಲಾಗಿಲ್ಲ. ಮಗನೊಂದಿಗೆ ಮಾತನಾಡುವಂತೆ ತಿಳಿಸಿರುವುದಾಗಿ ಆರೋಪಿಸಲಾಗಿದೆ. ಆದರೆ ಲಂಚಕ್ಕೆ ಬೇಡಿಕೆ ಇಟ್ಟ ಬಗ್ಗೆ ಆರೋಪ ಇಲ್ಲ ಎಂದು ನ್ಯಾಯಾೀಧಿಶರ ಗಮನಕ್ಕೆ ತಂದರು.
ಜಾಕ್ವೆಲಿನ್‍ಳನ್ನು ನನ್ನ ಪ್ರಾಣಕ್ಕಿಂತ ಹೆಚ್ಚು ಪ್ರೀತಿಸುತ್ತೇನೆ : ಸುಕೇಶ್
ನೀವು ಅರ್ಜಿದಾರರಿಗೆ ಹೃದಯ ಸಮಸ್ಯೆ ಇದೆ ಎಂದು ಹೇಳುತ್ತೀರಿ. ಆದರೆ ಅದನ್ನು ಅರ್ಜಿಯಲ್ಲಿ ಏಕೆ ನಮೂದಿಸಿಲ್ಲ. ಅಲ್ಲದೆ ಪೂರಕವಾದ ದಾಖಲೆಗಳನ್ನು ಏಕೆ ಸಲ್ಲಿಸಿಲ್ಲ. ಪೊಲೀಸರು ಶಾಸಕರನ್ನು ಹುಡುಕುತ್ತಿದ್ದಾರೆ. ಇಷ್ಟು ದಿನವೇ ಬಂಧಿಸಿಲ್ಲ. ಇನ್ನೆರಡು ದಿನದಲ್ಲಿ ಬಂಸುತ್ತಾರೆಯೇ ಎಂದು ನ್ಯಾಯಾೀಧಿಶ ಕೆ.ನಟರಾಜನ್ ಪ್ರಶ್ನಿಸಿದರು.
ಶಾಸಕ ಮಾಡಾಳ್ ವಿರೂಪಾಕ್ಷಪ್ಪನವರ ಪುತ್ರ ಮಾಡಾಳ್ ಪ್ರಶಾಂತ್ ಮೇಲೆ ಲೋಕಾಯುಕ್ತ ಪೊಲೀಸರು ನಡೆಸಿದ ದಾಳಿಯ ನಂತರ ಅವರ ನಿವಾಸ ಮತ್ತು ಕಚೇರಿಯಲ್ಲಿ ಲೆಕ್ಕಕ್ಕೆ ಸಿಗದ 8 ಕೋಟಿಗೂ ಅಕ ಲೆಕ್ಕಕ್ಕೆ ನಗದು ಪ್ರಕರಣ ಹಿನ್ನೆಲೆಯಲ್ಲಿ ಮಾಡಾಳ್ ವಿರೂಪಾಕ್ಷಪ್ಪ ಸೇರಿದಂತೆ ಆರು ಮಂದಿ ವಿರುದ್ಧ ಪ್ರಕರಣ ದಾಖಲಾಗಿತ್ತು.
ಪ್ರಕರಣ ನಡೆದ ನಂತರ ಮಾಡಾಳ್ ವಿರೂಪಾಕ್ಷಪ್ಪ ತಲೆಮರೆಸಿಕೊಂಡಿದ್ದಾರೆ. ಪ್ರಕರಣದಲ್ಲಿ ಅವರೇ ಎ1 ಆರೋಪಿಯಾಗಿರುವುದರಿಂದ ಬಂಧನ ಭೀತಿಯಿಂದ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದರು.
BJP, MLA, Madal Virupakshappa, gets, conditiona,l anticipatory, bail,