ಬೆಂಗಳೂರು,ಮಾ.6- ತಲೆಮರೆಸಿಕೊಂಡಿ ರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಬಂಧನಕ್ಕಾಗಿ ಲೋಕಾಯುಕ್ತ ಪೊಲೀಸರು ಶೋಧ ನಡೆಸುತ್ತಿದ್ದಾರೆ. ವಿರೂಪಾಕ್ಷಪ್ಪ ಅವರ ವಿರುದ್ಧ ಪ್ರಕರಣ ದಾಖಲಾಗುತ್ತಿದ್ದಂತೆ ಲೋಕಾಯುಕ್ತ ಪೊಲೀಸರ ಎರಡು ವಿಶೇಷ ತಂಡಗಳು ಅವರಿಗಾಗಿ ಬೆಂಗಳೂರು, ದಾವಣಗೆರೆ, ಚನ್ನಗಿರಿ ಹಾಗೂ ಇನ್ನಿತರ ಕಡೆಗಳಲ್ಲಿ ಶೋಧ ನಡೆಸಿದರೂ ಯಾವುದೇ ಪ್ರಯೋಜನ ವಾಗಿಲ್ಲ.
ಈ ನಡುವೆ ಲೋಕಾಯುಕ್ತ ಪೊಲೀಸರು ಇಂದು ಮಾಡಾಳ್ ವಿರೂಪಾಕ್ಷಪ್ಪ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡುವ ಸಾಧ್ಯತೆಯಿದೆ. ಮಗನ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ ಬೆನ್ನಲ್ಲೇ ನೈತಿಕ ಹೊಣೆ ಹೊತ್ತು ಕೆಎಸ್‍ಡಿಎಲ್ ಅಧ್ಯಕ್ಷ ಸ್ಥಾನಕ್ಕೆ ಮಾಡಾಳ್ ವಿರೂಪಾಕ್ಷಪ್ಪ ಅವರು ರಾಜೀನಾಮೆ ನೀಡಿ ಬಳಿಕ ತಲೆ ಮರೆಸಿಕೊಂಡಿದ್ದಾರೆ.
ಬಿಜೆಪಿ ಸದಸ್ಯತ್ವದಿಂದಲೇ ಮಾಡಾಳ್ ವಿರೂಪಾಕ್ಷಪ್ಪ ಉಚ್ಛಾಟನೆ..?
ವಿರೂಪಾಕ್ಷ ಅವರ ಚನ್ನಗಿರಿ ಹಾಗೂ ನಗರದ ಮನೆಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದಾಗ 6.5 ಕೋಟಿ ರೂ. ನಗದು ಹಾಗೂ ಚಿನ್ನ, ಬೆಳ್ಳಿ ಆಭರಣಗಳು ಮತ್ತು ಇನ್ನಿತರ ದಾಖಲೆಗಳು ಪತ್ತೆಯಾಗಿದ್ದು, ಅವುಗಳನ್ನು ವಶಪಡಿಸಿಕೊಂಡಿದ್ದಾರೆ.
ವಿರೂಪಾಕ್ಷಪ್ಪ ಅವರ ಮನೆ, ಎಲ್‍ಎಚ್‍ನ ಕೊಠಡಿ ಚನ್ನಗಿರಿ ಮನೆ ಹಾಗೂ ಕಚೇರಿಗೆ ನೋಟಿಸ್ ತಲುಪಿಸಲು ಲೋಕಾಯುಕ್ತ ಪೊಲೀಸರು ಸಿದ್ದತೆ ನಡೆಸಿದ್ದಾರೆ.
H3N2 ವೈರಸ್ ಬಗ್ಗೆ ಅನಗತ್ಯ ವದಂತಿ ಹಬ್ಬಿಸಬೇಡಿ : ಸಚಿವ ಸುಧಾಕರ್
ಕೆಎಸ್‍ಡಿಎಲ್‍ಗೆ ರಸಾಯನಿಕ ಪೂರೈಸುವ ಟೆಂಡರ್ ನೀಡಲು 40 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ಪ್ರಶಾಂತ್ ಮಾಡಾಳ್ ಸೇರಿದಂತೆ 5 ಮಂದಿಯನ್ನು ಲೋಕಾಯುಕ್ತ ಪೊಲೀಸರು ಮಾ.2ರಂದು ಬಂಧಿಸಿದ್ದರು.
BJP, MLA Madal Virupakshappa, Lokayukta, searching,