Friday, February 23, 2024
Homeರಾಜ್ಯಪೊಲೀಸರು ಕಾಂಗ್ರೆಸ್ ಏಜೆಂಟ್ ಆಗಿದ್ದಾರೆ : ಯತ್ನಾಳ್ ವಾಗ್ದಾಳಿ

ಪೊಲೀಸರು ಕಾಂಗ್ರೆಸ್ ಏಜೆಂಟ್ ಆಗಿದ್ದಾರೆ : ಯತ್ನಾಳ್ ವಾಗ್ದಾಳಿ

ಬೆಳಗಾವಿ,ಡಿ.5- ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಪೊಲೀಸರು ಆ ಪಕ್ಷದ ಏಜೆಂಟರ್ ಆಗಿದ್ದಾರೆ ಎಂದು ಬಿಜೆಪಿ ಹಿರಿಯ ನಾಯಕ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕರ್ನಾಟಕ ಪಾಕಿಸ್ತಾನ ಆಗುತ್ತದೆ ಎಂದು ನಾವು ಆಗಲೂ ಹೇಳಿದ್ದೆವು. ಈಗಲೂ ಹೇಳುತ್ತೇವೆ. ಒಂದು ಸಮುದಾಯವನ್ನು ಓಲೈಸಿಕೊಳ್ಳುವ ಭರದಲ್ಲಿ ಇಂತಹ ಘಟನೆಗಳು ನಡೆಯುತ್ತವೆ ಎಂದು ಕಿಡಿಕಾರಿದರು.ಪೊಲೀಸರು ಕಾಂಗ್ರೆಸ್‍ನವರ ಕೈಗೊಂಬೆಯಾಗಿದ್ದಾರೆ. ಕೇವಲ ಬಿಜೆಪಿ ಮತ್ತು ಬೇರೆ ಪಕ್ಷದವರನ್ನು ಗುರಿಯಾಗಿಟ್ಟುಕೊಂಡು ಕೆಲವರು ಹಲ್ಲೆ ಮಾಡುತ್ತಿದ್ದಾರೆ.ಇದಕ್ಕೆ ಸರ್ಕಾರದ ಕುಮ್ಮಕ್ಕು ಕೂಡ ಇದೆ ಎಂದು ಗುಡುಗಿದರು.

ಸರ್ಕಾರಿ ಹುದ್ದೆಗಳ ನೇಮಕಾತಿ ಅಕ್ರಮ ತಡೆಗೆ ಕಠಿಣ ಕಾನೂನು

ದೆಹಲಿಯಲ್ಲಿ ಒಬ್ಬರು ಮೇಡಂ ಇದ್ದರೆ, ಬೆಳಗಾವಿಯಲ್ಲಿ ಇನ್ನೊಬ್ಬ ಮೇಡಂ ಇದ್ದಾರೆ. ಅವರನ್ನು ಓಲೈಸಿಕೊಳ್ಳಲು ಚಾಕು ಇರಿತದಂತಹ ಪ್ರಕರಣಗಳನ್ನೇ ಸರ್ಕಾರ ಮುಚ್ಚಿ ಹಾಕಲು ಹೊರಟಿದೆ. ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಅವರ ಸಂಬಂಧಿಕರ ಮೇಲೆ ಲೋಕಾ ದಾಳಿ ಕುರಿತಂತೆ ಪ್ರತಿಕ್ರಿಯಿಸಿದ ಅವರು, ಯಾರೇ ಭ್ರಷ್ಟಾಚಾರ ಮಾಡಿದರೂ ಅದು ಭ್ರಷ್ಟಾಚಾರವೇ. ಅದರಲ್ಲಿ ಯಡಿಯೂರಪ್ಪ ಅಥವಾ ವಿಜಯೇಂದ್ರ ಎಂದು ಕೇಳಬೇಡಿ. ತಪ್ಪು ತಪ್ಪೇ ಎಂದು ಮಾರ್ಮಿಕವಾಗಿ ನುಡಿದರು.

ಭ್ರಷ್ಟರು ಭ್ರಷ್ಟರೇ ನಾನು ಭ್ರಷ್ಟಾಚಾರ ಮಾಡಿದರೂ ಭ್ರಷ್ಟನೇ . ಡಿ.ಕೆ.ಶಿವಕುಮಾರ್ ಮಾಡಿದರೂ ಭ್ರಷ್ಟರೇ ಎಂದರು. ಯಾರು ಕರ್ನಾಟಕವನ್ನು ಲೂಟಿ ಹೊಡೆದಿದ್ದಾರೆ, ಕರ್ನಾಟಕವನ್ನು ಲೂಟಿ ಮಾಡಿ ಸಿಂಗಾಪುರ ಮಾರಿಶಸ್ ನಲ್ಲಿ ಹೂಡಿಕೆ ಮಾಡಿದ್ದಾರೆ ಅದರ ಬಗ್ಗೆ ತನಿಖೆ ಆಗಬೇಕು ಹಾಗೂ ಜೈಲಿಗೆ ಹೋಗಬೇಕು.

ಅಲ್ಪಸಂಖ್ಯಾತರಿಗೆ ಅನುದಾನ ಬಿಡುಗಡೆ ಮಾಡುವ ಸಿದ್ದರಾಮಯ್ಯ ವಿಚಾರ ಕುರಿತು ಮಾತನಾಡಿದ ಅವರು, ಪಾಕಿಸ್ತಾನದವರ ಸರ್ಕಾರ ಬಂದಂತಾಗಿದೆ. ಇಂತಹ ಸರ್ಕಾರ ಇದೇ ಉದ್ಧಟತನ ಮುಂದುವರಿಸಿದರೆ ಅತೀ ಹೆಚ್ಚು ಮತಗಳಿಂದ ಬಿಜೆಪಿ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿ ಕಾರ್ಯಕರ್ತ ಪೃಥ್ವಿ ಸಿಂಗ್ ಮೇಲೆ ಹಲ್ಲೆ ಪ್ರಕರಣದಲ್ಲಿ ಇಷ್ಟೆಲ್ಲಾ ದಾಖಲೆ ಇರುವಾಗ ಸರ್ಕಾರ ಹಾಗೂ ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳಬೇಕು. ಪೊಲೀಸ್ ಇಲಾಖೆ ಇಲ್ಲಿಯ ಮೇಡಂ ಕೈಗೊಂಬೆಯಾಗಿದ್ದಾರೆ. ಬೆಳಗಾವಿ ಸುಸಂಸ್ಕೃತವಾದ ಜಿಲ್ಲೆ ಗುಂಡಾಗಿರಿ ಯಾರು ಪ್ರಾರಂಭ ಮಾಡಿದ್ದಾರೆ ಅವರ ಅಂತ್ಯ ಕಾಣಲಿದೆ ಎಂದು ಭವಿಷ್ಯ ನುಡಿದರು.

RELATED ARTICLES

Latest News