Wednesday, February 28, 2024
Homeರಾಜಕೀಯಸಿದ್ದು ದೇವರೆಂದ ಸತೀಶ್ ಜಾರಕಿಹೊಳಿಗೆ ತಿವಿದ ಯತ್ನಾಳ್

ಸಿದ್ದು ದೇವರೆಂದ ಸತೀಶ್ ಜಾರಕಿಹೊಳಿಗೆ ತಿವಿದ ಯತ್ನಾಳ್

ಬೆಂಗಳೂರು,ಜ.8- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೇವರಂತೆ ನೋಡುತ್ತೇನೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿರುವುದಕ್ಕೆ ಬಿಜೆಪಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿರುಗೇಟು ನೀಡಿದ್ದಾರೆ.

ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‍ನಲ್ಲಿ ಈ ಕುರಿತು ಮಾತನಾಡಿರುವ ಅವರು, ಇಂಥ ಊಸರವಳ್ಳಿಯಂತೆ ಬಣ್ಣ ಬದಲಿಸುವ ರಾಜಕಾರಣಿಗಳಿಂದಲೇ ಉತ್ತರ ಕರ್ನಾಟಕ ಅಭಿವೃದ್ಧಿ ಮರೀಚಿಕೆಯಾಗಿದೆ ಎಂದು ಟೀಕಿಸಿದ್ದಾರೆ. ವ್ಯಕ್ತಿ ಪೂಜೆ ಮಾಡೋದಿಲ್ಲ, ದೇವರಲ್ಲಿ ನಂಬಿಕೆಯಿಲ್ಲ, ಹಿಂದೂ ಪೂಜೆಗಳಲ್ಲಿ, ಆಚರಣೆಗಳಲ್ಲಿ ನಂಬಿಕೆ ಇಲ್ಲದವರು ರಾಜಕೀಯ ಅಸ್ತಿತ್ವಕ್ಕಾಗಿ ಸಿದ್ದರಾಮಯ್ಯನವರನ್ನು ತಮ್ಮ ಮನೆ ದೇವರಾಗಿ ಮಾಡಿಕೊಂಡಿರುವ ನೀವು ಎಂತಹ ಅವಕಾಶವಾದಿಗಳು ಎಂದು ಜನತೆಗೆ ಗೊತ್ತಾಗುತ್ತಿದೆ. ಸಂದರ್ಭಕ್ಕೆ ತಕ್ಕಂತೆ ಊಸರವಳ್ಳಿಯ ರೀತಿ ಬಣ್ಣ ಬದಲಿಸುವ ರಾಜಕಾರಣಿಗಳಿಂದಲೇ ಉತ್ತರ ಕರ್ನಾಟಕಕ್ಕೆ ಅಭಿವೃದ್ಧಿ ಮರೀಚಿಕೆ ಆಗಿದೆ ಎಂದು ಉಲ್ಲೇಖಿಸಿದ್ದಾರೆ.

ಛತ್ತೀಸ್‍ಗಢದಲ್ಲಿ ಬಿಜೆಪಿ ನಾಯಕನ ಭೀಕರ ಹತ್ಯೆ

ಸತೀಶ್ ಜಾರಕಿಹೊಳಿ ಹೇಳಿದ್ದೇನು?:
ಹುಕ್ಕೇರಿಯಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ ನೆರವೇರಿಸಿ ಮಾತನಾಡಿದ್ದ ಸತೀಶ್ ಜ ಜಾರಕಿಹೊಳಿ, ಎಲ್ಲ ಕಾರ್ಯಕರ್ತರಂತೆ ನಾನೂ ಸಹ ಸಿಎಂ ಸಿದ್ದರಾಮಯ್ಯ ಅವರನ್ನು ದೇವರಂತೆ ನೋಡುತ್ತೇನೆ. ಕಾರ್ಯಕರ್ತರು ಅವರವರ ನಾಯಕರನ್ನು ಭಕ್ತಿಯಿಂದ ದೇವರಂತೆ ಕಾಣುತ್ತಾರೆ. ಅದರಲ್ಲಿ ತಪ್ಪೇನಿಲ್ಲ ಎಂದು ಹೇಳಿದ್ದರು.

ಇತ್ತೀಚೆಗಷ್ಟೇ ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆ ಆಹ್ವಾನದ ವಿಚಾರವಾಗಿ ಮಾತನಾಡಿದ್ದ ಮಾಜಿ ಸಚಿವ ಹೆಚ್ ಆಂಜನೇಯ, ಸಿಎಂ ಸಿದ್ದರಾಮಯ್ಯ ಅವರನ್ನು ರಾಮನಿಗೆ ಹೋಲಿಸಿದ್ದರು. ಸಿದ್ದರಾಮಯ್ಯ ಅವರೇ ರಾಮ ಎಂದಿದ್ದರು. ಇದಕ್ಕೂ ಕೂಡ ಬಿಜೆಪಿಯಿಂದ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಇದೀಗ ಸತೀಶ್ ಜಾರಕಿಹೊಳಿಯವರು ಕೂಡ ಸಿದ್ದರಾಮಯ್ಯ ಅವರನ್ನು ದೇವರು ಎಂದಿದ್ದಾರೆ.

RELATED ARTICLES

Latest News