ಬೆಂಗಳೂರು,ಫೆ.28– ನಗರದ ಬಿಜೆಪಿ ಶಾಸಕರು ಹಾಗೂ ಸಂಸದರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಇಂದು ಭೇಟಿ ಮಾಡಿ ಮನವಿ ಸಲ್ಲಿಸಿತು. ಈ ಬಾರಿಯ ಬಜೆಟ್‌ನಲ್ಲಿ ಬಿಜೆಪಿ ಶಾಸಕರುಗಳ ಕ್ಷೇತ್ರಕ್ಕೆ, ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಒದಗಿಸಲು ಮನವಿ ಮಾಡಿದರು.ರಾಜ್ಯದ ಒಟ್ಟಾರೆ ಆಯವ್ಯಯಕ್ಕೆ ಬೆಂಗಳೂರು ನಗರದಿಂದಲೇ ಹೆಚ್ಚಿನ ಆದಾಯ ಬರುತ್ತಿರುವುದರಿಂದ ಬೆಂಗಳೂರು ಬಿಜೆಪಿ ಶಾಸಕರುಗಳ ಕ್ಷೇತ್ರಗಳನ್ನು ಗಮನದಲ್ಲಿರಿಸಿಕೊಂಡು ಹೆಚ್ಚಿನ ಅನುದಾನ ಒದಗಿಸಿ ಎಂದು ಕೋರಿಕೆ ಸಲ್ಲಿಸಿದರು.
ರಸ್ತೆ, ಉದ್ಯಾನ ಸೇರಿದಂತೆ ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಅನುದಾನ ಕೋರಿದರು. ಒಟ್ಟಾರೆ ಶಾಸಕರ ಕ್ಷೇತ್ರಾಭಿವೃದ್ಧಿ ಹಾಗೂ ಬೆಂಗಳೂರು ಅಭಿವೃದ್ಧಿಗೆ ಬಜೆಟ್‌ನಲ್ಲಿ 100 ಕೋಟಿ ರೂ. ಅನುದಾನಕ್ಕೆ ಒತ್ತಾಯಿಸಿದರು.ಮೆಟ್ರೋ ದರ ಮತ್ತಷ್ಟು ಇಳಿಸುವ ಕೋರಿಕೆಗೆ ಮುಖ್ಯಮಂತ್ರಿಗಳು ಪ್ರತಿಕ್ರಿಯಿಸಿ, ಈಗಾಗಲೇ ಅವೈಜ್ಞಾನಿಕ ದರ ಏರಿಕೆಯನ್ನು ಹಿಂತೆಗೆದುಕೊಳ್ಳುವಂತೆ ಕೇಂದ್ರಕ್ಕೆ ಮೆಟ್ರೋಗೆ ಪತ್ರ ಬರೆಯಲಾಗಿದೆ.
ಸಾರ್ವಜನಿಕರಿಗೆ ಹೊರೆಯಾಗದಂತೆ ಮೆಟ್ರೋ ದರ ಇಳಿಸುವ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಒತ್ತಾಯಿಸುವುದಾಗಿ ತಿಳಿಸಿದರು.ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್, ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಸೇರಿದಂತೆ ನಿಯೋಗದಲ್ಲಿ ಬಿಜೆಪಿ ಪಕ್ಷದ ಶಾಸಕರು, ಸಂಸದರು ಇದ್ದರು.
ವೈಜ್ಞಾನಿಕ ತಳಹದಿಯ ಮೇಲೆ ಬಿಬಿಎಂಪಿ ಚುನಾವಣೆ ನಡೆಸುವಂತೆ ಮನವಿ :
ನಾಡಪ್ರಭು ಕೆಂಪೇಗೌಡರು ನಿರ್ಮಿಸಿದ್ದ ಬೆಂಗಳೂರನ್ನು ಗ್ರೇಟರ್ ಬೆಂಗಳೂರು ಹೆಸರಿನಲ್ಲಿ ವಿಭಜಿಸದೆ ವೈಜ್ಞಾನಿಕ ತಳಹದಿಯ ಮೇಲೆ ಬಿಬಿಎಂಪಿ ಚುನಾವಣೆ ನಡೆಸಬೇಕು ಎಂದು ಬಿಜೆಪಿ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಮಾಡಿದೆ.ಆಡಳಿತಾತ್ಮಕ ಅನುಕೂಲಕ್ಕಾಗಿ ಬಿಬಿಎಂಪಿಯನ್ನು 2ರಿಂದ 7 ಪಾಲಿಕೆಗಳನ್ನು ಮಾಡುವಂತೆ 2024ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕವನ್ನು ಸಮಗ್ರವಾಗಿ ಪರಿಶೀಲಿಸಿ ವರದಿ ನೀಡಲು ರಚಿತವಾಗಿದ್ದ ಕರ್ನಾಟಕ ವಿಧಾನಮಂಡಲದ ಜಂಟಿ ಪರಿಶೀಲನಾ ಸಮಿತಿ ಅಧ್ಯಕ್ಷ ರಿಜ್ವಾನ್ ಅರ್ಷದ್ ಅವರು ಸರ್ಕಾರಕ್ಕೆ ವರದಿಯನ್ನು ಸಲ್ಲಿಸಿದ್ದರು.
ಇದರ ಬೆನ್ನಲ್ಲೇ ಬಿಜೆಪಿ ನಿಯೋಗವು ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಯಲ್ಲಿ ಭೇಟಿ ಮಾಡಿ ಗ್ರೇಟರ್ ಬೆಂಗಳೂರು ವಿಭಜಿಸದೆ ಆದಷ್ಟು ಶೀಘ್ರ ಚುನಾವಣೆ ನಡೆಸಬೇಕೆಂದು ಮನವಿ ಮಾಡಿದೆ.ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್, ಸಂಸದರಾದ ಪಿ.ಸಿ.ಮೋಹನ್, ತೇಜಸ್ವಿ ಸೂರ್ಯ, ಶಾಸಕರಾದ ಎಸ್.ಆರ್.ವಿಶ್ವನಾಥ್, ಗೋಪಾಲಯ್ಯ, ಭೈರತಿ ಬಸವರಾಜ್, ಮುನಿರಾಜು ಸೇರಿದಂತೆ ಮತ್ತಿತರರಿರುವ ನಿಯೋಗವು ಮುಖ್ಯಮಂತ್ರಿಗಳ ಕಾವೇರಿ ನಿವಾಸಕ್ಕೆ ಭೇಟಿ ನೀಡಿ ಮನವಿ ಸಲ್ಲಿಸಿತು.
ಈ ಬಾರಿಯ ಬಜೆಟ್ ನಲ್ಲಿಬಿಜೆಪಿ ಶಾಸಕರುಗಳ ಕ್ಷೇತ್ರಕ್ಕೆ, ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಒದಗಿಸಲು ಮನವಿ ಮಾಡಿದರು. ರಾಜ್ಯದ ಒಟ್ಟಾರೆ ಆಯವ್ಯಯಕ್ಕೆ ಬೆಂಗಳೂರು ನಗರದಿಂದಲೇ ಹೆಚ್ಚಿನ ಆದಾಯ ಬರುತ್ತಿರುವುದರಿಂದ ಬೆಂಗಳೂರು ಬಿಜೆಪಿ ಶಾಸಕರುಗಳ ಕ್ಷೇತ್ರಗಳನ್ನು ಗಮನದಲ್ಲಿರಿಸಿಕೊಂಡು ಹೆಚ್ಚಿನ ಅನುದಾನ ಒದಗಿಸಿ ಎಂದು ಕೋರಿಕೆ ಸಲ್ಲಿಸಿದರು.
ರಸ್ತೆ, ಉದ್ಯಾನ ಸೇರಿದಂತೆಮೂಲಭೂತ ಸೌಕರ್ಯ ಅಭಿವೃದ್ಧಿಗೆ ಅನುದಾನ ಕೋರಿದರು. ಒಟ್ಟಾರೆಶಾಸಕರ ಕ್ಷೇತ್ರಾಭಿವೃದ್ಧಿ ಹಾಗೂ ಬೆಂಗಳೂರು ಅಭಿವೃದ್ಧಿಗೆ ಬಜೆಟ್‌ನಲ್ಲಿ 100ಕೋಟಿ ಅನುದಾನಕ್ಕೆ ಒತ್ತಾಯಿಸಿದರು. ಮೆಟ್ರೋ ದರ ಮತ್ತಷ್ಟು ಇಳಿಸುವ ಕೋರಿಕೆಗೆ ಮುಖ್ಯಮಂತ್ರಿಗಳು ಪ್ರತಿಕ್ರಿಯಿಸಿ, ಈಗಾಗಲೇ ಅವೈಜ್ಞಾನಿಕ ದರ ಏರಿಕೆಯನ್ನು ಹಿಂತೆಗೆದುಕೊಳ್ಳುವಂತೆ ಕೇಂದ್ರಕ್ಕೆ, ಮೆಟ್ರೋಗೆ ಪತ್ರ ಬರೆಯಲಾಗಿದೆ. ಸಾರ್ವಜನಿಕರಿಗೆ ಹೊರೆಯಾಗದಂತೆ ಮೆಟ್ರೋ ದರ ಇಳಿಸುವ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಒತ್ತಾಯಿಸುವುದಾಗಿ ತಿಳಿಸಿದರು.
ಸಿಎಂ ಸ್ಪಂದನೆ :
ನಗರದ ಕ್ಷೇತ್ರಗಳಿಗೆ ಸೂಕ್ತವಾದ ಅನುದಾನ ನೀಡಬೇಕೆಂದು ಮಾಡಿರುವ ಮನವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.ಕಾವೇರಿಯಲ್ಲಿ ಪಕ್ಷದ ವತಿಯಿಂದ ಸಿಎಂ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ಕೆಲವು ಕ್ಷೇತ್ರಗಳಿಗೆ ಕಳೆದ ಹಲವಾರು ತಿಂಗಳಿನಿಂದ ಅನುದಾನವನ್ನು ಬಿಡುಗಡೆ ಮಾಡಿಲ್ಲ. ಈ ಬಗ್ಗೆ ಸಿಎಂ ಅವರ ಗಮನಕ್ಕೆ ತಂದಿದ್ದೇವೆ ಎಂದು ತಿಳಿಸಿದರು.
ಮುಂಬರುವ ಬಜೆಟ್‌ನಲ್ಲಿ ಎಲ್ಲಾ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನವನ್ನು ನೀಡುವಂತೆ ಕೋರಿದ್ದೇವೆ. ಇದಕ್ಕೆ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದನೆ ನೀಡಿದ್ದಾರೆ. ಇದೊಂದು ಒಳ್ಳೆಯ ಬೆಳವಣಿಗೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಹಿಂದೆ ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ತಮ್ಮ ಅಧಿಕಾರದ ವೇಳೆ ಬೆಂಗಳೂರಿನ ಅಭಿವೃದ್ಧಿಗಾಗಿಯೇ 6ರಿಂದ 8 ಸಾವಿರ ಕೋಟಿ ಅನುದಾನ ನೀಡುತ್ತಿದ್ದರು. 2 ವರ್ಷದಿಂದ ಬಿಜೆಪಿ ಗೆದ್ದಿರುವ ಕ್ಷೇತ್ರಗಳಿಗೆ ಅನುದಾನವನ್ನೇ ನೀಡಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ಮುಂಬರುವ ಬಜೆಟ್‌ನಲ್ಲಿ ಬೆಂಗಳೂರಿನ ವಿಧಾನಸಭಾ ಕ್ಷೇತ್ರಗಳಿಗೆ 6ರಿಂದ 8 ಸಾವಿರ ಕೋಟಿ ಕೊಡಬೇಕೆಂದು ಮನವಿ ಮಾಡಿದ್ದೇವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಅಭಿವೃದ್ಧಿ ನಿಧಾನಗತಿಯಲ್ಲಿ ಸಾಗುತ್ತಿದೆ. ಸಾರ್ವಜನಿಕರಿಂದಲೂ ಈ ಸರ್ಕಾರದ ಬಗ್ಗೆ ಅಸಮಾಧಾನ ವ್ಯಕ್ತವಾಗುತ್ತಿದೆ. ಬೆಂಗಳೂರನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಿದ್ದಾರೆಂದು ದೂರಿದರು.ಮೆಟ್ರೊ ದರವನ್ನು ಕಡಿತಗೊಳಿಸಬೇಕೆಂದು ಸಂಸದರಾದ ಪಿ.ಸಿ.ಮೋಹನ್ ಮತ್ತು ತೇಜಸ್ವಿ ಸೂರ್ಯ ಮನವಿ ಮಾಡಿದ್ದಾರೆ. ಸಿಎಂ ಕೂಡ ಇದಕ್ಕೂ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಮೊದಲ
ಬಾರಿ ಗೆದ್ದ ಶಾಸಕರಿಗೆ ಹೆಚ್ಚಿನ ಅನುದಾನ ನೀಡಬೇಕೆಂದು ಕೋರಲಾಗಿದೆ. ಅನುದಾನ ಕೊಡುವ ಬಗ್ಗೆ ಗಮನಹರಿಸುವುದಾಗಿ ಮುಖ್ಯಮಂತ್ರಿ ಹೇಳಿದ್ದಾರೆ ಎಂದರು. ಬಿಬಿಎಂಪಿಗೆ ಚುನಾವಣೆ ನಡೆಯಬೇಕೆಂಬುದು ಬಹುದಿನಗಳ ಒತ್ತಾಯವಾಗಿದೆ. ಆದಷ್ಟು ಶೀಘ್ರ ಚುನಾವಣೆ ನಡೆಸಲು ಕೋರಿದ್ದೇವೆ. ಬೆಂಗಳೂರು ನಗರಕ್ಕೆ ಇಂತಹ ದುಸ್ಥಿತಿ ಬಂದಿರಲಿಲ್ಲ ಎಂದು ವಿಜಯೇಂದ್ರ ಆಕ್ಷೇಪಿಸಿದರು.
ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಮಾತನಾಡಿ, ಬೆಂಗಳೂರು ಅಭಿವೃದ್ಧಿ ಕುಂಠಿತ ಆಗಿದೆ. ಎರಡು ವರ್ಷ ನೋಡಿ ಸಾಕಾಗಿ ಸಿಎಂ ಭೇಟಿ ಮಾಡಿದ್ದೇವೆ. ಅನುದಾನ ಕೊಡ ಎಂದು ಕೇಳಿದ್ದೇವೆ. ರಾಜ್ಯದ ಎಲ್ಲಾ ಬಿಜೆಪಿ ಶಾಸಕರು ಅನುದಾನ ಇಲ್ಲದೇ ಕಣ್ಣೀರು ಹಾಕುತ್ತಿದ್ದಾರೆ.
ಬಿಜೆಪಿ ಸರ್ಕಾರ ಎಂದಿಗೂ ತಾರತಮ್ಯ ಮಾಡಿಲ್ಲ, ಈಗ ಸರ್ಕಾರ ತಾರತಮ್ಯ ಮಾಡುತ್ತಿದೆ. ಮೆಟ್ರೊ, ದರ ಏರಿಕೆಗೆ ಜನರೇ ಪ್ರತಿಭಟನೆಗೆ ಮುಂದಾಗಿದ್ದಾರೆ. ವಿರೋಧ ಪಕ್ಷವಾಗಿ ಸರ್ಕಾರಕ್ಕೆ ತೊಂದರೆ ಕೊಡುವುದಿಲ್ಲ, ಅಭಿವೃದ್ಧಿಗೆ ಸರ್ಕಾರ ಸ್ಪಂದಿಸಬೇಕು ಎಂದು ಆಗ್ರಹಿಸಿದರು.
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಮಾತನಾಡಿ, ಮೆಟ್ರೊ ದರ ನಿಗದಿ ಸಮಿತಿಗೆ ನೀವು ಮತ್ತೊಂದು ಪತ್ರ ಬರೆಯಬೇಕೆಂದು ಮನವಿ ಮಾಡಲಾಗಿದೆ. ನಾವು ಮೂರೂ ಜನ ಸಂಸದರು ಹೋಗಿ ಕುಳಿತುಕೊಂಡು ಮೂರು ದಿನಗಳಲ್ಲಿ ಇಳಿಕೆ ಮಾಡಿಸುತ್ತೇವೆ ಎಂದು ಹೇಳಿದರು. ಈ ಬಗ್ಗೆ ಮೆಟ್ರೋ ಎಂಡಿ ಜೊತೆ ಮಾತಾಡುತ್ತೇನೆ, ದರ ನಿಗದಿ ಸಮಿತಿಗೆ ಮತ್ತೊಂದು ಪತ್ರ ಬರೆಯುವ ಬಗ್ಗೆ ಹೇಳುತ್ತೇನೆ ಎಂದ ಸಿಎಂ ಸಿದ್ದರಾಮಯ್ಯ ತಿಳಿಸಿರುವುದಾಗಿ ಹೇಳಿದರು.