ಸಚಿವ ಸ್ಥಾನ ಕೊಡದಿದ್ದರೂ ಓಕೆ, ಅನುದಾನ ಕೊಡಿ ಪ್ಲೀಸ್ : ಬಿಜೆಪಿ ಶಾಸಕರ ಮೊರೆ

Social Share

ಬೆಂಗಳೂರು, ಅ.23- ಆಡಳಿತಾರೂಢ ಬಿಜೆಪಿ ಶಾಸಕರು ಸಚಿವ ಸ್ಥಾನಕ್ಕಿಂತ ಕ್ಷೇತ್ರಕ್ಕೆ ಅನುದಾನ ಕೊಡಿ ಎಂದು ಮೊರೆ ಇಡುತ್ತಿದ್ದಾರೆ. ಕಳೆದ ಒಂದು ವರ್ಷದಿಂದಲೂ ಸಚಿವ ಸಂಪುಟ ವಿಸ್ತರಣೆ ವಿಚಾರ ನೆನೆಗುದಿಗೆ ಬಿದ್ದಿದೆ.

ಈಗ ಸಚಿವ ಸಂಪುಟ ವಿಸ್ತರಣೆ ವಿಚಾರ ಮತ್ತೆ ಚರ್ಚೆಗೆ ಬಂದಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದೆಹಲಿಗೆ ತೆರಳಿ ವರಿಷ್ಠರ ಅನುಮತಿ ಪಡೆದು ಸಂಪುಟ ವಿಸ್ತರಣೆ ಮಾಡುವುದಾಗಿ ಹೇಳಿಕೆ ನೀಡಿದ್ದಾರೆ. ಆದರೂ ಶಾಸಕರಲ್ಲಿ ಮಾತ್ರ ಈ ಹಿಂದೆ ಇದ್ದಂತಹ ಉತ್ಸಾಹವಾಗಲಿ, ಆಸಕ್ತಿಯಾಗಲಿ ಕಂಡುಬರುತ್ತಿಲ್ಲ.

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಸಚಿವರಾಗಿ ಸಾಧನೆ ಮಾಡುವುದು ಏನೂ ಇಲ್ಲ. ಬದಲಿಗೆ ತಮ್ಮ ಕ್ಷೇತ್ರವನ್ನು ಕಡೆಗಣಿಸಿ ಸಚಿವ ಸ್ಥಾನ ನಿರ್ವಹಣೆ ಮಾಡಬೇಕಾಗುತ್ತದೆ. ಇದರಿಂದ ಚುನಾವಣೆ ಸಂದರ್ಭದಲ್ಲಿ ತಮಗೆ ಅನುಕೂಲವಾಗುವುದಿಲ್ಲ ಎಂಬ ಅಭಿಪ್ರಾಯಕ್ಕೆ ಬಹುತೇಕ ಶಾಸಕರು ಬಂದಂತಿದೆ.

ನರ್ಸ್ ಮೇಲೆ ನಾಲ್ವರಿಂದ ಸಾಮೂಹಿಕ ಅತ್ಯಾಚಾರ

ಒಂದು ವೇಳೆ ಸಚಿವ ಸಂಪುಟ ವಿಸ್ತರಣೆ ಆಗುವುದಾದರೆ ರಾಜ್ಯೋತ್ಸವದ ನಂತರ ಆಗಲಿದೆ ಎಂದು ಸರ್ಕಾರದ ಉನ್ನತ ಮೂಲಗಳು ತಿಳಿಸಿವೆ. ಮುಖ್ಯಮಂತ್ರಿಯವರು ಸಂಪುಟ ವಿಸ್ತರಣೆ ಮಾಡುವುದಾಗಿ ಹೇಳಿಕೆ ನೀಡಿದ ಬಳಿಕವೂ ಬಹುತೇಕ ಶಾಸಕರು ಮುಖ್ಯಮಂತ್ರಿ ಮೇಲಾಗಲಿ, ಪಕ್ಷದ ವರಿಷ್ಠರ ಮೇಲಾಗಲಿ ಮಂತ್ರಿ ಸ್ಥಾನಕ್ಕಾಗಿ ಒತ್ತಡ ತರುವ ಪ್ರಯತ್ನ ಮಾಡುವುದನ್ನೇ ಕೈಬಿಟ್ಟಿದ್ದಾರೆ. ಇದರ ಬದಲಿಗೆ ತಮ್ಮ ತಮ್ಮ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಧಾರಾಳವಾಗಿ ಅನುದಾನ ನೀಡಿದರೆ ಸಾಕು ಎಂಬ ಮನಸ್ಥಿತಿಗೆ ತಲುಪಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಆದರೆ, ಮಾಜಿ ಸಚಿವರಾದ ಕೆ.ಎಸ್.ಈಶ್ವರಪ್ಪ, ರಮೇಶ್ ಜಾರಕಿಹೊಳಿ, ಸಿ.ಪಿ.ಯೋಗೇಶ್ವರ್ ಅವರು ಈಗಲೂ ಸಹ ಪ್ರಮುಖ ಆಕಾಂಕ್ಷಿಗಳಾಗಿದ್ದಾರೆ. ವಿಧಾನಸಭೆ ಚುನಾವಣೆಗೆ ಸುಮಾರು ಆರು ತಿಂಗಳು ಮಾತ್ರ ಬಾಕಿ ಉಳಿದಿದ್ದು, ಈ ಸಂದರ್ಭದಲ್ಲಿ ಸಚಿವರಾಗಿ ಹೇಳಿಕೊಳ್ಳುವಂತಹ ಸಾಧನೆ ಮಾಡಲಾಗುವುದಿಲ್ಲ. ಅದರ ಬದಲು ಕ್ಷೇತ್ರದಲ್ಲಿ ಹೆಚ್ಚು ಸಮಯ ಕಳೆದು ಕಾರ್ಯಕರ್ತರೊಂದಿಗೆ ಬೆರೆತರೆ ಪಕ್ಷ ಸಂಘಟನೆ ಹಾಗೂ ಮುಂದಿನ ಚುನಾವಣೆಗೆ ಹೆಚ್ಚು ಅನುಕೂಲವಾಗಲಿದೆ ಎಂಬ ನಿರ್ಧಾರಕ್ಕೆ ಶಾಸಕರು ಬಂದಿದ್ದಾರೆ.

BIG NEWS : ನೀಟ್ ಕೌನ್ಸೆಲಿಂಗ್ ನೋಂದಣಿ ದಿನಾಂಕ ವಿಸ್ತರಣೆ

ಹೀಗಾಗಿ ಶಾಸಕರ ಉತ್ಸಾಹವಿಲ್ಲದೆ ಸಚಿವ ಸಂಪುಟ ವಿಸ್ತರಣೆ ಮಾಡಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಸಚಿವ ಸಂಪುಟ ವಿಸ್ತರಣೆಯಾದರೂ ಆಗಬಹುದು, ಆಗದೆ ಯಥಾರೀತಿ ಮುಂದುವರಿಯಲೂಬಹುದು ಎಂದು ಮೂಲಗಳು ಸ್ಪಷ್ಟಪಡಿಸಿವೆ.

ಈ ತಿಂಗಳ ಅಂತ್ಯದವರೆಗೂ ಮುಖ್ಯಮಂತ್ರಿಗಳು ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಅಲ್ಲಿಯವರೆಗೂ ದೆಹಲಿಗೆ ತೆರಳುವ ಯಾವ ಕಾರ್ಯಕ್ರಮವೂ ನಿಗದಿಯಾಗಿಲ್ಲ ಎಂದು ಉನ್ನತ ಮೂಲಗಳು ತಿಳಿಸಿವೆ.

Articles You Might Like

Share This Article