Friday, May 3, 2024
Homeರಾಜ್ಯಕೇಸರಿ ಶಾಲು ಧರಿಸಿ ಅಧಿವೇಶನಕ್ಕೆ ಬಂದ ಬಿಜೆಪಿ ಶಾಸಕರು

ಕೇಸರಿ ಶಾಲು ಧರಿಸಿ ಅಧಿವೇಶನಕ್ಕೆ ಬಂದ ಬಿಜೆಪಿ ಶಾಸಕರು

ಬೆಂಗಳೂರು,ಫೆ.12- ಇಂದಿನಿಂದ ಆರಂಭವಾದ ವಿಧಾನಮಂಡಲದ ಜಂಟಿ ಅಧಿವೇಶನದ ಮೊದಲ ದಿನವೇ ಪ್ರತಿಪಕ್ಷ ಬಿಜೆಪಿಯ ಎಲ್ಲ ಶಾಸಕರು ಕೇಸರಿ ಶಾಲು ಧರಿಸಿಕೊಂಡು ಸದನಕ್ಕೆ ಆಗಮಿಸಿದ್ದು ವಿಶೇಷವಾಗಿತ್ತು. ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್, ಉಪನಾಯಕ ಅರವಿಂದ ಬೆಲ್ಲದ್ ಸೇರಿದಂತೆ ಬಿಜೆಪಿಯ ಎಲ್ಲ ಶಾಸಕರು ಕೇಸರಿ ಶಾಲು ಹಾಕಿಕೊಂಡು ಸದನದಲ್ಲಿ ಕುಳಿತಿದ್ದು ಎದ್ದು ಕಾಣುತ್ತಿತ್ತು.

ಇತ್ತೀಚೆಗೆ ಮಂಡ್ಯ ಜಿಲ್ಲೆಯ ಕೆರಗೋಡಿನಲ್ಲಿ ಹನುಮ ಧ್ವಜವನ್ನು ತೆರವು ಮಾಡಿದ್ದು ದೊಡ್ಡ ವಿವಾದವನ್ನು ಸೃಷ್ಟಿಸಿತ್ತು. ಅಲ್ಲಿ ಪ್ರತಿಭಟನೆ ನಡೆಸಿದ್ದ ಸಂಘ ಪರಿವಾರದ ಹಿನ್ನಲೆಯ ಭಜರಂಗದಳ ವಿಶ್ವ ಹಿಂದು ಪರಿಷತ್, ಬಿಜೆಪಿ ಸೇರಿದಂತೆ ಮತ್ತಿತರ ಸಂಘಟನೆಗಳು ಕೇಸರಿ ಶಾಲು ಹಾಕಿಕೊಂಡೇ ಪ್ರತಿಭಟನೆ ನಡೆಸಿದವು.

ಇದೇ ವೇಳೆ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಕೇಸರಿ ಶಾಲು ಹಾಕಿಕೊಂಡಿದ್ದಕ್ಕೆ ಪರ ವಿರೋಧ ಅಭಿಪ್ರಾಯ ವ್ಯಕ್ತವಾಗಿತ್ತು. ಅದರಲ್ಲೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಕೇಸರಿ ಶಾಲು ಹಾಕುವ ಔಚಿತ್ಯವನ್ನು ಪ್ರಶ್ನೆ ಮಾಡಿದ್ದರು.

ಗಡಿಯಲ್ಲಿ ಪಾಕಿಸ್ತಾನದ ಡ್ರೋನ್ ಮೇಲೆ ಸೇನೆಯಿಂದ ಗುಂಡಿನ ದಾಳಿ

ಇದಕ್ಕೆ ಟಾಂಗ್ ನೀಡುವಂತೆ ಬಿಜೆಪಿಯ ಎಲ್ಲ ಸದಸ್ಯರು ಕೇಸರಿ ಶಾಲು ಹಾಕಿಕೊಂಡು ಸದನದಲ್ಲಿ ಮಿರಮಿರ ಮಿಂಚುತ್ತಿದ್ದರು.

RELATED ARTICLES

Latest News