ವಿಧಾನಪರಿಷತ್’ಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ : ತೇಜಸ್ವಿನಿ, ನಂಜುಂಡಿಗೆ ಲಕ್

Vidhana-Parishat-BJP
ಬೆಂಗಳೂರು. ಮೇ. 30 ತೀವ್ರ ಕುತೂಹಲ ಕೆರಳಿಸಿದ್ದ ವಿಧಾನಪರಿಷತ್ ಗೆ ಐವರು ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ. ವಿಧಾನಸಭೆಯಿಂದ ವಿಧಾನಪರಿಷತ್ ಗೆ 11 ಸದಸ್ಯರ ಆಯ್ಕೆಗೆ ಜೂನ್ 12 ರಂದು ಚುನಾವಣೆ ನಿಗದಿಯಾಗಿದ್ದು ಬಹುತೇಕ ಅವಿರೋಧ ಆಯ್ಕೆಯಾಗುವ ಸಾಧ್ಯತೆಯಿದೆ. 104 ಸ್ಥಾನಗಳನ್ನು ಹೊಂದಿರುವ ಬಿಜೆಪಿ ಐವರು ಅಭ್ಯರ್ಥಿಗಳನ್ನು ನಿರಾಯಾಸವಾಗಿ ಗೆಲ್ಲಿಸಿಕೊಳ್ಳುವ ಅವಕಾಶವಿದೆ. ಈ ಬಾರಿ ಹೊಸ ಬಿಜೆಪಿ ಹೊಸ ಮುಖಗಳಿಗೆ ಅವಕಾಶ ಮಾಡಿಕೊಟ್ಟಿದ್ದು ಮತ್ತೆ ರಘುನಾಥ್ ಮಲ್ಲಾಪುರೆ ಅವರಿಗೆ ಮತ್ತೆ ಅದೃಷ್ಟ ಒಲಿದಿದ್ದರೆ ಉಳಿದಂತೆ ಇತ್ತೀಚಿಗೆ ಬಿಜೆಪಿ ಸೇರಿದ್ದ ಉದ್ಯಮಿ ಕೆ.ಪಿ. ನಂಜುಂಡಿ, ವಕ್ತಾರರಾಗಿರುವ ತೇಜಸ್ವಿನಿಗೌಡ, ಶಿವಮೊಗ್ಗ ಬಿಜೆಪಿ ಮುಖಂಡ ರುದ್ರೇಗೌಡ ಹಾಗೂ ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಅವರ ಹೆಸರುಗಳನ್ನ ಇಂದು ಪ್ರಕಟಿಸಲಾಗಿದೆ. ದೆಹಲಿಯಲ್ಲಿ ಅಮಿತ್ ಷಾ ನೇತೃತ್ವದಲ್ಲಿ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ 129 ಆಕಾಶಕ್ಷಿಗಳ ಪಟ್ಟಿಯಲ್ಲಿ ಈ ಐವರ ಹೆಸರನ್ನು ಅಂತಿಮಗೊಳಿಸಲಾಗಿದೆ.

Sri Raghav

Admin