ಅಬ್ಬರದ ಪ್ರಚಾರಕ್ಕೆ ಬಿಜೆಪಿ ಸಜ್ಜು, ಮೋದಿ-ಯೋಗಿ ಸರಣಿ ರ‍್ಯಾಲಿಗೆ ಸಿದ್ಧತೆ

Social Share

ಬೆಂಗಳೂರು, ಜ.30- ವಿಧಾನಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲಲು ಎಲ್ಲಾ ಪಕ್ಷಗಳು ತಯಾರಿ ನಡೆಸುತ್ತಿವೆ. ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಬಿಡುವಿಲ್ಲದೆ ನಡೆಸುತ್ತಿರುವ ಅಬ್ಬರದ ಚುನಾವಣಾ ಯಾತ್ರೆಗಳಿಗೆ ಕೌಂಟರ್ ಕೊಡಲು ಇದೀಗ ಆಡಳಿತ ಪಕ್ಷ ಬಿಜೆಪಿ ದೊಡ್ಡ ಯೋಜನೆ ರೂಪಿಸುತ್ತಿದೆ.

ರಾಷ್ಟ್ರೀಯ ಮಟ್ಟದ ಸ್ಟಾರ್ ನಾಯಕರಿಂದ ಚುನಾವಣಾ ರ‍್ಯಾಲಿ ಮತ್ತು ಸಮಾವೇಶಗಳನ್ನು ನಡೆಸಿ ಮತದಾರರ ಮನ ಗೆಲ್ಲಲು ಬಿಜೆಪಿ ವೇದಿಕೆ ಸಿದ್ದಪಡಿಸಿದೆ.

ಪ್ರಧಾನಿ ನರೇಂದ್ರಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿಯ ಹಿಂದುತ್ವದ ಫೈರ್‍ಬ್ರಾಂಡ್ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಮೇಲಿಂದ ಮೇಲೆ ಕರ್ನಾಟಕಕ್ಕೆ ಕರೆಯಿಸಿ ಚುನಾವಣಾ ಸಮಾವೇಶಗಳನ್ನು ಆಯೋಜಿಸಿ, ಮತದಾರರನ್ನು ಸೆಳೆಯಲು ಭಾರತೀಯ ಜನತಾ ಪಕ್ಷ ಕಾರ್ಯತಂತ್ರ ರೂಪಿಸಿದೆ.

ಈಗಾಗಲೇ ಮೋದಿ, ಅಮಿತ್ ಶಾ ಮತ್ತು ನಡ್ಡಾ ಜನವರಿ ತಿಂಗಳೊಂದ ರಲ್ಲಿಯೇ ತಲಾ ಎರಡೆರಡು ಬಾರಿ ರಾಜ್ಯಕ್ಕೆ ಭೇಟಿ ನೀಡಿ ಪ್ರಚಾರ ನಡೆಸಿದ್ದಾರೆ. ಕೇವಲ ಒಂದು ವಾರದ ಅಂತರದಲ್ಲಿ ಎರಡು ಬಾರಿ (ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ) ಭೇಟಿ ನೀಡಿ, ಬೃಹತ್ ಚುನಾವಣಾ ರ‍್ಯಾಲಿಗಳನ್ನು ನಡೆಸಿ ಚುನಾವಣಾ ಕಹಳೆ ಮೊಳಗಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ರಾಷ್ಟ್ರೀಯ ಯುವಜನೋತ್ಸವ ಕಾರ್ಯಕ್ರಮದ ಉದ್ಘಾಟನೆಗಾಗಿ ಆಗಮಿಸಿ ಬೃಹತ್ ಮಟ್ಟದ ರೋಡ್ ಶೋ ನಡೆಸುವ ಮೂಲಕ ಒಂದು ರೀತಿಯಲ್ಲಿ ಪಕ್ಷದ ಪ್ರಚಾರಕ್ಕೆ ಚಾಲನೆ ನೀಡಿದ್ದಾರಲ್ಲದೆ, ಹುಬ್ಬಳ್ಳಿಗೆ ಭೇಟಿ ನೀಡಿದ ಒಂದು ವಾರದ ಅಂತರದಲ್ಲೇ ಕಲ್ಯಾಣ ಕರ್ನಾಟಕದ ಕಲಬುರಗಿ ಮತ್ತು ಯಾದಗಿರಿಗೆ ಭೇಟಿ ನೀಡಿ, ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ್ದು, ಸಮಾವೇಶದ ಮೂಲಕ ಬಿಜೆಪಿ ಅಧಿಕಾರಕ್ಕೆ ಬರಲು ಮತ ನೀಡುವಂತೆ ಮನವಿ ಮಾಡಿದ್ದಾರೆ.

ಇಷ್ಟೇ ಅಲ್ಲದೇ, ಬರುವ ಫೆಬ್ರವರಿ ತಿಂಗಳಲ್ಲಿಯೂ ಸಹ ಪ್ರಧಾನಿ ನಾಲ್ಕು ಬಾರಿ ಕರ್ನಾಟಕಕ್ಕೆ ಭೇಟಿ ನೀಡಿ ಚುನಾವಣಾ ರ್ಯಾಲಿ ನಡೆಸುವ ಪ್ರವಾಸ ಪಟ್ಟಿಯನ್ನು ಬಿಜೆಪಿ ರೂಪಿಸಿದೆ. ಫೆಬ್ರವರಿ ಮೊದಲನೇ ವಾರ ಮೋದಿ ಬೆಂಗಳೂರಿಗೆ ಭೇಟಿ ನೀಡಿ, ವಿದ್ಯುತ್ ಯೋಜನೆಗಳ ಬಗ್ಗೆ ಸಾರ್ವಜನಿಕರೊಂದಿಗೆ ಸಂವಾದ ನಡೆಸಲಿದ್ದಾರೆ. ಈ ಕಾರ್ಯ ಕ್ರಮದ ಬಳಿಕ ಫೆ. ಎರಡನೇ ವಾರದಲ್ಲಿ ಪ್ರತಿಷ್ಠಿತ ಏರ್ ಶೋಗೆ ಚಾಲನೆ ನೀಡಲು ಬೆಂಗಳೂರಿಗೆ ಆಗಮಿಸಲಿದ್ದಾರೆ.

ಜನಪರ ಬಜೆಟ್ ಮಂಡಿಸುತ್ತೇನೆ : ಸಿಎಂ ಬೊಮ್ಮಾಯಿ

ಫೆಬ್ರವರಿ ಮೂರನೇ ವಾರ ಮತ್ತೆ ಪ್ರಧಾನಿ ಮೋದಿ ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ಶಿವಮೊಗ್ಗದಲ್ಲಿ ಹೊಸದಾಗಿ ನಿರ್ಮಿಸಲಾದ ವಿಮಾನ ನಿಲ್ದಾಣವನ್ನು ಲೋಕಾರ್ಪಣೆ ಮಾಡಲಿದ್ದಾರೆ. ಈ ವೇಳೆ ಹಲವು ಅಭಿವೃದ್ಧಿ ಯೋಜನೆಗಳನ್ನು ಅನಾವರಣಗೊಳಿಸಲಿದ್ದಾರೆ. ಬಳಿಕ ಮತ್ತೆ ರಾಜ್ಯಕ್ಕೆ ಭೇಟಿ ನೀಡಿ ಬೆಂಗಳೂರು ಮೈಸೂರಿನಲ್ಲಿ ನಿರ್ಮಿಸ ಲಾಗಿರುವ ಪ್ರತಿಷ್ಠಿತ ದಶಪಥ ರಾಷ್ಟ್ರೀಯ ಹೆದ್ದಾರಿ ಯೋಜನೆಯನ್ನು ಲೋಕಾರ್ಪಣೆ ಮಾಡಿ, ಅಸಂಖ್ಯಾತ ಮತದಾರರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಫೆಬ್ರವರಿ ಅಂತ್ಯದ ವೇಳೆಗೆ ಸಾಧ್ಯವಾದರೆ ಹುಬ್ಬಳ್ಳಿ – ಧಾರವಾಡಕ್ಕೆ ಭೇಟಿ ನೀಡಿ, ಐಐಟಿಯ ನೂತನ ಕಟ್ಟಡ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಳ್ಳುವ ಸಂಭವವೂ ಇದೆ.

ಒಂದು ಕಡೆ ಪ್ರಧಾನಿ ಮೋದಿ ಕಾರ್ಯಕ್ರಮವಾದರೆ, ಫೆಬ್ರವರಿ ಯಲ್ಲಿಯೇ ಕೇಂದ್ರ ಗ್ರಹಸಚಿವ ಅಮಿತ್ ಶಾ ರಾಜ್ಯಕ್ಕೆ ಭೇಟಿ ನೀಡಿ ದಕ್ಷಿಣ ಕರ್ನಾಟಕದಲ್ಲಿ ಬಿಜೆಪಿ ಶಕ್ತಿಯನ್ನು ಹೆಚ್ಚಿಸುವ ಸಂಬಂಧ ಚುನಾವಣೆ ಸಭೆ, ರೋಡ್ ಶೋ, ಸಮಾವೇಶಗಳನ್ನು ನಡೆಸಲಿದ್ದಾರೆ.

ಹಿಂದೂ ಫೈರ್ ಬ್ರಾಂಡ್ ಎಂದೇ ಕರೆಸಿಕೊಳ್ಳುವ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯ ನಾಥ್ ಅವರೂ ಫೆಬ್ರವರಿ ತಿಂಗಳಲ್ಲಿ ರಾಜ್ಯಕ್ಕೆ ಭೇಟಿ ನೀಡಿ ಬಿಜೆಪಿ ಪರ ಚುನಾವಣಾ ಪ್ರಚಾರ ನಡೆಸಲಿ ದ್ದಾರೆ. ಬೆಂಗಳೂರಿಗೆ ಆಗಮಿಸ ಲಿರುವ ಅವರು ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಬಿಎಂಪಿಯಿಂದ ಹೊಸ ದಾಗಿ ನಿರ್ಮಿಸಿರುವ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಲೋಕಾರ್ಪಣೆ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಬಿಜೆಪಿ ಪರವಾಗಿ ಚುನಾವಣಾ ಪ್ರಚಾರವನ್ನೂ ಕೈಗೊಳ್ಳಲಿದ್ದಾರೆ.

ಕೇಂದ್ರ ಸಚಿವ ಸಂಪುಟ ಪುನಾರಚನೆಯ ಗುಸುಗುಸು

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಯ ಪ್ರಕಾಶ್ ನಡ್ಡಾ ಅವರನ್ನು ಸಹ ರಾಜ್ಯಕ್ಕೆ ಕರೆಸಿ ಚುನಾವಣಾ ಪ್ರಚಾರವನ್ನು ನಡೆಸಲು ರಾಜ್ಯ ಬಿಜೆಪಿ ಉದ್ದೇಶಿಸಿದೆ. ಈಗಾಗಲೇ ಜನವರಿ ತಿಂಗಳಲ್ಲಿ ಎರಡು ಮೂರು ಬಾರಿ ಕರ್ನಾಟಕಕ್ಕೆ ಭೇಟಿ ನೀಡಿ ಬಿಜೆಪಿ ಪರ ಚುನಾವಣಾ ಪ್ರಚಾರ ನಡೆಸಿದ್ದಾರೆ. ಫೆಬ್ರವರಿಯಲ್ಲಿಯೂ ಮತ್ತೆ ರಾಜ್ಯದಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಈ ನಾಯಕರನ್ನು ಹೊರತುಪಡಿಸಿ ಕೇಂದ್ರದಲ್ಲಿ ಪ್ರಭಾವಿ ಸಚಿವರಾಗಿರುವ ಹಾಗೂ ಹಿರಿಯ ಮುಖಂಡರಾದ ರಕ್ಷಣಾ ಸಚಿವ ರಾಜನಾಥ್ ಸಿಂಗ್ , ಭೂಸಾರಿಗೆ ಸಚಿವ ನಿತಿನ್ ಗಡ್ಕರಿ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಹಲವು ಪ್ರಮುಖ ಸಚಿವರನ್ನ ರಾಜ್ಯಕ್ಕೆ ಕರೆಸಿ, ಕೇಂದ್ರ ಸಚಿವರ ಸಾರಥ್ಯದಲ್ಲಿ ನಾಲ್ಕು ಪ್ರತ್ಯೇಕ ಯಾತ್ರೆಗಳನ್ನು ಸಹ ನಡೆಸಲು ಉದ್ದೇಶಿಸಿದೆ.

ಗುಜರಾತ್, ಉತ್ತರಪ್ರದೇಶ ಸೇರಿದಂತೆ ಹಲವಾರು ರಾಜ್ಯಗಳಲ್ಲಿ ಮೋದಿ, ಅಮಿತ್ ಶಾ, ಯೋಗಿ ಆದಿತ್ಯನಾಥ್ ಚುನಾವಣಾ ರ್ಯಾಲಿ ಗಳನ್ನು ನಡೆಸಿದ ಪರಿಣಾಮ ಹೆಚ್ಚಿನ ಮತಗಳನ್ನು ಬಿಜೆಪಿ ಪಡೆದಿದ್ದು, ಕರ್ನಾಟಕದಲ್ಲಿಯೂ ಈ ನಾಯಕರು ಗಳಿಂದ ರ್ಯಾಲಿಗಳನ್ನು ನಡೆಸಿ ಆಡಳಿತದಲ್ಲಿರುವ ಬಿಜೆಪಿ ಸರ್ಕಾರ ವನ್ನು ಮತ್ತೆ ಅಧಿಕಾರಕ್ಕೆ ತರುವ ಕಾರ್ಯತಂತ್ರ ಹೊಂದಲಾಗಿದೆ.

BJP, Modi, Yogi, campaign, assembly, elections,

Articles You Might Like

Share This Article