Friday, September 20, 2024
Homeರಾಜಕೀಯ | Politicsಕಾಂಗ್ರೆಸ್ ಸಂಪರ್ಕದಲ್ಲಿ ಟಿಕೆಟ್ ವಂಚಿತ ಬಿಜೆಪಿ ಸಂಸದರು

ಕಾಂಗ್ರೆಸ್ ಸಂಪರ್ಕದಲ್ಲಿ ಟಿಕೆಟ್ ವಂಚಿತ ಬಿಜೆಪಿ ಸಂಸದರು

ಬೆಂಗಳೂರು, ಮಾ.13- ಬಿಜೆಪಿಯಲ್ಲಿ ಟಿಕೆಟ್ ವಂಚಿತರಾದ ಮೂರು ಮಂದಿ ಸಂಸದರು ಕಾಂಗ್ರೆಸ್ ಬಾಗಿಲು ತಟ್ಟಿದ್ದು, ಅದರಲ್ಲಿ ಮಾಜಿ ಮುಖ್ಯಮಂತ್ರಿಯೊಬ್ಬರ ಹೆಸರಿರುವುದು ತೀವ್ರ ಕುತೂಹಲ ಕೆರಳಿಸಿದೆ.ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಂಪರ್ಕಿಸಲು ಯತ್ನಿಸುತ್ತಿರುವ ಬಿಜೆಪಿ ಸಂಸದರು ತಾವು ಕಾಂಗ್ರೆಸ್ ಸೇರುತ್ತೇವೆ ಎಂಬ ಇಂಗಿತ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಕೆಲವು ಕಡೆ ಕಾಂಗ್ರೆಸ್ ಪಕ್ಷಕ್ಕೆ ಗೆಲ್ಲುವ ಅಭ್ಯರ್ಥಿಗಳ ಕೊರತೆಯಿದೆ. ಕೊಪ್ಪಳ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸಮರ್ಥ ಅಭ್ಯರ್ಥಿಯಿಲ್ಲದೆ ಪರದಾಡುತ್ತಿದೆ. ಹೀಗಾಗಿ ಎರವಲು ನಾಯಕರಿಗೆ ಮಣೆ ಹಾಕಲು ನಿರ್ಧರಿಸಿದೆ. ಈಗಾಗಲೇ ಬಿಜೆಪಿಯಿಂದ ಕಾಂಗ್ರೆಸ್ ಸೇರಿದ ಎಸ್.ಪಿ.ಮುದ್ದಹನುಮೇಗೌಡರಿಗೆ ತುಮಕೂರು ಕ್ಷೇತ್ರದಿಂದ ಸ್ರ್ಪಸಲು ಟಿಕೆಟ್ ಘೋಷಣೆ ಮಾಡಲಾಗಿದೆ. ಅದರ ಬೆನ್ನಲ್ಲೇ ಬಿಜೆಪಿಯ ಮೂವರು ಸಂಸದರು ಕಾಂಗ್ರೆಸ್ ಬಾಗಿಲು ಬಡಿದಿದ್ದಾರೆ.

ಬಿಜೆಪಿಯಲ್ಲಿ ಹಾಲಿ ಸಂಸದರ ಪೈಕಿ 10 ಕ್ಕಿಂತಲೂ ಹೆಚ್ಚು ಮಂದಿಗೆ ಈ ಬಾರಿ ಟಿಕೆಟ್ ನಿರಾಕರಿಸಲಾಗುತ್ತಿದೆ. ಅವರಲ್ಲಿ ಬಹಳಷ್ಟು ಮಂದಿ ಮತ್ತೊಂದು ಅವಗೆ ಚುನಾವಣೆಯಲ್ಲಿ ಸ್ರ್ಪಸಿ ಜನಸೇವೆ ಮಾಡಬೇಕು ಎಂಬ ಅಭಿಲಾಷೆ ಹೊಂದಿದ್ದವರು. ಆದರೆ ಬಿಜೆಪಿಯಲ್ಲಿ ಈಗಾಗಲೇ ತೆಗೆದುಕೊಂಡಿರುವ ನಿರ್ಧಾರದ ಪ್ರಕಾರ ಟಿಕೆಟ್ ಸಿಗುವ ಸಾಧ್ಯತೆಗಳು ಕ್ಷೀಣವಾಗಿವೆ.

ಬಿಜೆಪಿಯಲ್ಲಿ ಅವಕಾಶ ಇಲ್ಲ ಎಂಬ ಸುಳಿವು ಅರಿತಿರುವ ಮಾಜಿ ಮುಖ್ಯಮಂತ್ರಿ ಸೇರಿದಂತೆ ಹಲವರು ಕಾಂಗ್ರೆಸ್ ನಾಯಕರನ್ನು ಸಂಪರ್ಕಿಸು ತ್ತಿದ್ದಾರೆ ಎಂದು ಹೇಳಲಾಗಿದೆ.ಈಗಾಗಲೇ ಹರಿಯಾಣ, ರಾಜಸ್ಥಾನ ಸೇರಿದಂತೆ ಹಲವು ರಾಜ್ಯಗಳಲ್ಲಿ ಟಿಕೆಟ್ ವಂಚಿತ ಬಿಜೆಪಿ ಸಂಸದರು ಕಾಂಗ್ರೆಸ್ ಸೇರಿದ್ದಾರೆ. ಅದರಲ್ಲಿ ಒಬ್ಬರಿಗೆ ಕಾಂಗ್ರೆಸ್ ಟಿಕೆಟ್ ಕೂಡ ಘೋಷಣೆಯಾಗಿದೆ.

ಗೆಲುವನ್ನಷ್ಟೇ ಮಾನದಂಡವಾಗಿಟ್ಟುಕೊಂಡಿರುವ ಕಾಂಗ್ರೆಸ್ಸಿಗರು ಬಿಜೆಪಿಯಿಂದ ಬರುವ ಎರವಲು ನಾಯಕರಿಗೆ ಮಣೆ ಹಾಕಲು ಸಿದ್ದರಿದ್ದಾರೆ ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿಯ ಬಹಳಷ್ಟು ಸಂಸದರು ಕಾಂಗ್ರೆಸ್ ಸೇರುವ ಅವಕಾಶಗಳು ದಟ್ಟವಾಗಿವೆ.

RELATED ARTICLES

Latest News