ಇಂದು ಬೆಳಗಾವಿಗೆ ಜೆ.ಪಿ.ನಡ್ಡಾ ಭೇಟಿ : ಲೋಕಸಭಾ ಅಭ್ಯರ್ಥಿಗಳ ಕುರಿತು ಚರ್ಚೆ

ಬೆಂಗಳೂರು,ಮಾ.4-ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಇಂದು ಆಗಮಿಸುತ್ತಿದ್ದು, ನಾಲ್ಕು ಜಿಲ್ಲೆಗಳ ಪ್ರಮುಖರ ಜೊತೆ ಚರ್ಚೆ ನಡೆಸಲಿದ್ದಾರೆ.ಬೆಳಗಾವಿಯ ವೆಲ್‍ಕಮ್ ಐಟಿಸಿ ಹೋಟೆಲ್‍ನಲ್ಲಿ ರಾತ್ರಿ 9ಕ್ಕೆ ನಡೆಯಲಿರುವ ಈ ಸಭೆಗೆ ಬೆಳಗಾವಿ, ಚಿಕ್ಕೋಡಿ, ವಿಜಯಪುರ ಮತ್ತು ಬಾಗಲಕೋಟೆ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಪ್ರಮುಖರ ಸಭೆ ನಡೆಸಲಾಗುತ್ತದೆ. ಸಭೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ರಾಷ್ಟ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ, ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್, ಕೋರ್ ಕಮಿಟಿ ಸದಸ್ಯರು, ನಾಲ್ಕು ಜಿಲ್ಲೆಗಳ ಪ್ರಮುಖರು … Continue reading ಇಂದು ಬೆಳಗಾವಿಗೆ ಜೆ.ಪಿ.ನಡ್ಡಾ ಭೇಟಿ : ಲೋಕಸಭಾ ಅಭ್ಯರ್ಥಿಗಳ ಕುರಿತು ಚರ್ಚೆ