Sunday, September 15, 2024
Homeರಾಜ್ಯಇಂದು ಮೂರು ಬಿಟ್ಟ ಜನ ಪೀಡಕ ಸರ್ಕಾರ : ಬಿಜೆಪಿ ಕೆಂಡಾಮಂಡಲ

ಇಂದು ಮೂರು ಬಿಟ್ಟ ಜನ ಪೀಡಕ ಸರ್ಕಾರ : ಬಿಜೆಪಿ ಕೆಂಡಾಮಂಡಲ

ಬೆಂಗಳೂರು,ಆ.22- ಜನರ ಪೀಡಕರಂತೆ ವರ್ತಿಸುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಂತವರನ್ನು ನೋಡಿಯೇ ಮೂರು ಬಿಟ್ಟವರು ಊರಿಗೆ ದೊಡ್ಡವರು ಎನ್ನುವ ನಾಣ್ನುಡಿ ಬರೆದಂತೆ ತೋರುತ್ತಿದೆ ಎಂದು ಪ್ರತಿಪಕ್ಷ ಬಿಜೆಪಿ ವಾಗ್ದಳಿ ನಡೆಸಿದೆ.

ಈ ಕುರಿತು ತನ್ನ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ದಿನಕ್ಕೊಂದು ಬೆಲೆ ಏರಿಕೆಯ ಬರೆ ಎಳೆಯುತ್ತಿರುವ ಕಾಂಗ್ರೆಸ್ ಸರ್ಕಾರ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಮ ದರ್ಪದ ಮಾತುಗಳನ್ನು ಆಡುತ್ತಲೇ ಇದೀಗ ಕುಡಿಯುವ ನೀರಿನ ಬೆಲೆ ಏರಿಕೆ ಮಾಡಿ ಬೆಂಗಳೂರಿಗರ ಜೇಬಿಗೆ ಕತ್ತರಿ ಪ್ರಯೋಗಕ್ಕೆ ಮುಂದಾಗಿದ್ದಾರೆ ಎಂದು ಕಿಡಿಕಾರಿದೆ.

ಬೆಂಗಳೂರಿಗೆ ಬದುಕು ಕಟ್ಟಿಕೊಳ್ಳಲು ಬಂದಿರುವ ಜನಸಾಮಾನ್ಯರು ಬೆಲೆ ಏರಿಕೆಯ ಭೂತವಾಗಿರುವ ಈ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೀದಿಗಿಳಿಯುವ ಕಾಲ ದೂರವಿಲ್ಲ! ಎಂದು ಎಚ್ಚರಿಕೆ ಕೊಡಲಾಗಿದೆ.

RELATED ARTICLES

Latest News