Saturday, August 9, 2025
Homeರಾಜ್ಯಪ್ರಧಾನಿ ನರೇಂದ್ರ ಮೋದಿ ಸ್ವಾಗತಕ್ಕೆ ಬಿಜೆಪಿ ತಯಾರಿ

ಪ್ರಧಾನಿ ನರೇಂದ್ರ ಮೋದಿ ಸ್ವಾಗತಕ್ಕೆ ಬಿಜೆಪಿ ತಯಾರಿ

BJP prepares to welcome Prime Minister Narendra Modi

ಬೆಂಗಳೂರು,ಆ.9– ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಬೆಂಗಳೂರಿಗೆ ಆಗಮಿಸುತ್ತಿರುವ ಹಿನ್ನಲೆಯಲ್ಲಿ ಮಾರ್ಗದ ಪ್ರತಿಯೊಂದು ನಿಲ್ದಾಣದಲ್ಲಿಯೂ ಸ್ವಾಗತ ಕೋರಲು ಬಿಜೆಪಿ ತಯಾರಿ ಮಾಡಿಕೊಂಡಿದೆ.

ಮೇಖ್ರಿ ವೃತ್ತ, ಚಾಲುಕ್ಯ ವೃತ್ತ, ಸಂಗೊಳ್ಳಿ ರಾಯಣ್ಣ ವೃತ್ತ, ಸೌತ್‌ಎಂಡ್‌ ವೃತ್ತ ಹಾಗೂ ನಮ ಮೆಟ್ರೋ ಹಳದಿ ಮಾರ್ಗದ ಎಲ್ಲಾ 16 ನಿಲ್ದಾಣಗಳ ಬಳಿ ಸಾವಿರಾರು ಕಾರ್ಯಕರ್ತರು ಪ್ರಧಾನಿಯವರನ್ನು ಸ್ವಾಗತಿಸಲಿದ್ದಾರೆ.

ಪ್ರಧಾನಿ ಮೋದಿ ಆಗಮನ ಹಿನ್ನೆಲೆ ಬಿಜೆಪಿಯಿಂದ ಹಮ್ಮಿಕೊಂಡಿದ್ದ ರೋಡ್‌ ಶೋವನ್ನು ಸಮಯದ ಕೊರತೆಯಿಂದ ರದ್ದು ಮಾಡಲಾಗಿದೆ. ಹೀಗಾಗಿ, ಪ್ರತಿ ನಿಲ್ದಾಣದಲ್ಲಿ ಬಿಜೆಪಿ ಕಾರ್ಯಕರ್ತರನ್ನು ಹೆಚ್ಚಿನ ಸಂಖ್ಯೆಯಲ್ಲಿ ಸೇರಿಸಿ ಮೋದಿಗೆ ಸ್ವಾಗತ ಕೋರಲು ನಿರ್ಧರಿಸಲಾಗಿದೆ.

ಬ್ಯಾರಿಕೇಡ್‌ ಅಳವಡಿಕೆ:
ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮನ ಹಿನ್ನೆಲೆ ರಸ್ತೆಯ ಇಕ್ಕೆಲಗಳಲ್ಲಿ ಬ್ಯಾರಿಕೇಡ್‌ ಅಳವಡಿಕೆ ಮಾಡಲಾಗಿದೆ. ಮೆಜೆಸ್ಟಿಕ್‌ ಏಖ ರೈಲ್ವೇ ನಿಲ್ದಾಣದಲ್ಲಿ ವಂದೇ ಭಾರತ್‌ ಉದ್ಘಾಟನೆ ಹಿನ್ನೆಲೆ ಮೆಜೆಸ್ಟಿಕ್‌ ಸುತ್ತಮುತ್ತ ಫ್ಲೆಕ್‌್ಸ, ಬ್ಯಾನರ್‌ ಅಳವಡಿಕೆ ಮಾಡಲಾಗಿದೆ.

RELATED ARTICLES

Latest News