ಫೆ.20ರಂದು ಶೃಂಗೇರಿ ಮಠಕ್ಕೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಭೇಟಿ

Social Share

ಬೆಂಗಳೂರು, ಫೆ.16- ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಬಿಜೆಪಿ ಹೈಕಮಾಂಡ್ ನಾಯಕರು ಹೆಚ್ಚು ಭೇಟಿ ನೀಡುತ್ತಿದ್ದು, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಫೆ.20ರಂದು ಶೃಂಗೇರಿ ಮಠಕ್ಕೆ ಭೇಟಿ ನೀಡಲಿದ್ದಾರೆ.

ಈಗಾಗಲೇ ಶೃಂಗೇರಿ ಮಠದ ಶ್ರೀಗಳ ಭೇಟಿಗೆ ಸಮಯಾವಕಾಶವನ್ನು ಜೆ.ಪಿ. ನಡ್ಡಾ ಕೇಳಿರುವ ವಿಚಾರ ಬಿಜೆಪಿ ಮೂಲಗಳಿಂದ ತಿಳಿದುಬಂದಿದೆ.ಜಿಲ್ಲೆಯ ಶೃಂಗೇರಿ ಶಾರದಾ ಮಠಕ್ಕೆ ಫೆ.20ರಂದು ರಾತ್ರಿ ಜೆ.ಪಿ.ನಡ್ಡಾ ಭೇಟಿ ನೀಡಲಿದ್ದಾರೆ.

ಶೃಂಗೇರಿ ಶಾರದಾಂಬೆ ದರ್ಶನದ ನಂತರ ಶ್ರೀ ಜಗದ್ಗುರುಗಳನ್ನು ಜೆ.ಪಿ.ನಡ್ಡಾ ಅವರು ಭೇಟಿಯಾಗಿ ಆಶೀರ್ವಾದ ಪಡೆಯಲಿದ್ದಾರೆ. ಅಂದು ಕೊಪ್ಪ ಪಟ್ಟಣದಲ್ಲಿ ನಡೆಯಲಿರುವ ಅಡಿಕೆ ಬೆಳೆಗಾರರ ಸಮಾವೇಶದಲ್ಲಿ ಭಾಗವಹಿಸಿದ ಬಳಿಕ ಶೃಂಗೇರಿ ಮಠಕ್ಕೆ ಅವರು ಭೇಟಿ ನೀಡಲಿದ್ದಾರೆ.

ಶೃಂಗೇರಿ ಮಠದ ಮೇಲೆ ದಾಳಿ ಮಾಡಿದ ಪೇಶ್ವೆ ಸಮುದಾಯಕ್ಕೆ ಸಂಬಂಧಪಟ್ಟವರನ್ನು ಬಿಜೆಪಿ ರಾಜ್ಯದಲ್ಲಿ ಸಿಎಂ ಮಾಡಲು ಹೊರಟಿದೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಜೆ.ಪಿ.ನಡ್ಡಾ ಶೃಂಗೇರಿಗೆ ಭೇಟಿ ನೀಡಿ ಜಗದ್ಗುರುಗಳೊಂದಿಗೆ ಮಾತನಾಡಲು ಮುಂದಾಗಿರುವುದು ಕುತೂಹಲ ಮೂಡಿಸಿದೆ.

ಜಿಲ್ಲೆಯ ಪ್ರಸಿದ್ಧ ಶೃಂಗೇರಿ ಶಾರದಾ ಪೀಠದಲ್ಲಿ ವಿಶೇಷ ಕಾರ್ಯಕ್ರಮಗಳು ನಡೆಯುತ್ತಿವೆ. ಶುಕ್ರವಾರದಿಂದ (ನಾಳೆಯಿಂದ) ಈ ಕಾರ್ಯಕ್ರಮಗಳಿಗೆ ಅಕೃತವಾಗಿ ಚಾಲನೆ ಸಿಕ್ಕಿದ್ದು, ಫೆ.21ರ ವರೆಗೆ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಶೃಂಗೇರಿ ಸಂಸ್ಥಾನದ ವತಿಯಿಂದ ಶ್ರೀ ಭವಾನಿ ಮಲಹಾನಿಕರೇಶ್ವರ ಸ್ವಾಮಿ ದೇವಾಲಯದ ಜೀರ್ಣೋದ್ಧಾರ ಮಾಡಲಾಗಿದ್ದು, ಮಹಾಕುಂಭಾಭಿಷೇಕ ಸೇರಿದಂತೆ ಲಕ್ಷ ಮೋದಕ ಮಹಾಗಣಪತಿ ಹೋಮ, ಅತಿರುದ್ರಮಹಾಯಾಗ ಸಂಕಲ್ಪ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ಜರುಗುತ್ತಿವೆ.

ನಾಳೆ ವಿದ್ಯಾಶಂಕರ ದೇವರು ಶ್ರೀ ಭವಾನಿ ಮಲಹಾನಿಕರೇಶ್ವರ ಬೆಟ್ಟಕ್ಕೆ ಚಿತ್ತೈಸುವ ವಿಶೇಷ ಕಾರ್ಯಕ್ರಮ ನಡೆಯಲಿದೆ. ಫೆ.18ರಂದು ಮಹಾ ಶಿವರಾತ್ರಿಯ ಬೆಳಗ್ಗೆ 7ರಿಂದ ಜಗದ್ಗುರು ಶ್ರೀ ಶಂಕರಾಚಾರ್ಯರ ಸನ್ನಿಯಲ್ಲಿ ಶತರುದ್ರಾಭಿಷೇಕ ನಡೆಯಲಿದೆ.

ಮಧ್ಯಾಹ್ನದ ವೇಳೆಗೆ ಶ್ರೀ ಭವಾನಿ ಮಲಹಾನಿಕರೇಶ್ವರ ಸನ್ನಿಯಲ್ಲಿ ಜಗದ್ಗುರುಗಳಿಂದ ಮಹಾಪೂಜೆ ಹಮ್ಮಿಹೊಳ್ಳಲಾಗಿದೆ. ಅದಕ್ಕೂ ಮುನ್ನ ಜಗದ್ಗುರುಗಳ ಗುರು ನಿವಾಸದಲ್ಲಿ ಬೆಳಗ್ಗೆ 6.30ರಿಂದ ಚಂದ್ರಮೌಳೇಶ್ವರ ಸ್ವಾಮಿಗೆ ಚಾತುರ್ಯಾಮ ಪೂಜೆ ನೆರವೇರಲಿದೆ.

ಫೆ.20ರಂದು ಶ್ರೀ ಭವಾನಿ ಮಲಹಾನಿಕರೇಶ್ವರ ಸ್ವಾಮಿಗೆ ಲಕ್ಷ ಮಲ್ಲಿಕಾರ್ಚನೆ, ಜಗದ್ಗುರುಗಳ ಉಪಸ್ಥಿತಿಯಲ್ಲಿ ಮಹಾನ್ ರಾಜಸನ ಮಹಾನೀರಾಜನ ಪ್ರಾರ್ಥನೆ, ರಥಾರೋಹಣ ಹಾಗೂ ಸಂಜೆ ಮಹಾ ರಥೋತ್ಸವ ಕಾರ್ಯಕ್ರಮ ನಡೆಯಲಿದೆ.

ಕೊನೆಯ ದಿನವಾದ ಫೆ.21ರಂದು ಬೆಳಗ್ಗೆ ಓಕಳಿ ಉತ್ಸವ, ಅವಭ್ರುತ ಸ್ನಾನ, ಜಗದ್ಗುರುಗಳ ಸಾನಿಧ್ಯದಲ್ಲಿ ಅತಿರುದ್ರ ಮಹಾಯಾಗದ ಪೂರ್ಣಾವತಿ, ಸಂಜೆ ಶ್ರೀ ಭವಾನಿ ಮಲಹಾನಿಕರೇಶ್ವರ ದೇವರ ಸಂಧಾನೋತ್ಸವ, ತೆಪೆÇ್ಪೀತ್ಸವ ಹಾಗೂ ಧ್ವಜಾರೋಹಣ ಕಾರ್ಯಕ್ರಮ ಜರುಗಲಿದೆ.

#BJPPresident, #JPNadda, #visit, #SringeriTemple, #SringeriMutt,

Articles You Might Like

Share This Article