ಬೆಂಗಳೂರು, ಫೆ.28- ವಿಧಾನಸೌಧದಲ್ಲೇ ಪಾಕ್ ಪರ ಘೋಷಣೆ ಕೂಗಿರುವ ದೇಶದ್ರೋಹಿಯನ್ನು ಬಂಧಿಸದೆ ಕಾಲಹರಣ ಮಾಡಿರುವ ಸರ್ಕಾರದ ಧೋರಣೆ ಖಂಡಿಸಿ ಇಂದು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸಿದೆ. ತುಮಕೂರಿನಲ್ಲಿಂದು ನೂರಾರು ಮಂದಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದ ಸಂದರ್ಭದಲ್ಲಿ ನಡೆದ ತಳ್ಳಾಟ-ನೂಕಾಟದಲ್ಲಿ ಪೊಲೀಸರು ಕೂಡ ಗಾಯಗೊಂಡಿದ್ದಾರೆ.
ಸರ್ಕಾರ ಇಂತಹ ಕಿಡಿಗೇಡಿಗಳಿಗೆ ಕುಮ್ಮಕ್ಕು ನೀಡುತ್ತಿದೆ. ಕೂಡಲೇ ಸಿಎಂ ರಾಜೀನಾಮೆ ನೀಡಬೇಕು ಎಂದು ಪಟ್ಟು ಹಿಡಿದು ಘೋಷಣೆ ಕೂಗಿ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ಕಚೇರಿಗೆ ತೆರಳುವ ಮುನ್ನವೇ ಪೊಲೀಸರು ಅವರನ್ನು ತಡೆಯಲು ಮುಂದಾದಾಗ ಕೆಲಕಾಲ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿತ್ತು. ಮೈಸೂರಿನಲ್ಲಿ ಪ್ರತಿಭಟನೆಗೆ ಮುಂದಾದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಧೋರಣೆ ಖಂಡಿಸಿ ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಾರೆ.
ರಾಜ್ಯಸಭಾ ಚುನಾವಣೆ : ಮತದಾನ ಮಾಡದಿರುವುದಕ್ಕೆ ಸ್ಪಷ್ಟನೆ ನೀಡಿದ ಹೆಬ್ಬಾರ್
ಹಾಸನದಲ್ಲಿ ರಸ್ತೆಗಿಳಿದ ಬಿಜೆಪಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಮುಂದೆ ಜಮಾಯಿಸಿ ನಂತರ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದರು. ಈ ವೇಳೆ ಪೊಲೀಸರು ಅವರನ್ನು ತಡೆದು ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ. ಇದೇ ರೀತಿ ಚಿಕ್ಕಮಗಳೂರಿನಲ್ಲೂ ಬಿಜೆಪಿ ಕಾರ್ಯಕರ್ತರು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದು, ಇದಕ್ಕೆ ಜೆಡಿಎಸ್ ಕಾರ್ಯಕರ್ತರು ಕೂಡ ಸಾಥ್ ನೀಡಿದ್ದಾರೆ.
ಗುಜರಾತ್‍ನ ಕರಾವಳಿಯಲ್ಲಿ ಬರೋಬ್ಬರಿ 3,300 ಕೆಜಿ ಡ್ರಗ್ಸ್ ವಶ
ಸರ್ಕಾರದ ವಿರುದ್ಧ ಕ್ಕಾರದ ಘೋಷಣೆ ಕೂಗಿ ದೇಶದ್ರೋಹಿಗಳನ್ನು ಯಾವುದೇ ಕಾರಣಕ್ಕೂ ಸುಮ್ಮನೆ ಬಿಡಬಾರದು. ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದರು. ಇದೇ ರೀತಿ ಉತ್ತರ ಕರ್ನಾಟಕ ಭಾಗದಲ್ಲೂ ಪ್ರತಿಭಟನೆ ಕಾವು ಹೆಚ್ಚಾಗಿದೆ. ಪೊಲೀಸರು ಕಾಂಗ್ರೆಸ್ ಕಚೇರಿ ಹಾಗೂ ಶಾಸಕರ ಮನೆಗಳಿಗೆ ಬಿಗಿಭದ್ರತೆ ನೀಡಿದ್ದಾರೆ.